ಸುದ್ದಿಮೂಲ ವಾರ್ತೆ ಬೆಂಗಳೂರು, ಜ.29:
ಬಳ್ಳಾಾರಿಯಲ್ಲಿ ಇತ್ತೀಚೆಗೆ ನಡೆದ ಬ್ಯಾಾನರ್ ವಿವಾದ, ಹಿಂಸಾಚಾರ ಹಾಗೂ ಗುಂಡಿನ ದಾಳಿ ಪ್ರಕರಣಕ್ಕೆೆ ಸಂಬಂಧಿಸಿದಂತೆ ವಿಧಾನಸಭೆ ಅಧಿವೇಶನದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಿ ಅವರು ಅಕ್ಷರಶಃ ಗುಡುಗಿದ್ದಾರೆ. ಆಡಳಿತ ಪಕ್ಷದ ವೈಲ್ಯಗಳನ್ನು ಎತ್ತಿಿಹಿಡಿಯುತ್ತಲೇ, ಮುಖ್ಯಮಂತ್ರಿಿ ಸಿದ್ದರಾಮಯ್ಯನವರ ಬಗ್ಗೆೆ ಮೃದು ಧೋರಣೆ ತೋರಿದ ರೆಡ್ಡಿಿ, ’ರಾಜ್ಯದ ಒಳಿತಿಗಾಗಿ ನೀವೇ ಪೂರ್ಣ ಐದು ವರ್ಷಗಳ ಕಾಲ ಮುಖ್ಯಮಂತ್ರಿಿಯಾಗಿ ಮುಂದುವರಿಯಿರಿ, ಆದರೆ ಬಳ್ಳಾಾರಿಯಲ್ಲಿ ನಡೆಯುತ್ತಿಿರುವ ಗನ್ ಮತ್ತು ಬಾಂಬ್ ಸಂಸ್ಕೃತಿಯನ್ನು ಮಟ್ಟಹಾಕಿ’ ಎಂದು ಮನವಿ ಮಾಡಿದರು.
ಸಿಎಂಗೆ ಪೂರ್ಣ ಅವಧಿಯ ಬೆಂಬಲ, ಡಿಸಿಎಂ ವಿರುದ್ಧ ಕಿಡಿ:
ಸದನದಲ್ಲಿ ಮಾತನಾಡಿದ ಜನಾರ್ದನ ರೆಡ್ಡಿಿ, ಮುಖ್ಯಮಂತ್ರಿಿ ಸಿದ್ದರಾಮಯ್ಯನವರನ್ನು ಉದ್ದೇಶಿಸಿ ಮಹತ್ವದ ಹೇಳಿಕೆ ನೀಡಿದರು. ’ನೀವು ಪಾದಯಾತ್ರೆೆ ಮಾಡಿದ್ದೀರಿ, ಕಷ್ಟಪಟ್ಟು ಮೇಲೆ ಬಂದಿದ್ದೀರಿ. ನಾನು ಜೈಲಿಗೆ ಹೋಗುವುದು, ಮತ್ತೆೆ ಆಯ್ಕೆೆಯಾಗಿ ಬರುವುದು ಎಲ್ಲವೂ ಭಗವಂತನ ಇಚ್ಛೆೆ. ಆದರೆ, ನೀವು ಅಧಿಕಾರವನ್ನು ಬಳಸಿಕೊಂಡು ಅಭಿವೃದ್ಧಿಿ ಮಾಡಬೇಕು. ನೀವೇ ಮುಂದಿನ ಎರಡೂವರೆ ವರ್ಷಗಳ ಕಾಲವೂ ಸಿಎಂ ಆಗಿ ಮುಂದುವರಿಯಬೇಕು ಎಂದು ಕೈಜೋಡಿಸಿ ಕೇಳಿಕೊಳ್ಳುತ್ತೇನೆ’ ಎಂದರು.
ಇದೇ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ಹರಿಹಾಯ್ದ ರೆಡ್ಡಿಿ, ’ಘಟನೆ ನಡೆದಾಗ ಸಿಎಂ ಅವರು ಗಂಭೀರವಾಗಿದ್ದರು, ಆದರೆ ಡಿಸಿಎಂ ಬಾಯಿಗೆ ಬಂದಂತೆ ಮಾತನಾಡಿದರು. ಬಳ್ಳಾಾರಿಗೆ ಬಂದು ಆರೋಪಿ ಶಾಸಕರ ಪರ ನಿಲ್ಲುತ್ತೇನೆ ಎಂದರು. ನಾನು ರಕ್ಷಣೆ ಕೇಳಿದರೆ ಅಮೆರಿಕಾದಿಂದ ರಕ್ಷಣೆ ಪಡೆಯಲಿ ಎಂದು ವ್ಯಂಗ್ಯವಾಡಿದರು’ ಎಂದು ಆಕ್ರೋೋಶ ವ್ಯಕ್ತಪಡಿಸಿದರು.
ಬಳ್ಳಾಾರಿಯಲ್ಲಿ ಗನ್, ಬಾಂಬ್ ಮಾತಾಡುತ್ತಿಿದೆ :
ಬಳ್ಳಾಾರಿ ಘಟನೆಯನ್ನು ಎಳೆಎಳೆಯಾಗಿ ಬಿಚ್ಚಿಿಟ್ಟ ಜನಾರ್ದನ ರೆಡ್ಡಿಿ, ’ಬಳ್ಳಾಾರಿಯಲ್ಲಿ ಪ್ರಜಾಪ್ರಭುತ್ವವಿಲ್ಲ, ಅಲ್ಲಿ ಬಾಂಬು ಮತ್ತು ಗನ್ ಮಾತನಾಡುತ್ತಿಿದೆ. ನಾನು ಗಂಗಾವತಿಯಿಂದ ಬರುವಾಗ ಮನೆ ಮುಂದೆ ಬ್ಯಾಾರ್ನ ನೋಡಿದೆ. ಅದನ್ನು ತೆಗೆಯುವಂತೆ ಸೂಚಿಸಿದ್ದೆ. ಆದರೆ ಮತ್ತೆೆ 40 ಜನರು ಬಂದು ಬ್ಯಾಾರ್ನ ಕಟ್ಟಲು ಮುಂದಾದರು. ಪೊಲೀಸರಿಗೆ ಕರೆ ಮಾಡಿದರೂ ಪ್ರಯೋಜನವಾಗಲಿಲ್ಲ. ಇದು ಸ್ಪಷ್ಟವಾಗಿ ಗುಪ್ತಚರ ಇಲಾಖೆಯ ವೈಲ್ಯ’ ಎಂದು ಆರೋಪಿಸಿದರು.
ಬಳ್ಳಾರಿ ರೌಡಿಸಂ ಮಟ್ಟಹಾಕಿ: ಸಿದ್ದರಾಮಯ್ಯಗೆ ಮನವಿ ಮಾಡಿದ ಜನಾರ್ದನ ರೆಡ್ಡಿ

