ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ,ಅ.28: ನಗರದ ಮಿನಿ ವಿಧಾನಸೌಧದ ಬಳಿಯ ಆವರಣದಲ್ಲಿ ರಾಷ್ಟ್ರೀಯ ನಾಡ ಹಬ್ಬಗಳ ಆಚರಣೆ ಸಮಿತಿ ವತಿಯಿಂದ 14ನೇ ವರ್ಷದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ಶಾಸಕ ಬಿ. ಎನ್ ರವಿಕುಮಾರ್ ಮಾತನಾಡಿ, ಹಿಂದೂಗಳ ಪವಿತ್ರ ಗ್ರಂಥ ರಾಮಾಯಣ ಮಹಾಕಾವ್ಯವನ್ನು ರಚಿಸಿದ ಮಹಾಕವಿ ಮಹರ್ಷಿ ವಾಲ್ಮೀಕಿ, ರಾಮನ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕೆಂದು ಹಾಗೂ ಅವರು ಕಳ್ಳತನ ಮಾಡಿ ಜೀವನ ಸಾಗಿಸುತ್ತಿದ್ದ ರತ್ನಾಕರನಿಗೆ ನಾರದ ಮುನಿಗಳ ಉಪದೇಶದಿಂದ ತಪ್ಪಸ್ಸು ಮಾಡಿ ವಾಲ್ಮೀಕಿ ಮಹರ್ಷಿಯಾದ ನಂತರ ರಾಮಾಯಣವನ್ನು ರಚನೆ ಮಾಡಿದ್ದು,ರಾಮಾಯಣದಲ್ಲಿ ಬರುವ ಪ್ರತಿಯೊಂದು ಕತೆಯಲ್ಲೂ ಜೀವನದ ಮೌಲ್ಯಗಳು,ಗುರು ಹಿರಿಯರಿಗೆ ಯಾವ ರೀತಿ ಗೌರವ ನೀಡಬೇಕು ಮತ್ತಿತರ ವಿಷಯಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದ್ದು,ಇಂದಿನ ಮಕ್ಕಳು ಮೊದಲು ಕಲಿಯಬೇಕಾಗಿರುವುದು ಗುರು ಹಿರಿಯರನ್ನು,ತಂದೆ ತಾಯಿಗಳನ್ನು ಗೌರವಿಸುವುದು ಎಂದು ತಿಳಿಸಿದರು.
ಇ.ಓ ಮುನಿರಾಜು ಮಾತನಾಡಿ, ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣದಲ್ಲಿ ರಾಮನು ನಡೆದುಬಂದ ದಾರಿ ಬಗ್ಗೆ ಸವಿಸ್ತಾರವಾಗಿ ತಿಳಿಸಿದ್ದು, ಶ್ರೀರಾಮನ ವ್ಯಕ್ತಿತ್ವವನ್ನು ಇಂದಿನ ಯುನಜನತೆ ರೂಡಿಸಿಕೊಳ್ಳಬೇಕೆಂದು ತಿಳಿಸಿದರು.
ಇದಕ್ಕೂ ಮುನ್ನ ವಾಡಿಕೆಯಂತೆ ತಾಲ್ಲೂಕಿನ ತಲಕಾಯಲಬೆಟ್ಟದಲ್ಲಿ ಮಹರ್ಷಿ ವಾಲ್ಮೀಕಿ ದೇವಸ್ಥಾನದಲ್ಲಿ ಮೊದಲು ಪೂಜೆ ಸಲ್ಲಿಸಿ ನಂತರ ನಗರದ ಮಯೂರ ವೃತ್ತದ ಬಳಿ ಇರುವ ಮಹರ್ಷಿ ವಾಲ್ಮೀಕಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಯಿತು. ತಾಲ್ಲೂಕಿನ ನಗರ, ಗ್ರಾಮಗಳಿಂದ ಮಹರ್ಷಿ ವಾಲ್ಮೀಕಿ ಭಾವಚಿತ್ರವನ್ನು ಹೊತ್ತ ಪಲ್ಲಕಿಗಳು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಆಗಮಿಸಿದವು.
ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮುನಿಸ್ವಾಮಿರೆಡ್ಡಿ,ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್,ಕಾರ್ಯನಿರ್ವಣಾಧಿಕಾರಿ ಮುನಿರಾಜು,ಆರಕ್ಷಕ ವೃತ್ತ ನಿರೀಕ್ಷಕರು ಶ್ರೀನಿವಾಸ್ ,ಸಮಾಜ ಕಲ್ಯಾಣ ಇಲಾಖೆಯ ಜಗದೀಶ್ , ವಕೀಲರಾದ ವಿಜಯ ಶಂಕರ್ ಸೇರಿದಂತೆ ಮುಂತಾದವರು ಹಾಜರಿದ್ದರು.