ಸುದ್ದಿಮೂಲ ವಾರ್ತೆ ಶಿವಮೊಗ್ಗ, ಅ.20:
ಮೂರು ತಿಂಗಳಲ್ಲಿ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪ್ರಾಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಇದೇ 23ರಿಂದ ನವೆಂಬರ್9ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಡಿಸೆಂಬರ್ 7 ರಂದು ಟಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುವುದು. ಕಲ್ಯಾಾಣ ಕರ್ನಾಟಕದಲ್ಲೂ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ 800 ಕೆಪಿಎಸ್ ಶಾಲೆಯನ್ನು ಆರಂಭಿಸಲಾಗುವುದು ಎಂದು ಹೇಳಿದ ಅವರು, 6ನೇ ತರಗತಿಯಿಂದ ಕನ್ನಡದ ಜೊತೆಗೆ ಇಂಗ್ಲೀಷ್ ಕಲಿಕೆಗೆ ಅವಕಾಶ ನೀಡಲಾಗುವುದು ಎಂದು ಹೇಳಿದ ಸಚಿವ ಮಧು ಬಂಗಾರಪ್ಪ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಬಾಕಿ ಇರುವ ಕೆಲಸಕ್ಕೆೆ ಶಿಕ್ಷಕರನ್ನು ಬಳಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.