ಸುದ್ದಿಮೂಲ ವಾರ್ತೆ ಮಸ್ಕಿ, ಜ.31:
ೆಬ್ರುವರಿ 5, 6 ಹಾಗೂ 7ರಂದು ರಾಯಚೂರಿನಲ್ಲಿ ನಡೆಯಲಿರುವ ಜಿಲ್ಲಾ ಉತ್ಸವದಲ್ಲಿ ಜನರು ಹೆಚ್ಚಿಿನ ಸಂಖ್ಯೆೆಯಲ್ಲಿ ಪಾಲ್ಗೊೊಳ್ಳುವಂತೆ ನೋಡಿಕೊಳ್ಳಬೇಕು ಎಂದು ತಾಲ್ಲೂಕು ಗ್ಯಾಾರಂಟಿ ಅನುಷ್ಠಾಾನ ಸಮಿತಿ ಅಧ್ಯಕ್ಷ ಮೈಬುಸಾಬ ಮುದ್ದಾಪುರ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾಾರಂಟಿ ಅನುಷ್ಠಾಾನ ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.ಉತ್ಸವದ ಯಶಸ್ಸಿಿಗೆ ತಾಲ್ಲೂಕಿನ ಜನರು ಹಾಗೂ ಅಧಿಕಾರಿಗಳ ಸಹಕಾರ ಅಗತ್ಯ. ಉತ್ಸವದ ವೇಳೆ ಶಿಸ್ತು, ಸುರಕ್ಷತೆ ಹಾಗೂ ಮೂಲಸೌಕರ್ಯಕ್ಕೆೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಲಾಯಿತು.
ತಹಶೀಲ್ದಾಾರ್ ಮಂಜುನಾಥ ಬೋಗಾವತಿ ಹಾಗೂ ತಾ.ಪಂ.ಇಒ ಅಮರೇಶ ಯಾದವ ಮಾತನಾಡಿ, ಉತ್ಸವಕ್ಕೆೆ ಜನರು ಹೆಚ್ಚಿಿನ ಸಂಖ್ಯೆೆಯಲ್ಲಿ ಬರುವ ನಿರೀಕ್ಷೆ ಇದೆ. ರಾಯಚೂರಿಗೆ ಹೆಚ್ಚುವರಿ ಬಸ್ಗಳನ್ನು ಓಡಿಸಬೇಕು ಎಂದು ಕೆಕೆಆರ್ಟಿಸಿ ಬಸ್ ಘಟಕದ ವ್ಯವಸ್ಥಾಾಪಕರಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ಯಾಾರಂಟಿ ಸಮಿತಿ ಸದಸ್ಯರು ಉಪಸ್ಥಿಿತರಿದ್ದರು.
ಉತ್ಸವದ ಯಶಸ್ಸಿಗೆ ಕೈಜೋಡಿಸಿ – ಮೈಬುಸಾಬ ಮುದ್ದಾಪುರ

