ಸುದ್ದಿಮೂಲ ವಾರ್ತೆ
ಬೆಂಗಳೂರು, ನ.12: ದೆಹಲಿಯ ಕೆಂಪುಕೋಟೆ ಬಳಿ ನಡೆದ ಕಾರ್ಬಾಂಬ್ ಸ್ಫೋಟ ಕೇಂದ್ರ ಸರ್ಕಾರದ ವೈಫಲ್ಯ. ಭಯೋತ್ಪಾದಕ ಕೃತ್ಯದ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ಕೊಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಭದ್ರತೆಗೆ ಸಂಬಂಧಿಸಿದಂತೆ ಎನ್ಐಎ, ರಾ ನಂತಹ ಉನ್ನತ ಸಂಸ್ಥೆಗಳು ಕಾರ್ಯನಿರ್ವಹಿಸುವ ರಾಷ್ಟ್ರ ರಾಜಧಾನಿಯಲ್ಲಿ ಇಂತಹ ಘಟನೆ ನಡೆದಿರುವುದು ದುರದೃಷ್ಟಕರ. ದೆಹಲಿಯಲ್ಲಿ ಅಂತಹ ಎಲ್ಲಾ ಸಂಸ್ಥೆಗಳು ಇದ್ದರೂ, ಸರ್ಕಾರ ವಿಫಲವಾಗಿದೆ ಎಂದು ಖರ್ಗೆ ಆರೋಪಿಸಿದ್ದು, ತಮ್ಮ ಪಕ್ಷವು ಸಂಪೂರ್ಣ ವರದಿಗಾಗಿ ಕಾಯುತ್ತದೆ ಎಂದು ಹೇಳಿದರು.

