ಸುದ್ದಿಮೂಲ ವಾರ್ತೆ ಕಲಬುರಗಿ, ಜ.11:
ಜನಸ್ನೇಹಿ ವ್ಯವಸ್ಥೆೆ, ತ್ವರಿತ ನಾಗರಿಕ ಸೇವೆ, ವೃತ್ತಿಿಪರತೆ ಹಾಗೂ ಆಡಳಿತದಲ್ಲಿ ಗುಣಮಟ್ಟ ಸೇರಿದಂತೆ ಹಲವಾರು ವಿಭಾಗಗಳಲ್ಲಿ ಪೊಲೀಸ್ ಕಮೀಷನರೇಟ್ ಆಮೂಲಾಗ್ರ ಸುಧಾರಣೆ ಹೊಂದಿದೆ. ಎಲ್ಲಾ ಮಾನದಂಡಗಳನ್ನು ಪರಿಗಣಿಸಿ ಅಂತಾರಾಷ್ಟ್ರೀಯ ಐಖ 9001: 2015 ಪ್ರಶಸ್ತಿಿ ಲಭಿಸಿದ್ದು ಜಿಲ್ಲೆಗೆ ಹೆಮ್ಮೆೆಯ ಸಂಗತಿಯಾಗಿದೆ. ಇದಕ್ಕೆೆ ಕಾರಣರಾಗಿರುವ ಪ್ರತಿಯೊಬ್ಬ ಸಿಬ್ಬಂದಿಗಳಿಗೆ ಅಭಿನಂದನೆಗಳು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಿಯಾಂಕ್ ಖರ್ಗೆ ಅಭಿಪ್ರಾಾಯಪಟ್ಟರು.
ನಗರ ಪೊಲೀಸ್ ಕಮೀಷರ್ನ ಕಚೇರಿಯಲ್ಲಿ ಪೊಲೀಸ್ ಕಮಿಷರ್ನ ಅವರಿಗೆ ಸಾಂಕೇತಿಕವಾಗಿ ಪ್ರಶಸ್ತಿಿ ವಿತರಿಸಿ ಮಾತನಾಡಿದ ಅವರು, ಪೊಲೀಸ್ ಆಯುಕ್ತಾಾಲಯಕ್ಕೆೆ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿಿ ಸಿಕ್ಕಿಿದೆ. ಆದರೆ ಜನರಿಂದ ಹೊಗಳಿಕೆಯ ಪ್ರಶಸ್ತಿಿ ಪಡೆಯುವಲ್ಲಿ ಪೊಲೀಸರು ಮತ್ತಷ್ಟು ಜನಸ್ನೇಹಿ ಆದಾಗ ಮಾತ್ರ ಪೊಲೀಸರಿಗೆ ಜನರ ಸರ್ಟಿಫಿಕೇಟ್ ಸಿಗಲಿದೆ. ಈ ನಿಟ್ಟಿಿನಲ್ಲಿ ಪೊಲೀಸ್ ಸಿಬ್ಬಂದಿ ಶ್ರಮಿಸಬೇಕು ಎಂದು ಪೊಲೀಸರಿಗೆ ಸಲಹೆ ನೀಡಿದರು.
ಜಿಲ್ಲೆಯಲ್ಲಿ ಕ್ರೈಮ್ ನಲ್ಲಿ ಸಾಕಷ್ಟು ಇಳಿಮುಖವಾಗಿದೆ. ಡ್ರ್ಸ್ ಗೆ ಸಂಬಂಧಿಸಿದ ಕೇಸ್ ಗಳು ಹೆಚ್ಚಳವಾಗಿವೆ. ಡ್ರಗ್ಸ್ ವಿರುದ್ದದ ಮತ್ತಷ್ಟು ಕಠಿಣ ಕ್ರಮವಹಿಸಬೇಕಾಗಿದೆ ಎಂದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಕಾನೂನು ಸುವ್ಯವಸ್ಥೆೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದೆ ಎಂದರು.
ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಅವರು ಪ್ರಾಾಸ್ತಾಾವಿಕವಾಗಿ ಮಾತನಾಡಿದರು.
ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್, ಎಂಎಲ್ಸಿಿಗಳಾದ ತಿಪ್ಪಣ್ಣಪ್ಪ ಕಮಕನೂರು, ಜಗದೇವ ಗುತ್ತೇದಾರ್,ಕುಡಾ ಅಧ್ಯಕ್ಷ ಮಜಹರ್ ಆಲಂ ಖಾನ್, ಜೆಸ್ಕಾಾಂ ಅಧ್ಯಕ್ಷ ಪ್ರವೀಣ್ ಹರವಾಳ್, ಜಿಲ್ಲಾಧಿಕಾರಿ ಬಿ. ೌಜಿಯಾ ತರನ್ನಮ್, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡ್ಡೂರು ಶ್ರೀನಿವಾಸಲು ಇದ್ದರು.
ಕಲಬುರಗಿ ಪೊಲೀಸ್ ಕಮೀಷನರ್ ಕಚೇರಿಗೆ ಐ.ಎಸ್.ಓ ಪ್ರಶಸ್ತಿ ಕಲಬುರಗಿಗೆ ಹೆಮ್ಮೆಯ ಸಂಗತಿ :ಪ್ರಿಯಾಂಕ್ ಖರ್ಗೆ

