ಮೈಸೂರು, ಮೇ 14: ರಾಜ್ಯದ 30 ಲಕ್ಷ ಕಬ್ಬು ಬೆಳೆಗಾರರ ರೈತರ ಹಿತದೃಷ್ಟಿಯಿಂದ ನೂತನ ಸರ್ಕಾರದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರನ್ನು ಯಾವುದೇ ಕಾರಣಕ್ಕೂ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬಾರದು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಆದೇಶ ಜಾರಿಗೊಳಿಸದೇ ರೈತ ವಿರೋಧಿತನವನ್ನು ಸಕ್ಕರೆ ಕಾರ್ಖಾನೆ ಮಾಲೀಕರು ಮಾಡುತ್ತಿರುವುದರಿಂದ ರಾಜ್ಯದಲ್ಲಿ ಕಬ್ಬು ಬೆಳೆಗಾರರಿಗೆ ನ್ಯಾಯ ಸಿಗುತ್ತಿಲ್ಲ ಈ ಬಗ್ಗೆ ನೂತನ ಸರ್ಕಾರದ ಮುಖ್ಯಮಂತ್ರಿಯವರು ಗಂಭೀರ ಚಿಂತನೆ ನಡೆಸಬೇಕು ಎಂದು ಹೇಳಿದರು.
ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಸಿದ್ದರಾಮಯ್ಯನವರು ಕಬ್ಬಿಗೆ ಎಫ್ ಆರ್ ಪಿ ಹೆಚ್ಚುವರಿ ದರ ನಿಗದಿಗೆ ಒತ್ತಾಯಿಸಿದರು ನಾವು ರೈತರು 39 ದಿನಗಳ ಹೋರಾಟ ಹಿನ್ನೆಲೆಯಲ್ಲಿ ಪ್ರತಿ ಟನಗೆ 150 ರೂ ನಿಗದಿಪಡಿಸಿ ಆದೇಶ ಹೊರಡಿಸಿ ನ್ಯಾಯಾಲಯದಲ್ಲಿ ತಡೆಯಾಜ್ಞೆ ಮಾಡಲಾಗಿದೆ ನೂತನ ಸರ್ಕಾರ ತಕ್ಷಣವೇ ತಡೆಯಾಜ್ಞೆ ತೆರವುಗೂಳಿಸಿ ಕಬ್ಬು ಬೆಳೆಗಾರರಿಗೆ ಕಾರ್ಖಾನೆಗಳಿಂದ ಹಣ ಕೊಡಿಸಬೇಕು ಎಂದು ಒತ್ತಾಯಿಸಿದರು.
ಬೆಟ್ಟಿಂಗ್ ಭರಾಟೆ
ಚುನಾವಣೆ ನಂತರವೂ ಬೆಟ್ಟಿಂಗ್ ಭರಾಟೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಕರೆ ನೀಡಿದರು. ಅಂಥವರ ವಿರುದ್ಧ ಕಠಿಣ ಕ್ರಮ ಜಾರಿಯಾಗಲಿಲ್ಲ ಇದು ಮುಂದಿನ ಚುನಾವಣೆಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಚುನಾವಣಾ ಆಯೋಗವೆ ಬಹಿರಂಗ ಜೂಜಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಹಳ್ಳಿಗಳಲ್ಲಿ ದ್ವೇಷದ ವಿಷ ಬಿತ್ತಲು ಕಾರಣವಾಗುತ್ತದೆ.
ಪ್ರಜಾಪ್ರಭುತ್ವ ಚುನಾವಣೆ ದುರ್ಬಲವಾದರೆ ಮತ್ತಷ್ಟು ಗೋಮುಖ ವ್ಯಾಘ್ರಗಳು ಸಮಾಜಘಾತಕ ಶಕ್ತಿಗಳು ಚುನಾವಣೆಗೆ ನಿಲ್ಲುವಂತಾಗುತ್ತದೆ ಈ ಬಗ್ಗೆ ಆಯೋಗ ಕಠಿಣ ಚಿಂತನೆ ನಡೆಸಬೇಕು ಎಂದು ಹೇಳಿದರು.
ಸುದ್ದಿಗೋಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಮೈಸೂರು ಜಿಲ್ಲೆ ಮಹಿಳಾ ಅಧ್ಯಕ್ಷೆ ಕಮಲಮ್ಮ, ತಾಲೂಕು ಅಧ್ಯಕ್ಷ ಲಕ್ಷ್ಮಿಪುರ ವೆಂಕಟೇಶ್ ಇದ್ದರು.