ಸುದ್ದಿಮೂಲ ವಾರ್ತೆ
ಗೋವಾ, ನ. 28 : ದೇಶದ ಚಿತ್ರರಂಗವೇ ಕನ್ನಡ ಚಿತ್ರೋದ್ಯಮದೆಡೆ ತಿರುಗಿ ನೋಡುವಂತೆ ಮಾಡಿದ್ದ ಹೊಂಬಾಳೆ ಸಂಸ್ಥೆ ನಿರ್ಮಾಣದ ‘ಕಾಂತಾರ’ ಚಿತ್ರ ಗೋವಾ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ನಲ್ಲಿ ಬೆಸ್ಟ್ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಹೊಂಬಾಳೆ ಸಂಸ್ಥೆ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಸಿನಿಮಾ ಇದೀಗ ಗೋವಾದಲ್ಲಿ ನಡೆಯುತ್ತಿರುವ 52ನೇ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ನಲ್ಲಿ ಪ್ರತಿಷ್ಠಿತ ಸಿಲ್ವರ್ ಪಿಕಾಕ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಈ ಮೂಲಕ ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಈ ಪ್ರಶಸ್ತಿ ಪಡೆದ ಮೊದಲ ಚಿತ್ರ ಎಂಬ ದಾಖಲೆಯನ್ನು ಕಾಂತಾರ ನಿರ್ಮಿಸಿದೆ.
70ರ ದಶಕದಲ್ಲಿ ಪ್ರಪ್ರಥಮ ಬಾರಿಗೆ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಅಭಿನಯಕ್ಕೆ ನಟ ಶಂಕರ್ನಾಗ್ ಅವರಿಗೆ ಈ ಪ್ರಶಸ್ತಿ ಸಿಕ್ಕಿತ್ತು. ಆದರೆ ಸಿನಿಮಾ ವಿಭಾಗದಲ್ಲಿ ಕನ್ನಡ ಸಿನಿಮಾಕ್ಕೆ ಈ ಪ್ರಶಸ್ತಿ ಲಭಿಸುತ್ತಿರುವುದು ಇದೇ ಮೊದಲು.
ಸದ್ಯ ‘ಕಾಂತಾರ’ ಚಾಪ್ಟರ್ 1 ಫಸ್ಟ್ ಲುಕ್ ಬಿಡಗಡೆಯಾಗಿದ್ದು, ನಿರೀಕ್ಷೆಗೂ ಮೀರಿ ಅಭಿಮಾನಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಮುಂದಿನ ತಿಂಗಳಿಂದ ಚಿತ್ರದ ಶೂಟಿಂಗ್ ಶುರುವಾಗಲಿದೆ.