ಸುದ್ದಿಮೂಲ ವಾರ್ತೆ
ಚಿಕ್ಕಬಳ್ಳಾಪುರ,ಮೇ29 : ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಕಾನೂನು, ಮಾನವ ಹಕ್ಕುಗಳ ಮತ್ತು ಮಾಹಿತಿ ವಿಭಾಗದ ಜಿಲ್ಲಾಧ್ಯಕ್ಷ ಎಂ. ಮುನಿರಾಜು ಅವರು ರಾಜ್ಯ ಆಹಾರ ಮತ್ತು ನಾಗರಿಕರ ಸರಬರಾಜು ಹಾಗೂ ಗ್ರಾಹಕರ ವ್ಯವಹಾರ ಇಲಾಖೆಯ ಸಚಿವ ಡಾ. ಕೆ.ಎಚ್. ಮುನಿಯಪ್ಪ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.
ನಂತರ ಮಾತನಾಡಿದ ಅವರು ಕರ್ನಾಟಕದಲ್ಲಿ ಜನರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಚುನಾವಣಾ ಪೂರ್ವದಲ್ಲಿ ಪಕ್ಷವು ನೀಡಿರುವ ವಾಗ್ದಾನಗಳು ಮತ್ತು ಗ್ಯಾರಂಟಿಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದ್ದು ಯಾರಿಗೂ ಸಂದೇಹಗಳು ಬೇಡ ಎಂದು ಸ್ಪಷ್ಟಪಡಿಸಿದರು.
ಕೇಂದ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಚುನಾವಣೆಯ ಪೂರ್ವದಲ್ಲಿ ಮಾಡಿರುವ ಎಷ್ಟು ಘೋಷಣೆಗಳನ್ನು ತ್ವರಿತವಾಗಿ ಇತ್ಯರ್ಥ ಮಾಡಿದೆ ಎಂದು ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರದ ದುರಾಡಳಿತವನ್ನು ವಿರೋಧಿಸಿ ಜನ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ ಕಾಂಗ್ರೆಸ್ ಪಕ್ಷವು ಏನು ಮಾತು ಕೊಟ್ಟಿದೆ ಅದನ್ನು ಅನುಷ್ಠಾನಗೊಳಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಲಿದೆ ವಿನಾಕಾರಣ ವಿರೋಧಪಕ್ಷಗಳು ಗೊಂದಲದ ವಾತಾವರಣ ನಿರ್ಮಿಸಲು ಹೊರಟಿದ್ದಾರೆ ಇದಕ್ಕೆ ಯಾರು ಕಿವಿಗೊಡಬಾರದೆಂದು ಮನವಿ ಮಾಡಿದರು.
ಕೋಲಾರ ಲೋಕಸಭಾ ಕ್ಷೇತ್ರದ ಮಾಜಿ ಸಂಸದರು ಹಾಗೂ ಮಾಜಿ ಕೇಂದ್ರ ಸಚಿವರು ಆಗಿ ಸೇವೆ ಸಲ್ಲಿಸಿರುವ ಹಿರಿಯ ನಾಯಕರಾದ ಡಾಕ್ಟರ್ ಕೆ.ಎಚ್.ಮುನಿಯಪ್ಪ ಅವರು ಸಚಿವರಾಗಿದ್ದಾರೆ ಅವರು ಅಪಾರ ಅನುಭವವನ್ನು ಹೊಂದಿದ್ದು ಅವರ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯು ಮತ್ತಷ್ಟು ಪ್ರಗತಿ ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅದೇ ರೀತಿ ಚಿಕ್ಕಬಳ್ಳಾಪುರ ಜಿಲ್ಲೆಯ ಯುವಕರನ್ನು ಸೆಳೆದಿರುವ ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಶಾಸಕರು ಆಗಿರುವ ಡಾ. ಎಂ.ಸಿ. ಸುಧಾಕರ್ ಅವರು ಸಹ ಉನ್ನತ ಶಿಕ್ಷಣದ ಸಚಿವರಾಗಿದ್ದು ಅವರ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತು ಜಿಲ್ಲೆಯ ಸಮಗ್ರ ಅಭಿವೃದ್ಧಿಯ ವಿಚಾರದಲ್ಲಿ ಕ್ರಾಂತಿಕಾರಿ ಬದಲಾವಣೆಗಳು ಆಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.