ಸುದ್ದಿಮೂಲ ವಾರ್ತೆ
ನವದೆಹಲಿ, ಏ.9: ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಂಸದೀಯ ಮಂಡಳಿಯು ಸೋಮವಾರ ಮತ್ತೊಂದು ಸಭೆ ನಡೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು
ಭಾನುವಾರ ನಡೆದ ಕೇಂದ್ರ ಸಂಸದೀಯ ಮಂಡಳಿ ಸಭೆ ಬಳಿಕ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಅಭ್ಯರ್ಥಿಗಳ ಆಯ್ಕೆ ಬಹುತೇಕ ಅಂತಿಮವಾಗಿದೆ. ಸೋಮವಾರ ಮತ್ತೊಂದು ಸಭೆಯ ಬಳಿಕ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.
ತಾವು ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವುದು ಅಂತಿಮವಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಿಎಂ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.