ಸುದ್ದಿಮೂಲವಾರ್ತೆ
ಕೊಪ್ಪಳ,ಸೆ.8: ಮಾಜಿ ಮುಖ್ಯಮಂತ್ರಿ ಡಿ ದೇವರಾಜ್ ಅರಸು ದಿನಾಚರಣೆ ಹಿನ್ನೆಲೆಯಲ್ಲಿ ರಾಯಚೂರಿನ ವೀರಶೈವ ಕಲ್ಯಾಣ ಮಂಟಪದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಾಧಕರು. ಜನಪ್ರತಿನಿಧಿಗಳಿಗೆ ಸನ್ಮಾನ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಹಿಂದುಳಿದ ವರ್ಗಗಳ ಸಂಘಟನೆಯ ರಾಜ್ಯಾಧ್ಯಕ್ಷ ಸೈದಪ್ಪ ಗುತ್ತೆದಾರ ಹೇಳಿದ್ದಾರೆ.
ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ ಸಿದ್ದರಾಮಯ್ಯ ಈ ಹಿಂದೆ ಸಿಎಂ ಆಗಿದ್ದಾಗ ನೇಮಿಸಿದ್ದ ಕಾಂತರಾಜ್ ಆಯೋಗದ ವರದಿಯನ್ನು ತಕ್ಷಣ ಜಾರಿಗೊಳಿಸಬೇಕು.ಹಿಂದುಳಿದ ವರ್ಗಗಳ 197 ಜಾತಿಗಳಿಗೂ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಬೇಕು.ಲೋಕಸಭೆ ಹಾಗು ವಿಧಾನಸಭೆಯಲ್ಲಿ ಹಿಂದುಳಿದ ವರ್ಗಗಳ ಮುಖಂಡರಿಗೆ ಟಿಕೆಟ್ ನೀಡಬೇಕು.ಅಭಿವೃದ್ಧಿ ನಿಗಮಕ್ಕೆ 1000 ಕೋಟಿ ರೂಪಾಯಿ ಅನುದಾನ ನೀಡಲು ಆಗ್ರಹಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮ ವನ್ನು ಗಂಗಾವತಿ ಶಾಸಕ ಗಾಲಿ ಜನಾರ್ಧನರಡ್ಡಿ ಹಾಗು ಕೆಕೆಆರ್ ಡಿಬಿ ಅಧ್ಯಕ್ಷ ಅಜಯಸಿಂಗ್ ಉದ್ಘಾಟಿಸಲಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ. ಇದೇ ಸಮಯದಲ್ಲಿ ಹಿಂದುಳಿದ ವರ್ಗಗಳಲ್ಲಿಯ ಸಾಧಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಒಬಿಸಿ ಘಟಕದ ಜಿಲ್ಲಾಧ್ಯಕ್ಷ ಬನ್ನೆಪ್ಪಗೌಡ, ಕ್ಷತ್ರೀಯ ಸಮಾಜದ ಶ್ರೀಮತಿ ಸರೋಜಾ ಬಾಕಳೆ, ಕಾಟಿಕ ಸಮಾಜದ ಉದಯ ಕಲಾಲ ಹಾಗು ಕುರುಬ ಸಮಾಜದ ಹನುಮಂತಪ್ಪ ಕೌದಿ ಇದ್ದರು.