ಸುದ್ದಿಮೂಲ ವಾರ್ತೆ
ಬೆಂಗಳೂರು, ಜು.12: ವಿಧಾನಸಭೆಯಲ್ಲಿ ಭಾರತೀಯ ಜನತಾ ಪಕ್ಷ ಪ್ರತಿಪಕ್ಷದ ಸ್ಥಾನ ಜೆಡಿಎಸ್ಗೆ ಬಿಟ್ಟುಕೊಡಲು ಚರ್ಚೆ ನಡೆದಿದೆ ಎಂಬ ವಿಷಯ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ವಿಧಾನಸಭೆಯಲ್ಲಿಂದು ಸುಳಿವು ನೀಡಿದರು.
ಬೆಂಗಳೂರು, ಜು.12: ವಿಧಾನಸಭೆಯಲ್ಲಿ ಭಾರತೀಯ ಜನತಾ ಪಕ್ಷ ಪ್ರತಿಪಕ್ಷದ ಸ್ಥಾನ ಜೆಡಿಎಸ್ಗೆ ಬಿಟ್ಟುಕೊಡಲು ಚರ್ಚೆ ನಡೆದಿದೆ ಎಂಬ ವಿಷಯ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ವಿಧಾನಸಭೆಯಲ್ಲಿಂದು ಸುಳಿವು ನೀಡಿದರು.
ವಿಧಾನಸಭೆಯಲ್ಲಿಂದು ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಮಾತನಾಡುತ್ತಾ, ಭಾರತೀಯ ಜನತಾ ಪಕ್ಷದವರು ಇನ್ನೂ ಪ್ರತಿಪಕ್ಷದ ನಾಯಕನನ್ನೇ ಆಯ್ಕೆ ಮಾಡುತ್ತಿಲ್ಲ ಎಂಬುದನ್ನು ಈ ಹಿಂದೆ ಬಿಜೆಪಿಯಲ್ಲಿದ್ದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಲಿ ಎಂದರು.
ಆಗ ಎದ್ದು ನಿಂತು ಮಾತನಾಡಿದ ಲಕ್ಷ್ಮಣ ಸವದಿ, ಭಾರತೀಯ ಜನತಾ ಪಕ್ಷದಲ್ಲಿ ಪ್ರತಿಪಕ್ಷದ ನಾಯಕರಾಗಲು ಯಾರೂ ಸಮರ್ಥರಿಲ್ಲ ಎಂಬ ಕಾರಣಕ್ಕಾಗಿ ಆಯ್ಕೆ ವಿಳಂಬವಾಗುತ್ತಿದೆ. ನಾನು ಈ ಹಿಂದೆ ಬಿಜೆಪಿಯಲ್ಲಿ ಇದ್ದೆ. ನನ್ನ ಹಳೆಯ ಸ್ನೇಹಿತರ ಮೂಲಗಳ ಪ್ರಕಾರ ಪ್ರತಿಪಕ್ಷದ ನಾಯಕನ ಸ್ಥಾನ ಜೆಡಿಎಸ್ನ ಎಚ್.ಡಿ. ಕುಮಾರಸ್ವಾಮಿಯವರಿಗೆ ವಹಿಸಲು ಬಿಜೆಪಿ ತೀರ್ಮಾನ ಮಾಡಿದೆ ಎಂದು ಹೇಳುವ ಮೂಲಕ ಗುಮಾನಿ ಹುಟ್ಟಿಸಿದರು.
ಪ್ರತಿಪಕ್ಷದ ನಾಯಕನ್ನು ಯಾಕೆ ಆಯ್ಕೆ ಮಾಡುತ್ತಿಲ್ಲ ಎಂದು ಚೆನ್ನಾಗಿ ಜಿ.ಟಿ. ದೇವೇಗೌಡರಿಗೆ ಗೊತ್ತಿದೆ. ಆದರೆ ಅವರು ಹೇಳಲಾಗದೆ ನನ್ನ ಬಾಯಿಂದ ಹೇಳಿಸುತ್ತಿದ್ದಾರೆ ಎಂದು ಸದನದಲ್ಲಿ ನಗೆ ಬೀರಿತು.