ಸುದ್ದಿಮೂಲ ವಾರ್ತೆ ಬೆಂಗಳೂರು, ಅ.02:
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಗರದ ಎಂ.ಎಸ್. ರಾಮಯ್ಯ ಅಸ್ಪತ್ರೆೆಯಲ್ಲಿ ೇಸ್ಮೇಕರ್ ಯಶಸ್ವಿಿ ಅಳವಡಿಕೆ ಮಾಡಲಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದೆ.
ಉಸಿರಾಟ ತೊಂದರೆಯಿಂದ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆೆಯಲ್ಲಿ ದಾಖಲಿಸಲಾಗಿತ್ತು. ತಪಾಸಣೆ ಬಳಿಕ ಅವರಿಗೆ ೇಸ್ಮೇಕರ್ ಅಳವಡಿಕೆ ಮಾಡಲಾಗಿದ್ದು, ಶುಕ್ರವಾರ ಅವರು ಆಸ್ಪತ್ರೆೆಯಿಂದ ಬಿಡುಗಡೆಯಾಗಲಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ, ಸಚಿವ ಪ್ರಿಿಯಾಂಕ್ ಖರ್ಗೆ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್ಮೇಕರ್ ಅಳವಡಿಕೆ ಯಶಸ್ವಿಿಯಾಗಿದೆ. ಇದು ಒಂದು ಸಣ್ಣ ಶಸಚಿಕಿತ್ಸೆೆಯಾಗಿತ್ತು. ಶಸಚಿಕಿತ್ಸೆೆಯ ನಂತರ ಅವರ ಆರೋಗ್ಯ ಸ್ಥಿಿರವಾಗಿದೆ. ಅಕ್ಟೋೋಬರ್ 3 ರಿಂದ ತಮ್ಮ ಕೆಲಸವನ್ನು ಪುನರಾರಂಭಿಸುವ ನಿರೀಕ್ಷೆಯಿದೆ. ಅವರು ಎಲ್ಲಾ ನಿಗದಿತ ಕಾರ್ಯಯೋಜನೆಗಳಿಗೆ ಹಾಜರಾಗುತ್ತಾಾರೆ. ಎಲ್ಲರೂ ನೀಡಿದ ಕಾಳಜಿ, ಬೆಂಬಲ ಮತ್ತು ಪ್ರೀೀತಿಗೆ ನಮ್ಮ ಕೃತಜ್ಞತೆಗಳು ಎಂದು ಹೇಳಿದ್ದಾರೆ.
ಈ ನಡುವೆ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆೆಯ ಚಿಕಿತ್ಸೆೆ ಪಡೆಯುತ್ತಿಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರು ಬುಧವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.
ಶೀಘ್ರ ಚೇತರಿಕೆಗೆ ಪಿಎಂ ಶುಭ ಹಾರೈಕೆ : ರಾಜ್ಯಸಭೆ ಪ್ರತಿಪಕ್ಷ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶೀಘ್ರ ಗುಣಮುಖರಾಗಲೆಂದು ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.
ಖರ್ಗೆ ಅವರೊಂದಿಗೆ ತಾವು ಮಾತನಾಡಿ, ಕ್ಷೇಮ ವಿಚಾರಿಸಿರುವುದಾಗಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಖರ್ಗೆ ಅವರ ಆರೋಗ್ಯ ಮತ್ತು ಸುದೀರ್ಘ ಜೀವನಕ್ಕಾಾಗಿ ದೇವರಲ್ಲಿ ಪ್ರಾಾರ್ಥಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

