ಸುದ್ದಿಮೂಲ ವಾರ್ತೆ ಬೀದರ, ಡಿ.30:
ಕರ್ನಾಟಕ ರಾಜ್ಯದ ಗ್ಯಾಾರಂಟಿ ಯೋಜನೆಗಳು ದೇಶಕ್ಕೆೆ ಮಾದರಿಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆೆ ತಿಳಿಸಿದರು.
ಮಂಗಳವಾರ ನಗರದ ಪ್ರತಾಪ್ ನಗರದ ಘಾಳೆ ಲಕ್ಜುರೀಸ್ ಕನ್ವೆೆನ್ಷನ್ ಹಾಲ್ನಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಇವರ ಸಂಯುಕ್ತಾಾಶ್ರಯದಲ್ಲಿ ಕರ್ನಾಟಕ ಸರ್ಕಾರ ಪಂಚ ಗ್ಯಾಾರಂಟಿಗಳ ಅನುಷ್ಠಾಾನದ ಕುರಿತು ಜಿಲ್ಲಾ ಮಟ್ಟದ ಗ್ಯಾಾರಂಟಿ ಕಾರ್ಯಾಗಾರ-ಗ್ಯಾಾರಂಟಿ ಉತ್ಸವ ಕಾರ್ಯಕ್ರಮ ಉದ್ಘಾಾಟಿಸಿ ಮಾತನಾಡಿದರು.
ರಾಜ್ಯ ಸರ್ಕಾರದ ಪಂಚ ಗ್ಯಾಾರಂಟಿ ಯೋಜನೆ ರಾಜ್ಯದ 4 ಕೋಟಿಗೂ ಹೆಚ್ಚು ಜನರು ಲಾನುಭವಿಗಳಾಗಿದ್ದಾರೆ. ಪ್ರತಿ ಪಕ್ಷಗಳು, ಬಂಡವಾಳಶಾಹಿಗಳು ಗ್ಯಾಾರಂಟಿಗಳನ್ನು ವಿರೋಧಿಸುವರು, ಟೀಕಿಸುವರು, ಅವರೇ ಇವಾಗ ದೇಶದ ಇತರೆ ರಾಜ್ಯಗಳಲ್ಲಿ ಗ್ಯಾಾರಂಟಿಗಳನ್ನು ಘೋಷಣೆ ಮಾಡುತ್ತಿಿದ್ದಾರೆ ಎಂದರು. ತಮ್ಮ ಸರ್ಕಾರ ನುಡಿದಂತೆ ನಡೆದಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ತಿಳಿಸಿರುವ ಹಾಗೆ ಪಂಚ ಗ್ಯಾಾರಂಟಿಗಳನ್ನು ಯಶಸ್ವಿಿಯಾಗಿ ಜಾರಿಗೆ ತಂದಿದ್ದೇವೆ ಎಂದರು.
ಬೀದರ ಜಿಲ್ಲೆಯಲ್ಲಿ ಗೃಹ ಲಕ್ಷ್ಮೀ ಯೋಜನೆಯಡಿ 3,44,855 ಮಹಿಳೆಯರು ಲಾನುಭವಿಗಳು ಇದ್ದು, ಇದುವರೆಗೆ ಯಾವುದೇ ಮಧ್ಯವರ್ತಿಗಳಿಲ್ಲದೆ ಮಾಹೆಗೆ 2000 ರೂ. ಅಂತೆ 1552 ಕೋಟಿ ರೂಪಾಯಿ ನೇರವಾಗಿ ಖಾತೆಗೆ ಜಮಾ ಮಾಡಲಾಗಿದೆ. ಗೃಹ ಜ್ಯೋೋತಿ ಯೋಜನೆಯಡಿ ಜಿಲ್ಲೆಯಲ್ಲಿ 3,48,617 ಲಾನುಭವಿಗಳು ಇದ್ದು, 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿಿದ್ದು, 447 ಕೋಟಿ ರೂಪಾಯಿ ಬಳಸಲಾಗಿದೆ. ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ 13,13,355 ಜನರು ಲಾನುಭವಿಗಳಾಗಿದ್ದು, 80% ರಷ್ಟು ಜನರು ಒಳಗೊಂಡಿದ್ದಾರೆ. ಶಕ್ತಿಿ ಯೋಜನೆಯಡಿ ಜಿಲ್ಲೆಯಲ್ಲಿ 11 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಇದರಿಂದಾಗಿ ಸರ್ಕಾರ ಕೆಎಸ್ಆರ್ಸಿಗೆ 315 ಕೋಟಿ ರೂಪಾಯಿ ಪಾವತಿಸಿದೆ ಎಂದರು.
ಜಿಲ್ಲೆಗೆ ಪಂಚ ಗ್ಯಾಾರಂಟಿಗಳಿಂದ 2500 ಕೋಟಿ ರೂಪಾಯಿ ದೊರೆತಂತಾಗಿದೆ ಹಾಗೂ 300 ಕೋಟಿ ರೂಪಾಯಿ ರೈತರಿಗೆ ಬೆಳೆ ಪರಿಹಾರ ನೀಡಲಾಗಿದೆ ಎಂದರು.
ಕರ್ನಾಟಕ ರಾಜ್ಯ ಗ್ಯಾಾರಂಟಿ ಯೋಜನೆಗಳ ಅನುಷ್ಠಾಾನ ಪ್ರಾಾಧಿಕಾರದ ಅಧ್ಯಕ್ಷ ಹೆಚ್. ಎಂ. ರೇವಣ್ಣ ಮಾತನಾಡಿ, ರಾಜ್ಯದಲ್ಲಿ ತಮ್ಮ ಸರ್ಕಾರ ಜನಪರ, ಬಡವರ ಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಮೊದಲಿನಿಂದಲೂ ತಮ್ಮ ಸರ್ಕಾರ ಎಲ್ಲಾ ಜನರು ಬದುಕು ಕಟ್ಟಿಿಕೊಳುವಂತೆ ಮಾಡಿದೆ. ಉಳುವನೇ ಭೂಮಿಯ ಒಡೆಯ, 20 ಅಂಶಗಳ ಕಾರ್ಯಕ್ರಮ ಯಶಸ್ವಿಿಯಾಗಿ ಜಾರಿಗೆ, ಶಿಕ್ಷಣ, ಆರೋಗ್ಯ, ವಿಜ್ಞಾನ ತಂತ್ರಜ್ಞಾನದಲ್ಲಿ ಕ್ರಾಾಂತಿಕಾರಿ ಬದಲಾವಣೆ ತಂದಿದೆ ಎಂದರು. ಬಡವರ ಏಳಿಗೆಗೆ ಮತ್ತು ಮಹಿಳೆಯರ ಸಬಲೀಕರಣಕ್ಕೆೆ ಪಂಚ ಗ್ಯಾಾರಂಟಿಗಳು ದಾರಿಯಾಗಿವೆ. ವಾರ್ಷಿಕವಾಗಿ 51 ಸಾವಿರ ಕೋಟಿ ರೂಪಾಯಿ ಗ್ಯಾಾರಂಟಿಗಳ ಮೂಲಕ ನೇರವಾಗಿ ಜನರಿಗೆ ತಲುಪುತ್ತಿಿವೆ ಎಂದರು.
ಕರ್ನಾಟಕ ರಾಜ್ಯ ಗ್ಯಾಾರಂಟಿ ಯೋಜನೆಗಳ ಅನುಷ್ಠಾಾನ ಪ್ರಾಾಧಿಕಾರದ (ಮೈಸೂರು ವಿಭಾಗ) ಉಪಾಧ್ಯಕ್ಷೆ ಪುಷ್ಪ ಅಮರನಾಥ, ಹಿರಿಯ ಪತ್ರಕರ್ತ ಹಾಗೂ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಿ ವಾಸು ಹೆಚ್. ವಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಂದ ಆಯೋಜಿಸಲಾಗಿದ್ದ ಐದು ಗ್ಯಾಾರಂಟಿಗಳ ವಸ್ತುಗಳ ಮೇಳವನ್ನು ಸಚಿವರು ವೀಕ್ಷಿಸಿದರು. ವನ್ಯ ಜೀವಿಗಳಿಂದ ಹಾನಿಗೊಳಗಾದವರಿಗೆ ಸಚಿವ ಈಶ್ವರ ಖಂಡ್ರೆೆ ಅವರು ಪರಿಹಾರದ ಚೆಕ್ ಅನ್ನು ವಿತರಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗ್ಯಾಾರಂಟಿ ಯೋಜನೆಗಳ ಅನುಷ್ಠಾಾನ ಪ್ರಾಾಧಿಕಾರದ (ಕಲಬುರಗಿ ವಿಭಾಗ) ಉಪಾಧ್ಯಕ್ಷ ಎಸ್. ಆರ್ ಮೆಹರೂಜ್ ಖಾನ್, ಕರ್ನಾಟಕ ರಾಜ್ಯ ಗ್ಯಾಾರಂಟಿ ಯೋಜನೆಗಳ ಅನುಷ್ಠಾಾನ ಪ್ರಾಾಧಿಕಾರದ (ಬೆಂಗಳೂರು-1 ವಿಭಾಗ) ಉಪಾಧ್ಯಕ್ಷ ಸೂರಜ್ ಹೆಗಡೆ, ವಿಧಾನ ಪರಿಷತ್ ಸದಸ್ಯ ಭೀಮರಾವ ಬಿ. ಪಾಟೀಲ, ಅಚ್ಚುಕಟ್ಟು ಪ್ರದೇಶಾಭಿವೃದ್ಧಿಿ ಪ್ರಾಾಧಿಕಾರ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆಯ ಅಧ್ಯಕ್ಷ ಬಾಬು ಹೊನ್ನನಾಯ್ಕ, ಬೀದರ ನಗರಾಭಿವೃದ್ಧಿಿ ಪ್ರಾಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿಿ, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಜಿಲ್ಲಾ ಗ್ಯಾಾರಂಟಿ ಅನುಷ್ಠಾಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ, ಜಿಲ್ಲಾಧಿಕಾರಿ ಶಿಲ್ಪಾಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಿರೀಶ್ ಬದೋಲೆ, ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿಿ ಸೇರಿದಂತೆ ಇತರೆ ಅಧಿಕಾರಿಗಳು, ಜಿಲ್ಲಾ ಗ್ಯಾಾರಂಟಿ ಅನುಷ್ಠಾಾನ ಸಮಿತಿಯ ಉಪಾಧ್ಯಕ್ಷ, ತಾಲೂಕು ಅಧ್ಯಕ್ಷರು, ಸದಸ್ಯರ, ಪಂಚ ಗ್ಯಾಾರಂಟಿಗಳ ಲಾನುಭವಿಗಳು ಉಪಸ್ಥಿಿತರಿದ್ದರು.
ರಾಜ್ಯದ ಗ್ಯಾರಂಟಿ ದೇಶಕ್ಕೆ ಮಾದರಿ – ಸಚಿವ ಖಂಡ್ರೆ

