ಸುದ್ದಿಮೂಲ ವಾರ್ತೆ ಬೆಂಗಳೂರು, ಜ.17:
ಒಟ್ಟು 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲಾಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಾಟಿಸಿದ ನಂತರ ಮಾಧ್ಯಮ ಗೋಷ್ಠಿಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲಾಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ ಮಾತ್ರವಲ್ಲದೆ, ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವಂಥ ಕೆಲಸವಿದು ಎಂದರು.
ಪೊಲೀಸ್ ಸಬ್ಇನ್ಸ್ಪೆಕ್ಟರ್, ಎಎಸ್ಪಿಿ, ಡಿವೈಎಸ್ಪಿಿ, ಎಸಿಪಿ ಇವರಿಗೆ ಗೊತ್ತಿಿಲ್ಲದೆ ಯಾವ ಅಪರಾಧವೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕೆಂದು ಸ್ಪಷ್ಟವಾಗಿ ಸೂಚಿಸಲಾಗಿದೆ. ವಿಶೇಷವಾಗಿ ದುರ್ಬಲರಿಗೆ ರಕ್ಷಣೆ ನೀಡಬೇಕು. ಬಲಾಢ್ಯರ ಕೈಗೊಂಬೆಗಳಂತೆ ಕೆಲಸ ಮಾಡಬಾರದು ಎಂದು ಸೂಚಿಸಲಾಗಿದೆ ಎಂದರು.
ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕ ವಸ್ತು ಮುಕ್ತವನ್ನಾಾಗಿಸಬಹುದು. ಕಳ್ಳತನ, ಸುಲಿಗೆ, ದರೋಡೆ, ಕೊಲೆ ಮುಂತಾದ ಪ್ರಕರಣಗಳು ಕಡಿಮೆಯಾಗುತ್ತಿಿದ್ದರೂ, ಸೈಬರ್ ಅಪರಾಧ ಹಾಗೂ ಡ್ರಗ್ಸ್ ಅಪರಾಧಗಳು ಕಡಿಮೆಯಾಗುತ್ತಿಿಲ್ಲ. ಯುವಜನರು ಇದರಿಂದ ಹಾಳಾಗುತ್ತಿಿದ್ದು, ಕರ್ನಾಟಕವನ್ನು ಮಾದಕ ವಸ್ತು ಮುಕ್ತ ರಾಜ್ಯವಾಗಿಸಬೇಕೆಂದು ಸರ್ಕಾರ ಘೋಷಣೆ ಮಾಡಿದೆ. ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕ ವಸ್ತು ಮುಕ್ತವನ್ನಾಾಗಿಸಬಹುದು. ಜೊತೆಗೆ ಯುವಜನರನ್ನೂ ರಕ್ಷಿಸಬಹುದು ಎಂದರು.
ರಾಜ್ಯವನ್ನು ಮಾದಕವಸ್ತು ಮುಕ್ತ ಮಾಡಬೇಕಾದರೆ ಡ್ರಗ್ಸ್ ಮಾರಾಟ ಮಾಡುವವರನ್ನು ವಿಚಾರಣೆ ಮಾಡಿದರೆ ಅಥವಾ ಮಾದಕ ವಸ್ತು ವ್ಯಸನಿಗಳನ್ನು ವಿಚಾರಿಸಿದರೆ ಡ್ರಗ್ಸ್ ಜಾಲವನ್ನು ಪತ್ತೆೆ ಹಚ್ಚಬಹುದು. ಸರಬರಾಜು ಮಾಡುವವರನ್ನು ವಿಚಾರಣೆಗೆ ಗುರಿಪಡಿಸಿದರೆ ಉತ್ಪಾಾದಕರು ಹಾಗೂ ಸರಬರಾಜುದಾರರು ಯಾರು ಎಂದು ತಿಳಿಯುತ್ತದೆ. ಎಲ್ಲ ಪೊಲೀಸ್ ಠಾಣೆಗಳಲ್ಲಿ ಈ ಕೆಲಸ ತಕ್ಷಣದಿಂದಲೇ ಮಾಡಬೇಕೆಂದು ಸೂಚಿಸಲಾಗಿದೆ. ವಿದೇಶಿಯರು ಜಾಮೀನಿನ ಮೇಲೆ ಬಿಡುಗಡೆಯಾಗಿ ಇಲ್ಲೇ ಉಳಿದರೆ ಪುನಃ ಅದೇ ಅಪರಾಧದಲ್ಲಿ ತೊಡಗುವ ಸಾಧ್ಯತೆಗಳು ಹೆಚ್ಚು. ಆದ್ದರಿಂದ ವಿದೇಶಿಯರನ್ನು ಯಾವುದೇ ಮುಲಾಜಿಲ್ಲದೆ ಅವರ ದೇಶಕ್ಕೆೆ ಕಳುಹಿಸಬೇಕು ಎಂದು ಸೂಚಿಸಲಾಗಿದೆ ಎಂದರು.
ಪೋಲೀಸ್ ಠಾಣೆಗಳಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್, ಡಿವೈಎಸ್ಪಿಿಗಳ ಮೇಲೆ ಮೇಲಾಧಿಕಾರಿಗಳು ನಿಗಾ ಇಡಲು ಸೂಚಿಸಲಾಗಿದೆ. ಅಪರಾಧಗಳಲ್ಲಿ ಅವರು ಶಾಮೀಲಾಗಬಾರದು ಎಂದು ತಾಕೀತು ಮಾಡಿದರು..
ರಾಜ್ಯ ಪೊಲೀಸರು ವಿಲವಾಗಿದ್ದೇಕೆ?
ಮಹಾರಾಷ್ಟ್ರದ ಪೊಲೀಸರಿಗೆ ಬೆಂಗಳೂರಿಗೆ ಬಂದು ಡ್ರಗ್ಸ್ ಪತ್ತೆೆಹಚ್ಚಲು ಸಾಧ್ಯವಾದರೆ, ರಾಜ್ಯದ ಪೊಲೀಸರು ಏಕೆ ಮಾಡಬಾರದು? ರಾಜ್ಯದ ಪೊಲೀಸರು ಇದನ್ನು ಪತ್ತೆೆ ಹಚ್ಚುವಲ್ಲಿ ವಿಲರಾಗಿದ್ದು, ಸಂಬಂಧಪಟ್ಟ ಪೊಲೀಸರ ಮೇಲೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ಸೈಬರ್ ಅಪರಾಧ ಮತ್ತು ಮಾದಕವಸ್ತು ನಿಯಂತ್ರಣಕ್ಕೆೆ ಕಾನೂನನ್ನು ಇನ್ನಷ್ಟು ಬಿಗಿಗೊಳಿಸಬೇಕಾಗುತ್ತದೆ. ಹೊಸ ಕಾನೂನು ಅಥವಾ ತಿದ್ದುಪಡಿಯನ್ನು ಮುಂಬರುವ ದಿನಗಳಲ್ಲಿ ಮಾಡಬೇಕಾಗುತ್ತದೆ ಎಂದರು.
ಬಳ್ಳಾಾರಿ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆೆಗೆ ಉತ್ತರಿಸಿ ಪ್ರಕರಣವನ್ನು ಸಿಐಡಿ ಗೆ ವಹಿಸಲಾಗಿದೆ. ಬಳ್ಳಾಾರಿ ಸೂಕ್ಷ್ಮ ಪ್ರದೇಶವಾಗಿದ್ದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳು ಸ್ಥಳದಲ್ಲಿ ಇರಲಿಲ್ಲ ಎಂಬ ಕಾರಣಕ್ಕೆೆ ಅಮಾನತು ಮಾಡಲಾಗಿದೆ . ತನಿಖಾ ವರದಿ ಬಂದ ನಂತರ ತಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕವಿತಾಳ ಠಾಣೆ ಬಗ್ಗೆೆ ಮೆಚ್ಚುಗೆ:
2003 ರಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆೆ ಕಡಿಮೆಯಾಗುತ್ತಿಿದೆ. ರಾಯಚೂರು ಜಿಲ್ಲೆಯ ಕವಿತಾಳ, ಪೊಲೀಸ್ ಠಾಣೆ ದೇಶದಲ್ಲಿಯೇ ಉತ್ತಮ ಪೋಲೀಸ್ ಠಾಣೆಗಳ ಸಾಲಿನಲ್ಲಿ ಮೂರನೇ ಸ್ಥಾಾನ ಪಡೆದಿದೆ. ಇದು ಅಭಿನಂದನೀಯ ಎಂದರು.
ಇದಕ್ಕೂ ಮುನ್ನ ನಡೆದ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಮ್, ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಮುಖ್ಯಮಂತ್ರಿಿ ಅವರ ಕಾರ್ಯದರ್ಶಿ ಬಿ.ಬಿ.ಕಾವೇರಿ ಮತ್ತಿಿತರರು ಉಪಸ್ಥಿಿತರಿದ್ದರು.
ಕವಿತಾಳ ಪೊಲೀಸ್ ಠಾಣೆ ದೇಶದಲ್ಲಿಯೇ ಉತ್ತಮ ಪೊಲೀಸ್ ಠಾಣೆ: ಸಿದ್ದರಾಮಯ್ಯ ಅಭಿನಂದನೆ 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಸಿಎಂ ಬೇಸರ

