ಸುದ್ದಿಮೂಲ ವಾರ್ತೆ ಕಲಬುರಗಿ, ಅ.07:
ಇಡೀ ವಿಶ್ವಕ್ಕೆೆ ರಾಮಾಯಣ ಮಹಾಕಾವ್ಯದ ಮೂಲಕ ಭರತ ಖಂಡದ ಸಂಸ್ಕೃತಿ, ಸಂಸ್ಕಾಾರ ಮತ್ತು ಮಾನವೀಯ ಮೌಲ್ಯವನ್ನು ತಿಳಿಸಿಕೊಟ್ಟ ಮೊದಲ ಮಹಾ ಕವಿ ಮಹರ್ಷಿ ವಾಲ್ಮೀಕಿಯವರಾಗಿದ್ದಾರೆ ಎಂದು ಶಾಸಕ ಅಲ್ಲಮಪ್ರಭು ಪಾಟೀಲ ಹೇಳಿದರು.
ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಸಮಾಜ ಕಲ್ಯಾಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಾಶ್ರಯದಲ್ಲಿ ಆಯೋಜಿಸಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋೋತ್ಸವ ಕಾರ್ಯಕ್ರಮದಲ್ಲಿ ರಾಮಾಯಣದ ರಚನೆಕಾರನ ಭಾವಚಿತ್ರಕ್ಕೆೆ ಪುಷ್ಪಾಾರ್ಚನೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಾಟಿಸಿ ಅವರು ಮಾತನಾಡಿದರು.
ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಮಹಾಕಾವ್ಯ ದೇಶದ ಸಾಹಿತ್ಯಕ್ಕೆೆ ಅತ್ಯುನ್ನತ ದೊಡ್ಡ ಕೊಡುಗೆಯಾಗಿದೆ. ಶಿಷ್ಠರನ್ನು ರಕ್ಷಿಸುವ ದುಷ್ಠರನ್ನು ಶಿಕ್ಷಿಸುವ ಕೆಲಸ ಮಾಡಬೇಕಿದೆ ಎಂದು ಅವರು ಅಭಿಪ್ರಾಾಯಪಟ್ಟರು.
ಎಂಎಲ್ಸಿಿ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ವಾಲ್ಮೀಕಿ ಸಮುದಾಯ ಮಾತೃ ಹದಯವಿದ್ದಂತೆ. ಹಿಂದುಳಿದ ಈ ಸಮುದಾಯ ಅಭಿವೃದ್ಧಿಿಗೆ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದರು. ಡಾ.ಉಪೇಂದ್ರ ನಾಯಕ್ ವಿಶೇಷ ಉಪನ್ಯಾಾಸ ನೀಡಿದರು.
ವೇದಿಕೆ ಕಾರ್ಯಕ್ರಮದ ಮುನ್ನ ನಗರದ ಸರ್ದಾರ ವಲ್ಲಭಭಾಯ್ ಪಟೇಲ್ ವೃತ್ತದಿಂದ ರಂಗಮಂದಿರ ವರೆಗೆ ನಡೆದ ವಾಲ್ಮೀಕಿ ಭಾವಚಿತ್ರದ ಭವ್ಯ ಮೆರವಣಿಗೆಗೆ ಮಹಾನಗರ ಪಾಲಿಕೆಯ ಪ್ರಥಮ ಪ್ರಜೆಯಾಗಿರುವ ಮಹಾಪೌರರಾದ ವರ್ಷಾ ರಾಜೀವ ಜಾನೆ ಅವರು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು. ಡಿ.ಸಿ. ಬಿ.ೌಜಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಎಸ್.ಡಿ. ಶರಣಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಾಧಿಕಾರಿ ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಮೊದಲಾದವರು ಇದ್ದರು.
ಕಾರ್ಯಕ್ರಮದಲ್ಲಿ ಗ್ಯಾಾರಂಟಿ ಅನುಷ್ಠಾಾನ ಪ್ರಾಾಧಿಕಾರದ ಜಿಲ್ಲಾಧ್ಯಕ್ಷೆ ಚಂದ್ರಿಿಕಾ ಪರಮೇಶ್ವರಿ, ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ನಂದಕುಮಾರ ಮಾಲಿಪಾಟೀಲ, ಗೌರವಾಧ್ಯಕ್ಷ ಗುರುರಾಜ ಎಚ್. ಸುಬೇದಾರ, ಸಮಾಜ ಕಲ್ಯಾಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀೀತಿ ದೊಡ್ಡಮನಿ ಸೇರಿದಂತೆ ನೂರಾರು ಸಂಖ್ಯೆೆಯಲ್ಲಿ ಸಮಾಜ ಬಾಂಧವರು, ಮುಖಂಡರು ಭಾಗವಹಿಸಿದ್ದರು.