ಸುದ್ದಿಮೂಲವಾರ್ತೆ
ಕೊಪ್ಪಳ ಆ 17: ಮಣ್ಣಿಗಾಗಿ, ದೇಶಕ್ಕಾಗಿ ಭಾರತದ ಹಲವಾರು ಮಹಾನ್ ನಾಯಕರು ಹೋರಾಟದ ಫಲವಾಗಿ ನಾವುಗಳು ಅವರನ್ನು ನಮಿಸುವದರ ಜೊತೆಗೆ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದು ಕೊಪ್ಪಳ ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ರತ್ನಂ ಪಾಂಡೆಯ ಕರೆ ನೀಡಿದರು.
ಇಂದು ಕೊಪ್ಪಳ ನಗರದ ತಾಲೂಕ ಕ್ರಿಡಾಂಗಣದಲ್ಲಿ ಜಿಲ್ಲಾ ಪಂಚಾಯತಿ, ತಾಲೂಕ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆ ಹಾಗು ನೆಹರು ಯುವ ಕೇಂದ್ರ ಸಹಯೋಗದಲ್ಲಿ ಏರ್ಪಡಿಸಿದ್ದ ನನ್ನ ಮಣ್ಣು, ನನ್ನ ದೇಶ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.
ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮದ ಉದ್ದೇಶ ಕುರಿತು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ವಿವರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಮಲ್ಲಪ್ಪ ತೊದಲಬಾಗಿ ಹಾಜರಿದ್ದವರಿಗೆ ಪಂಚಪ್ರಾಣ ಶಪಥ ಬೋಧಿಸಿದರು.
ತ್ರಿರಂಗದಿಂದ ರಂಜಿಸಿದ ನನ್ನ ಮಣ್ಣು, ನನ್ನ ದೇಶ, ಭಾರತ ನಕಾಶೆವೃತ್ತಕಾರವಾಗಿ ಚಿತ್ರ ಬಿಡಿಸಿ ಮಧ್ಯದಲ್ಲಿ ಭಾರತ ಮಾತೆಯ ನಕಾಶೆಯನ್ನು ಒಳಗೊಂಡಂತೆ ಕೆಸರಿ, ಬಿಳಿ, ಹಸಿರು ಬಣ್ಣದಿಂದ ಕನ್ನಡ, ಇಂಗ್ಲಿಷ್, ಹಿಂದಿ ಭಾಷೆಯಲ್ಲಿ ಅಕ್ಷರಗಳಿಂದ ಕೆಸರಿ, ಬಿಳಿ, ಹಸಿರು ಬಣ್ಣದಿಂದ ಹಾಜರಿದ್ದ ಎಲ್ಲರ ಮನೆಸೆಳೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು, ಸಹಾಯಕ ಲೆಕ್ಕಾಧಿಕಾರಿ, ಪಂಚಾಯತಿ ಅಬಿವೃದ್ದಿ ಅಧಿಕಾರಿಗಳು, ಕಾರ್ಯದರ್ಶಿಗಳು, ತಾ.ಪಂಯ ಎಲ್ಲಾ ಸಿಬ್ಬಂದಿಗಳು, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಗ್ರಾಮ ಕಾಯಕ ಮಿತ್ರರು ಹಾಜರಿದ್ದರು.