ಸುದ್ದಿಮೂಲ ವಾರ್ತೆ
ಕೆ.ಆರ್.ಪುರ, ಏ.12: ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ದುಡಿಯುವ ನಿಷ್ಠಾವಂತ ಕಾರ್ಯಕರ್ತರಿಗೆ ಬಿಜೆಪಿ ಪಕ್ಷದಲ್ಲಿ ಉತ್ತಮ ಸ್ಥಾನಮಾನ ದೊರೆಯುತ್ತದೆ ಎಂದು ಪಾಲಿಕೆ ಮಾಜಿ ಸದಸ್ಯ ಬಿ.ಎನ್.ಜಯಪ್ರಕಾಶ್ ಹೇಳಿದರು.
ಕೆಆರ್ ಪುರ ಸಮೀಪದ ಬಸವನಪುರ ವಾರ್ಡ್ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ವಿಧಾನಸಭಾ ಚುನಾವಣೆ ಪೂರ್ವ ಸಿದ್ದತೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು, ಬಿಜೆಪಿ ಪಕ್ಷ ಇತರೆ ಪಕ್ಷಗಳಗಿಂತ ಭಿನ್ನವಾಗಿದ್ದು, ಪಕ್ಷ ಸಂಘಟನೆ ಶ್ರಮಿಸುತ್ತಿರುವ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಉನ್ನತ ಸ್ಥಾನಮಾನ ನೀಡುವುದರ ಜೊತೆಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡುತ್ತಿರುವುದು ಈಗ ಮೊದಲನೇ ಪಟ್ಟಿಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಮಣೆ ಹಾಕಿರುವುದು ಸಾಬೀತಾಗಿದೆ ಎಂದು ತಿಳಿಸಿದರು.
ಕೆಆರ್ ಪುರ ಕ್ಷೇತ್ರದಲ್ಲಿ ನಗರಾಭಿವೃದ್ಧಿ ಸಚಿವ ಬಿಜೆಪಿ ಅಭ್ಯರ್ಥಿಯಾಗಿರುವ ಬೈರತಿ ಬಸವರಾಜ ಅವರನ್ನು ಮೇ 10 ರಂದು ನಡೆಯುವ ಚುನಾವಣೆಯಲ್ಲಿ ಮತ ನೀಡುವ ಮೂಲಕ ಬೆಂಗಳೂರು 28 ವಿಧಾನಸಭಾ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಅಂತರದಿಂದ ಗೆಲ್ಲಿಸಿಕೊಂಡು ಬರಲು ಪ್ರತಿಯೊಬ್ಬರೂ ಶಕ್ತಿ ಮೀರಿ ಶ್ರಮೀಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕೆಆರ್ ಪುರ ಕ್ಷೇತ್ರದ ಮಹಿಳಾ ಅಧ್ಯಕ್ಷೆ ಮಂಜುಳಾದೇವಿ,ಪ್ರಧಾನ ಕಾರ್ಯದರ್ಶಿ ಶ್ರೀರಾಮಲು,ಮಹಿಳಾ ಪ್ರಧಾನ ಕಾರ್ಯದರ್ಶಿ ಮಮತಾ, ವಾರ್ಡ ಅಧ್ಯಕ್ಷರಾದ ಶಿವಕುಮಾರ್, ಲಕ್ಷೀ ಮತ್ತಿತರರು ಹಾಜರಿದ್ದರು.