ಸುದ್ದಿಮೂಲ ವಾರ್ತೆ ಬೀದರ್, ಜ.19:
ಅವಧಿ ಮುಗಿಯುತ್ತಿಿರುವ ಗ್ರಾಾಮ ಪಂಚಾಯತಿಗಳಿಗೆ ಈಗಿರುವ ಆಡಳಿತ ಸಮಿತಿ ಮರು ನೇಮಕ ಮಾಡಬೇಕು ಎಂದು ಕಮಲನಗರ ತಾಲೂಕಿನ ಮದನೂರ್ ಗ್ರಾಾಮ ಪಂಚಾಯತ್ ಅಧ್ಯಕ್ಷೆ ಪೂಜಾ ಗುಂಡಪ್ಪ ಬೆಲ್ಲೆ ಸರ್ಕಾರಕ್ಕೆೆ ಆಗ್ರಹಿಸಿದ್ದಾರೆ.
ಕರ್ನಾಟಕ ಸರ್ಕಾರವು ಆದೇಶ ಹೊರಡಿಸಿ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದೆ. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆೆಯಲ್ಲಿ ಪ್ರಜಾಪ್ರತಿನಿಧಿಗಳಿಗೆ ಅವಕಾಶ ನೀಡದೆ ಅಧಿಕಾರಿಗಳಿಗೆ ಆಡಳಿತ ನಡೆಸುವ ಅವಕಾಶ ನೀಡುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಅವರು ಹೇಳಿದ್ದಾರೆ.
2020ರಲ್ಲಿ ಕೋವಿಡ್ ಕಾರಣದಿಂದಾಗಿ ಗ್ರಾಾಮ ಪಂಚಾಯತಿಗಳ ಅವಧಿ ಮುಕ್ತಾಾಯವಾದಾಗ ಆಡಳಿತ ಸಮಿತಿಯ ಅವಧಿ ವಿಸ್ತರಿಸಬೇಕೆಂದು ಒತ್ತಾಾಯಿಸಿದ್ದನ್ನು ಪೂಜಾ ಗುಂಡಪ್ಪಾಾ ಬೆಲ್ಲೆ ಅವರು ಮುಖ್ಯಮಂತ್ರಿಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ಮತ್ತು ಗ್ರಾಾಮೀಣಾಭಿವೃದ್ಧಿಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಿಯಾಂಕ್ ಖರ್ಗೆ ಅವರನ್ನು ನೆನಪಿಸಿದ್ದಾರೆ.
ಸರ್ಕಾರವು ಗ್ರಾಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವ ಪ್ರಜಾಪ್ರಭುತ್ವ ವಿರೋಧಿ ಆದೇಶ ಹಿಂಪಡೆದು ಕಾಯ್ದೆೆಯ ಅನ್ವಯ ಆಡಳಿತಾವಧಿ ಕೊನೆಗೊಳ್ಳುತ್ತಿಿರುವ ಆಡಳಿತ ಸಮಿತಿಯ ಪುನರ್ ನೇಮಕ ಮಾಡಬೇಕೆಂದು ಪತ್ರಿಿಕಾ ಪ್ರಕಟಣೆ ಮೂಲಕ ಒತ್ತಾಾಯಿಸಿದ್ದಾರೆ.
ಮದನೂರ್ಪಂ. ಅಧ್ಯಕ್ಷೆ ಪೂಜಾ ಆಗ್ರಹ ಗ್ರಾಮ ಪಂಚಾಯತಿಗಳಿಗೆ ಆಡಳಿತ ಅಧಿಕಾರಿ ನೇಮಕ ಆದೇಶ ಹಿಂಪಡೆಯಿರಿ

