ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.18:
ಮಾನಸಿಕ ಆರೋಗ್ಯ ಸಂಸ್ಥೆೆಗಳನ್ನು ಖಾಸಗಿ ವೈದ್ಯಕೀಯ ಸಂಸ್ಥೆೆಯ ಪರಿಭಾಷೆಯೊಳಗೆ ಸೇರಿಸಲು ಹಾಗೂ ಇತರೆ ವೈದ್ಯಕೀಯ ಸಂಸ್ಥೆೆಗಳ ನೊಂದಣಿಯನ್ನು ಸರಳಗೊಳಿಸುವ ಉದ್ದೇಶದಿಂದ ರೂಪಿಸಲಾದ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆೆಗಳ ತಿದ್ದುಪಡಿ ವಿಧೇಯಕಕ್ಕೆೆ ವಿಧಾನಸಭೆಯಲ್ಲಿ ಅಂಗೀಕಾರ ದೊರಕಿತು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿಿರುವ ಚಳಿಗಾಲದ ಅಧಿವೇಶನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಾಣ ಸಚಿವ ದಿನೇಶ್ ಗುಂಡೂರಾವ್ ಅವರು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆೆಗಳ ತಿದ್ದುಪಡಿ ವಿಧೇಯಕ ಮಂಡಿಸಿ, ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆೆಗಳ ಅಧಿನಿಯಮ 2007 ಅನ್ನು ತಿದ್ದುಪಡಿ ಮಾಡಲು ಉದ್ದೇಶಿಸಿದ್ದು, ಪ್ರಸ್ತುತ ಖಾಸಗಿ ವೈದ್ಯಕೀಯ ಸಂಸ್ಥೆೆಗಳು ಈ ಅಧಿನಿಯಮದಡಿ ಸೇರ್ಪಡೆಗೊಂಡಿರಲಿಲ್ಲ, ಇದರಿಂದಾಗಿ ಕೆಲವು ನಿಯಮಗಳನ್ನು ಪಾಲಿಸುವುದರಲ್ಲಿ ತೊಡಕಿತ್ತು. ಹೀಗಾಗಿ ಮಾನಸಿಕ ಆರೋಗ್ಯ ಸಂಸ್ಥೆೆಗಳನ್ನೂ ಕೂಡ ಅಧಿನಿಯಮದಡಿ ಖಾಸಗಿ ವೈದ್ಯಕೀಯ ಸಂಸ್ಥೆೆಯ ಪರಿಭಾಷೆಯೊಳಗೆ ಸೇರ್ಪಡೆಗೊಳಿಸಲಾಗುತ್ತಿಿದೆ.
ಅಲ್ಲದೆ ಖಾಸಗಿ ವೈದ್ಯಕೀಯ ಸಂಸ್ಥೆೆಗಳಿಗೆ ಕೆಪಿಎಂಇ ಸಮಿತಿಯಡಿ ನೊಂದಣಿ ಮತ್ತು ಪರವಾನಗಿ ಪಡೆಯುವ ನಿಟ್ಟಿಿನಲ್ಲಿ ವಿಳಂಬವಾಗುತ್ತಿಿದೆ ಎಂಬ ದೂರುಗಳು ಕೇಳಿಬರುತ್ತಿಿದ್ದವು. ಹೀಗಾಗಿ ತಾತ್ಕಾಾಲಿಕ ನೊಂದಣಿ ಪ್ರಮಾಣ ಪತ್ರ ಮಂಜೂರು ಮಾಡಲು ಅಥವಾ ನವೀಕರಣ ಮಾಡುವುದು ಸೇರಿದಂತೆ ವಿವಿಧ ಪ್ರಕ್ರಿಿಯೆಗಳ ಸರಳೀಕರಣಕ್ಕಾಾಗಿ ಈ ಅಧಿನಿಯಮಕ್ಕೆೆ ತಿದ್ದುಪಡಿ ತರಲಾಗುತ್ತಿಿದೆ. ಖಾಸಗಿ ವೈದ್ಯಕೀಯ ಸಂಸ್ಥೆೆಗಳ ನೋಂದಣಿ ಮತ್ತು ಕುಂದುಕೊರತೆ ಪರಿಹಾರ ಪ್ರಾಾಧಿಕಾರಕ್ಕೆೆ ನಾಮನಿರ್ದೇಶನ ಮಾಡಲು ವಿಧೇಯಕದಲ್ಲಿ ಅವಕಾಶ ಮಾಡಿಕೊಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಖಾಸಗಿ ಕ್ಲಿಿನಿಕ್ಗಳಿಗೆ ಅಗ್ನಿಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ನೀಡುವುದನ್ನು ಕಡ್ಡಾಾಯಗೊಳಿಸಿದ್ದು, ಇದರಿಂದ ಸಣ್ಣ ಪುಟ್ಟ ಖಾಸಗಿ ಕ್ಲಿಿನಿಕ್ಗಳಿಗೂ ತೊಂದರೆಯಾಗುತ್ತಿಿದೆ. ಇದನ್ನು ಸಡಿಲಗೊಳಿಸುವಂತೆ ಶಾಸಕರುಗಳಾದ ಡಾ. ಶಿವರಾಜ್ ಪಾಟೀಲ್, ಡಾ. ಶ್ರೀನಿವಾಸ್ ಸೇರಿದಂತೆ ಹಲವರು ಒತ್ತಾಾಯಿಸಿದರು. ಇದಕ್ಕೆೆ ಪ್ರತಿಕ್ರಿಿಯಿಸಿದ ಸಚಿವ ದಿನೇಶ್ ಗುಂಡೂರಾವ್ ಅವರು, ಆಸ್ಪತ್ರೆೆ ಸೇರಿದಂತೆ ವಿವಿಧ ಬಗೆಯ ವಾಣಿಜ್ಯ ಕಟ್ಟಡಗಳಲ್ಲಿ ಅಗ್ನಿಿ ಆಕಸ್ಮಿಿಕದಿಂದ ಜೀವ ಹಾನಿ ಅಥವಾ ಆಸ್ತಿಿ ಹಾನಿಯಾಗದಂತೆ ತಡೆಗಟ್ಟುವ ಉದ್ದೇಶದಿಂದ ಅಗ್ನಿಿಶಾಮಕ ಇಲಾಖೆ ಈ ನಿಯಮ ರೂಪಿಸಿದೆ. ಹೀಗಾಗಿ ನಿಯಮಗಳನ್ನು ಸಡಿಲಗೊಳಿಸುವ ಅಧಿಕಾರವ್ಯಾಾಪ್ತಿಿ ಆರೋಗ್ಯ ಇಲಾಖೆಗೆ ಬರುವುದಿಲ್ಲ ಎಂದರು.
ಸದನದ ಸದಸ್ಯರುಗಳ ಚರ್ಚೆಯ ಬಳಿಕ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆೆಗಳ ತಿದ್ದುಪಡಿ ವಿಧೇಯಕಕ್ಕೆೆ ವಿಧಾನಸಭೆ ಅಂಗೀಕಾರ ನೀಡಲಾಯಿತು.

