ಸುದ್ದಿಮೂಲ ವಾರ್ತೆ
ಬೀದರ್,ಮೇ17: ಕೇಂದ್ರ ಸಚಿವ ಭಗವಂತ್ ಖೂಬಾ ಮತ್ತು ತಂಡದಿಂದ ಜೀವಭಯ ಇದೆ ಎಂದು ಔರಾದ್ ಶಾಸಕ ಪ್ರಭು ಚವ್ಹಾಣ್ ಹೇಳಿದ್ದಾರೆ.
ಬೀದರ್ ನಗರದ ಖಾಸಗಿ ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಚುನಾವಣೆಯಲ್ಲಿ ನನಗೆ ಸೋಲಿಸಲು ಬಿಜೆಪಿ ಬಿ ಟೀಂ ಮೂಲಕ ಸಾಕಷ್ಟು ಪ್ರಯತ್ನಿಸಿದರು. ಆದರೆ, ಮತದಾರರ ಆಶೀರ್ವಾದದಿಂದ ಗೆದ್ದು ಬಂದಿದ್ದೇನೆ. ಖುಬಾ ವಿರುದ್ಧ ಮೋದಿ ಸೇರಿದಂತೆ ಪಕ್ಷದ ವರಿಷ್ಠರಿಗೆ ದೂರು ನೀಡುತ್ತೇನೆ ಎಂದು ಹೇಳಿದ್ದಾರೆ.