ಸುದ್ದಿಮೂಲ ವಾರ್ತೆ
ಮೈಸೂರು, ಆ.21:ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆ. 30 ರಂದು ರಾಜ್ಯ ಸರ್ಕಾರದ ಬಹು ನಿರೀಕ್ಷಿತ “ಗೃಹಲಕ್ಷ್ಮೀ” ಯೋಜನೆಗೆ ಚಾಲನೆ ಸಿಗಲಿದ್ದು, ಈ ಹಿನ್ನೆಲೆಯಲ್ಲಿ ಮೈದಾನದಲ್ಲಿ ನಡೆಯುತ್ತಿರುವ ಪೂರ್ವ ಸಿದ್ಧತೆಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ವೀಕ್ಷಿಸಿದರು.
ಈಗಾಗಲೇ ಶೇ.80 ರಷ್ಟು ನೋಂದಣಿ ಪ್ರಕ್ರಿಯೆ ಮುಗಿದಿದ್ದು,ನೋಂಣಿಗೆ ಸಮಯ ನಿಗದಿ ಮಾಡಿರುವುದಿಲ್ಲ. ನೋಂದಣಿ ನಿರಂತರವಾಗಿರುತ್ತದೆ ರಾಜ್ಯದ 130 ಲಕ್ಷ ಕುಟುಂಬಗಳು ಸ್ವಾವಲಂಬಿ ಜೀವನ ನಡೆಸಲು ಇದೊಂದು ಉತ್ತಮ ಯೋಜನೆಯಾಗಿದ್ದು, ಸ್ವಾತಂತ್ರ್ಯಾ ನಂತರದ ಬಹುದೊಡ್ಡ ಯೋಜನೆಯಾಗಿದೆ ಎಂದು ಸಚಿವರು ಹೇಳಿದರು.
ಮಹಿಳಾ ಸಶಸ್ತೀಕರಣದೊಂದಿಗೆ ಮಹಿಳೆಯರ ಆತ್ಮಗೌರವ ಹೆಚ್ಚಿಸುವ ಕಾರ್ಯಕ್ರಮವಾಗಿದೆ ಎಂದರು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲಿದ್ದು, ಅವರಿಗೆ ಸರಿಯಾದ ಊಟ, ಶೌಚಾಲಯ, ಬಸ್ ವ್ಯವಸ್ಥೆ, ಕುಡಿಯುವ ನೀರು ಸಮರ್ಪಕವಾಗಿರಲಿದೆ ಎಂದರು.