ಸುದ್ದಿಮೂಲ ವಾರ್ತೆ
ಕುಷ್ಟಗಿ, ಮೇ. 17: ಕುಷ್ಟಗಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ದೊಡ್ಡನಗೌಡ ಪಾಟೀಲ್ ಅವರು ಬೆಂಗಳೂರಿನಲ್ಲಿ ಬಿಜೆಪಿ ಪ್ರಮುಖರನ್ನು ಬುಧವಾರ ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ ಮಾಡಿದರು.
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ. ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪಾಧ್ಯಕ್ಷ ಬಿ.ವೈ.ವಿಜೇಯಂದ್ರ ಹಾಗೂ ಎಂಎಲ್ಸಿ ನಾರಾಯಣಸ್ವಾಮಿ ಅವರನ್ನು ಭೇಟಿಯಾಗಿ ಕ್ಷೇತ್ರದ ಮತದಾರರು ಚುನಾವಣೆಯಲ್ಲಿ ತಮ್ಮನ್ನು ಆಯ್ಕೆ ಮಾಡಿರುವ ವಿಚಾರ ಪ್ರಸ್ತಾಪ ಮಾಡಿದರು. ಅಲ್ಲದೇ ಕ್ಷೇತ್ರದ ಅಭಿವೃದ್ಧಿ ಕುರಿತಾದ ತಮ್ಮ ಆಲೋಚನೆಗಳನ್ನು ಚರ್ಚೆ ಮಾಡಿದರು.
ಈ ವೇಳೆ ಬಿಜೆಪಿ ಕುಷ್ಟಗಿ ಮಂಡಲ ಅಧ್ಯಕ್ಷ ಬಸವರಾಜ ಹಳ್ಳೂರು, ಪ್ರಮುಖರಾದ ಶರಣು ತಳ್ಳಿಕೇರಿ, ಪ್ರಭಾಕರ ಚಿಣಿ, ಅಶೋಕ ಬಳೂಟಗಿ, ಮಲ್ಲಣ್ಣ ಪಲ್ಲೇದ್, ಪ್ರಕಾಶಗೌಡ ಬೆದವಟ್ಟಿ, ಲಾಡಸಾಬ ದೋಟಿಹಾಳ, ಶರಣಬಸವ ಇತರರು ಹಾಜರಿದ್ದರು.