ಸುದ್ದಿಮೂಲವಾರ್ತೆ
ಕೊಪ್ಪಳ,ಆ.23: ರಾಜ್ಯದ ಸರಕಾರ ಪಂಚಮಸಾಲಿ ಸಮಾಜಕ್ಕೆ ದುಡಿದವರಿಗೆ ಸಚಿವ ಸ್ಥಾನ ನೀಡಬೇಕಿತ್ತು ಈಗ ಇಬ್ಬರಿಗೆ ಸಚಿವ ಸ್ಥಾನ ನೀಡಿದೆಸಮಾಜಕ್ಕಾಗಿ ದುಡಿದ ಹೆಬ್ಬಾಳಕರ್. ,ವಿಜಯಾನಂದ ಕಾಶಪ್ಪನವರ, ವಿನಯ ಕುಲಕರ್ಣಿ, ಬಿ ಆರ್ ಪಾಟೀಲರನ್ನು ಸಚಿವರನ್ನಾಗಿ ಮಾಡಬೇಕಿತ್ತು ಎಂದು ಪಂಚಮಸಾಲಿ ಸಮಾಜದ ಕೂಡಲಸಂಗಮದ ಪೀಠದ ಶ್ರೀಯಜಮೃತ್ಯುಂಜಯ ಸ್ವಾಮಿಜಿ ಹೇಳಿದರು.
ಅವರು ಇಂದು ಕೊಪ್ಪಳದಲ್ಲಿ ಮಾತನಾಡಿ ಈಗ ಶಿವಾನಂದ ಪಾಟೀಲರನ್ನು ಮಾಡಿದ್ದು ಎಷ್ಟು ಸರಿ ಎಂದು ಸಮಾಜದವರು ಕೇಳುತ್ತಿದ್ದಾರೆ.ಮುಂದಿನ ದಿನಗಳಲ್ಲಿ ರಾಜ್ಯ ಸಚಿವ ಸಂಪುಟಕ್ಕೆ ಇನ್ನೂ ಮೂವರನ್ನು ಸೇರಿಸಿಕೊಳ್ಳಬೇಕು. ಪಂಚಮಸಾಲಿ ಸಮಾಜದ ಶಕ್ತಿ ಏನು ಎಂಬುವುದು ಈ ಚುನಾವಣೆಯಲ್ಲಿ ಗೊತ್ತಾಗಿದೆ. ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯ ಏನೇ ಇರಲಿ. ಪಂಚಮಸಾಲಿಗಳಿಗೆ ಹೆಚ್ಚಿನ ಸ್ಥಾನ ನೀಡಬೇಕು ಎಂದು ಹೇಳಿದರು.
ಇದೇ ವೇಳೆ ಶ್ರಾವಣ ಮಾಸದಲ್ಲಿ ಪಂಚಮಸಾಲಿಗೆ ಮೀಸಲಾತಿಗಾಗಿ ಮತ್ತೆ ಹೋರಾಟ ಆರಂಭ ಮಾಡಲಾಗುವುದು. ಇಷ್ಟರಲ್ಲಿಯೇ ಪಂಚಮಸಾಲಿ ಸಮಾಜದ ಮುಖಂಡರ ಸಭೆ ನಡೆಸಲಾಗುವುದು. ಶ್ರಾವಣ ಮಾಸದಲ್ಲಿ ಪ್ರತಿ ತಾಲೂಕಿನಲ್ಲಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಮೀಸಲಾತಿಗಾಗ. ಜಾಗೃತಿ ಮೂಡಿಸಲಾಗುವುದು. ಪಂಚಮಸಾಲಿಗೆ 2 ಎ ಮೀಸಲಾತಿ ನೀಡಬೇಕು. ಇಲ್ಲಿವೆ ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಬೇಕು. ಈ ನಿಟ್ಟಿನಲ್ಲಿ ಇಂದಿನ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ಪಕ್ಷಕ್ಕೆ ಪಂಚಮಸಾಲಿ ಸಮಾಜದ ಶಕ್ತಿ ಏನು ಎಂಬುವುದು ಗೊತ್ತಾಗಿದೆ. ಮುಖ್ಯಮಂತ್ರಿಗಳ ಮೇಲೆ ನಾವು ಭರವಸೆ ಇಟ್ಟುಕೊಂಡಿದ್ದೇವೆ. 2024 ರ ಲೋಕಸಭಾ ಚುನಾವಣೆಯೊಳಗೆ ಮೀಸಲಾತಿಯ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಇದೇ ವೇಳೆ ಜಗತ್ತೇ ಹೆಮ್ಮೆ ಪಡುವಂತೆ ಇಂದು ಚಂದ್ರಯಾನ -3 ಯಶಸ್ವಿಯಾಗಲಿದೆ. ವಿಶ್ವದಲ್ಲಿ ಭಾರತ ವಿಜ್ಞಾನದಲ್ಲಿ ಈಗ ಐದನೆಯ ಸ್ಥಾನದಲ್ಲಿದೆ. ಚಂದ್ರಯಾನ-3 ರಿಂದ ಜಗತ್ತಿನಲ್ಲಿ ಭಾರತ ಪ್ರಥಮ ಸ್ಥಾನ ಪಡೆಯಲಿದೆ. ಭಾರತ ಮೊದಲಿನಿಂದ ವೈಜ್ಞಾನಿಕ ಅವಿಷ್ಕಾರಕ್ಕೆ ಮಾಡುತ್ತಾ ಜಗತ್ತಿಗೆ ಮಾದರಿಯಾಗಿದೆ. ಇಂಥ ಸಂದರ್ಭದಲ್ಲಿ ಚಂದ್ರಯಾನ ಕುರಿತು ಕುಹಕ ಮಾಡುವುದು ಬೇಡ. ದೇಶದ ಸಾಧನೆಯನ್ನು ಹೆಮ್ಮೆ ಪಡಬೇಕು. ಜಗತ್ತಿನಲ್ಲಿ ಯಾವದೇ ದೇಶ ಸಾಧಿಸಿದ ಸಾಧನೆಯನ್ನು ಭಾರತ ಮಾಡುತ್ತಿದೆ. ಭಾರತ ವಿಶ್ವಗುರುವಾಗಿದೆ ಎಂದು ಹೇಳಿದರು.