ಸುದ್ದಿಮೂಲವಾರ್ತೆ
ಕೊಪ್ಪಳ,ಸೆ.29: ತಮಿಳುನಾಡಿಗೆ ಕಾವೇರಿ ಬಿಡುವುದನ್ನು ವಿರೋಧಿಸಿ ಇಂದು ಹಲವು ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಕೊಪ್ಪಳದಲ್ಲಿ ನಿರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೇವಲ ಪ್ರತಿಭಟನೆ ಮಾತ್ರ ಸೀಮಿತವಾಗಿತ್ತು.
ಕಾವೇರಿ ನೀರಿಗಾಗಿ ಕರ್ನಾಟಕ ಬಂದ್ ಕರೆಗೆ ನಿರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಮುಂಜಾನೆಯಿಂದ ಕೊಪ್ಪಳ ನಗರದಲ್ಲಿ ಅಂದಿನಂತೆ ಜನಜೀವನ ಇತ್ತು. ಕೊಪ್ಪಳ ಬಸ್ ನಿಲ್ದಾಣದಿಂದ ಒಳ ಹಾಗು ಹೊರ ಹೋಗುತ್ತಿರುವ ಬಸ್ ಗಳು ಆದರೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕ ಸಂಖ್ಯೆ ವಿರಳವಾಗಿತ್ತು.
ಇದೇ ವೇಳೆ ಕರ್ನಾಟಕ ರಕ್ಷಣಾ ಸೇನೆಯಿಂದ ಪ್ರತಿಭಟನೆಯನ್ನು ಬಸ್ ನಿಲ್ದಾಣದ ಮುಂದೆ ಮಾಡಿದರು.ಎಳೆನೀರು ಹಿಡಿದು ಪ್ರತಿಭಟನೆ ಮಾಡಿದರು.ಎಳೆನೀರು ತಮಿಳು ನಾಡಿಗೆ ಚಿಪ್ಪು ನಮಗೆ ಎಂದು ಘೋಷಣೆ ಹಾಕಿದರು. ಅರೆಬೆತ್ತಲೆಯಾಗಿ ಮೆರವಣಿಗೆ ನಡೆಸಿ ಅಂಗಡಿ ಹಾಗು ಹೊಟೆಲ್ ಗಳನ್ನು ಸ್ವಯಂ ಪ್ರೇರಣೆಯಿಂದ ಮುಚ್ಚುವಂತೆ ಮನವಿ ಮಾಡಿಕೊಂಡರು. ಮನವಿಗೆ ಸ್ಪಂದಿಸಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವಂತೆ ಮಾಡಿ ನಂತರ ಅಂಗಡಿಗಳನ್ನು ತೆರೆದರು.
ಇದೇ ವೇಳೆ ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣದಿಂದ ಕೊಪ್ಪಳ ನಗರದ ಅಶೋಕ್ ಸರ್ಕಲ್ ಬಳಿ ಪ್ರತಿಭಟನೆ ಮಾಡಿದರು.ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಹಾಕಿದರು.ಸಿಎಂ ಸಿದ್ಧರಾಮಯ್ಯ,ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಲೋಕಸಭೆ ಚುನಾವಣೆ ಹಿನ್ನೆಲೆ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಳ್ಳಂಬೆಳಿಗ್ಗೆ ರಸ್ತೆ ಹಿಟ್ನಾಳ ಟೋಲ್ ಬಳಿ ಪ್ರತಿಭಟನೆ ಮಾಡಿದರು. ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಪ್ರತಿಭಟನೆ ಮಾಡಿ ಟೋಲ್ ಗೇಟ್ ಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಪೊಲೀಸರು ಅವರನ್ನು ಬಿಡದೆ 50 ಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಈ ವೇಳೆ ಸರ್ಕಾರ ವಿರುದ್ದ ದಿಕ್ಕಾರ ಹಾಕಿ ಆಕ್ರೋಶ ಹೊರ ಹಾಕಿದರು.ಕೂಡಲೆ ಕಾವೇರಿ ನೀರು ಬಂದ್ ಮಾಡುವಂತೆ ಆಗ್ರಹಿಸಿದರು.ಹೋರಾಟಗಾರರು ಖಾಲಿ ಬಕೇಟ್, ಚಂಬು ಹಿಡಿದು ರಸ್ತೆಗಿಳಿದಿದ್ದರು.
ಇದೇ ವೇಳೆ ಯಾವುದೆ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತೆ ವಹಿಸಿದ್ದರು.