ಬೆಂಗಳೂರು:ಕುಮಾರಸ್ವಾಮಿ ಅವರ ಆರೋಪಕ್ಕೆ ಮಾಧ್ಯಮಗಳ ಮುಂದೆ ಉತ್ತರ ನೀಡಿದರೆ ಸಾಲದು, ಅವರು ಪ್ರಧಾನಮಂತ್ರಿವರೆಗೂ ಹೋಗಿದ್ದು ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯಿಸುತ್ತಾ ಈ ವಿಚಾರ ಪ್ರಸ್ತಾಪಿಸಿದರು.
“ನಾಳೆಯಿಂದ ನಾನು ಹಾಗೂ ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲಾ ನಾಯಕರುಗಳ ಜೊತೆ ಸಭೆ ಮಾಡುತ್ತಿದ್ದು, ಕೆಲವು ಸಮುದಾಯಗಳ ಮುಖಂಡರ ಜೊತೆ ಚರ್ಚೆ ಮಾಡಬೇಕಿದೆ. ಅದರ ಭಾಗವಾಗಿ ಇಂದು ಪಕ್ಷದ ಅಲ್ಪಸಂಖ್ಯಾತ ನಾಯಕರ ಜೊತೆ ಸಭೆ ಮಾಡುತ್ತಿದ್ದೇನೆ” ಎಂದು ತಿಳಿಸಿದರು.