ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.19
ಬಿಡಿಎ, ಬೆಂಗಳೂರು ಜಲಮಂಡಳಿ, ತಾಂತ್ರಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಕಲ್ಯಾಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಡಿ.20ರಿಂದ 22ರವರೆಗೆ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಾಧಿಕಾರ ಬಿಗಿ ಕ್ರಮಗಳನ್ನು ಕೈಗೊಂಡಿದೆ.
ವಿವಿಧ ಹುದ್ದೆಗಳಿಗೆ ಕಲ್ಯಾಾಣ ಕರ್ನಾಟಕದ ಒಟ್ಟು 24,800 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಅಷ್ಟೂ ಮಂದಿಗೆ ಮೂರು ದಿನಗಳ ಕಾಲ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾಾರೆ.
ಎಲ್ಲರಿಗೂ ಕನ್ನಡ ಪರೀಕ್ಷೆ:
ಕಲ್ಯಾಾಣ ಕರ್ನಾಟಕ ಸೇರಿದಂತೆ ಇತರ ಎಲ್ಲರಿಗೂ ಡಿ.28ರಂದು ಕನ್ನಡ ಕಡ್ಡಾಾಯ ಪರೀಕ್ಷೆ ನಡೆಯಲಿದೆ ಎಂದು ಅವರು ವಿವರಿಸಿದರು.

