ಸುದ್ದಿಮೂಲ ವಾರ್ತೆ
ತುಮಕೂರು, ಏ.2: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಶ್ರೀ ಅಜಿತನಾಥ ಸ್ವಾಮಿ ಜೈನ ಶ್ವೇತಾಂಬರ ಮೂರ್ತಿ ಪೂಜಕ
ಸಂಘ ಮತ್ತು ಶ್ರೀ ಪಾರ್ಶ್ವನಾಥ ಜಿನಮಂದಿರದ ಸಹಯೋಗದಲ್ಲಿ ಏ.4 ರಂದು ಬೆ. 10.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮಆಯೋಜಿಸಲಾಗಿದೆ.
ರಾಜ್ಯ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಶ್ರೀ ಭಗವಾನ್ ಮಹಾವೀರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಸರಳ ಹಾಗೂ ಸಾಂಕೇತಿಕವಾಗಿ ಕಾರ್ಯಕ್ರಮವನ್ನು
ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ವಿ.ರವಿಕುಮಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.