ಸುದ್ದಿಮೂಲ ವಾರ್ತೆ ಬೆಂಗಳೂರು, ಜ.03:
ಪಕ್ಷ ನಮ್ಮ ಶಾಸಕ ಭರತ್ ರೆಡ್ಡಿಿ ಬೆನ್ನಿಿಗೆ ನಿಲ್ಲಲಿದೆ. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆೆ ಕಾರಣ ಯಾರು ಎಂಬುದು ತನಿಖೆಯಿಂದ ಹೊರಬರಲಿದ್ದು, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪುು ಮಾಡಿದವರಿಗೆ ಶಿಕ್ಷೆ ಆಗುತ್ತದೆ ಎಂದು ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಜಂಟಿ ಮಾಧ್ಯಮಗೋಷ್ಠಿಿಯಲ್ಲಿ ಮಾತನಾಡಿದ ಅವರು, ಜನಾರ್ದನ ರೆಡ್ಡಿಿ ಬಳ್ಳಾಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ. ಸಣ್ಣ ಅಹಿತಕರ ಘಟನೆ ಆಗಿರಲಿಲ್ಲ. ಸಣ್ಣ ಎ್ಐಆರ್ ಇರಲಿಲ್ಲ. ಅವರು ಬಂದಮೇಲೆ ಗಲಭೆ ಆಗಿದೆ. ಹೀಗಾಗಿ ಅವರಿಗೆ ಮಾತನಾಡುವ ಹಕ್ಕಿಿಲ್ಲ ಎಂದು ಹೇಳಿದರು.
ಮೊದಲ ಬಾರಿಗೆ ಬಳ್ಳಾಾರಿಯಲ್ಲಿ ನಮ್ಮ ಸರ್ಕಾರ ವಾಲ್ಮೀಕಿ ಮಹರ್ಷಿಯವರ ಪುತ್ಥಳಿ ನಿರ್ಮಿಸುತ್ತಿಿದೆ. ನಮ್ಮ ಶಾಸಕರು ಅದರ ಜವಾಬ್ದಾಾರಿ ತೆಗೆದುಕೊಂಡಿದ್ದಾರೆ. ನಗರದ ಎಲ್ಲೆಡೆ ಅದರ ಪೋರ್ಸ್ಟ ಗಳನ್ನು ಹಾಕಿದ್ದಾರೆ. ಅದರಲ್ಲಿ ತಪ್ಪೇನಿದೆ? ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆೆ ಕಾರಣ ಬಿಜೆಪಿಯವರು. ಈ ಪ್ರಕರಣದ ತನಿಖೆ ನಡೆಯುತ್ತಿಿದ್ದು, ಈ ಬಗ್ಗೆೆ ಸಿಎಂ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಿಗಳು ಮಾತನಾಡಿದ್ದಾರೆ. ಪೊಲೀಸರ ತನಿಖೆಯಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಪಕ್ಷದ ವತಿಯಿಂದ ಈ ಘಟನೆ ಬಗ್ಗೆೆ ಅಧ್ಯಯನ ನಡೆಸಲು ಹೆಚ್.ಎಂ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ನಿಯೋಗ ಕಳುಹಿಸಿದ್ದೇವೆ. ಬಿಜೆಪಿಯವರಿಗೆ ಬಳ್ಳಾಾರಿಯಲ್ಲಿ ನಮ್ಮ ಪಕ್ಷದ ಗೆಲುವು ಅರಗಿಸಿಕೊಳ್ಳಲು ಆಗುತ್ತಿಿಲ್ಲ. ಮತ್ತೆೆ ಬಳ್ಳಾಾರಿಯಲ್ಲಿ ತಮ್ಮ ರಿಪಬ್ಲಿಿಕ್ ತರಲು ಪ್ರಯತ್ನಿಿಸುತ್ತಿಿದ್ದಾರೆ. ನಾವು ಅದಕ್ಕೆೆ ಅವಕಾಶ ನೀಡುವುದಿಲ್ಲ. ನಮ್ಮ ಕಾರ್ಯಕರ್ತರಿಗೆ ನಮ್ಮ ಸಿಎಂ ಈಗಾಗಲೇ ನಿರ್ದೇಶನ ನೀಡಿದ್ದಾರೆ. ಜನಾರ್ದನ ರೆಡ್ಡಿಿ ಅವರು ಅಲ್ಲಿಗೆ ಬರುವವರೆಗೂ ಅಲ್ಲಿ ಒಂದೇ ಒಂದು ಗಲಾಟೆ ನಡೆದಿರಲಿಲ್ಲ ಎಂದು ಹೇಳಿದರು.
ಈ ಪ್ರಕರಣದ ಬೆನ್ನಲ್ಲೇ ಎಲ್ಲಾ ಖಾಸಗಿ ಗನ್ ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಗನ್ ವಿತರಣೆ ವಿಚಾರದಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳನ್ನು ಸಿದ್ಧಪಡಿಸಿ, ನಿಯಮಾವಳಿ ರೂಪಿಸುತ್ತೇವೆ ಎಂದು ತಿಳಿಸಿದರು.
ಶಾಸಕರಾದ ಭರತ್ ರೆಡ್ಡಿಿ ಅವರು ಮನೆಗೆ ಬೆಂಕಿ ಹಚ್ಚುವ ಬಗ್ಗೆೆ ಮಾತನಾಡಿದ್ದು, ಕೆಪಿಸಿಸಿ ಅಧ್ಯಕ್ಷರಾಗಿ ನೀವು ಅದನ್ನು ಒಪ್ಪುುತ್ತೀರಾ ಎಂದು ಕೇಳಿದಾಗ, ಯಾರೂ ಮನೆಗೆ ಬೆಂಕಿ ಹಚ್ಚುವುದಿಲ್ಲ. ಅದನ್ನು ಒಪ್ಪುುವುದಿಲ್ಲ. ಮೊದಲು ಅವರ ಹೇಳಿಕೆ ಏನಿದೆ ಎಂದು ಪರಿಶೀಲನೆ ಮಾಡುತ್ತೇನೆ ಎಂದರು.
ಜನಾರ್ದನ ರೆಡ್ಡಿಿ ಡ್ರಾಾಮಾ ಮಾಸ್ಟರ್. ಅವರು ಮೊದಲೇ ಸಿನಿಮಾ ನಿರ್ಮಾಪಕರಲ್ಲವೇ? ಡ್ರಾಾಮಾ ಮಾಡುತ್ತಾಾರೆ. ಕೋಟೆ ನಿರ್ಮಿಸಿಕೊಂಡು ನೂರು ಜನ ಭದ್ರತಾ ಸಿಬ್ಬಂದಿ ಹೊಂದಿರುವವರನ್ನು ಯಾರು ಹತ್ಯೆೆ ಮಾಡುತ್ತಾಾರೆ? ಬದಲಿಗೆ ಜನರಿಗೆ ಬೇರೆಯದೇ ರೀತಿಯ ಭಯವಿದೆ. ಜನಾರ್ದನ ರೆಡ್ಡಿಿ ಅವರ ಕುಟುಂಬದವರಿಗೆ ಸೋಲು ಅರಗಿಸಿಕೊಳ್ಳಲು ಆಗುತ್ತಿಿಲ್ಲ. ಅದಕ್ಕೆೆ ಈ ರೀತಿ ಆರೋಪ ಮಾಡುತ್ತಿಿದ್ದಾರೆ. ಯಾರ ಇತಿಹಾಸ ಏನಿದೆ ಎಂಬುದನ್ನು ನೀವೇ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

