ಸುದ್ದಿಮೂಲ ವಾರ್ತೆ
ಮಾಲೂರು, ಮೇ 1: ಮಾಲೂರು ಶಾಸಕರಾಗಿದ್ದ ಅವಧಿಯಲ್ಲಿ ತಾಲೂಕಿನಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸಗಳೇ ನನ್ನ ಗೆಲುವಿಗೆ ಶ್ರೀರಕ್ಷೆ ಯಾಗಲಿದೆ ಎಂದು ಮಾಜಿ ಶಾಸಕ ಹಾಗೂ ಮಾಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆಎಸ್ ಮಂಜುನಾಥ್ ಗೌಡ ಹೇಳಿದರು.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಮಾಸ್ತಿ ಹೋಬಳಿಯ ರಾಜೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ತಮ್ಮ ಬೆಂಬಲಿಗರೊಂದಿಗೆ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾತನಾಡಿದರು.
ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿ ರುವ ಬಿಜೆಪಿ ಡಬಲ್ ಎಂಜಿನ್ ಸರ್ಕಾರಗಳು ಹಲವಾರು
ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು
ಕೋವಿಡ್ ಸಂದರ್ಭದಲ್ಲಿ ಕೋವಿಡ್ ಕೇರ್ ಉಚಿತ ಲಸಿಕೆ, ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ
ಶೌಚಾಲಯಗಳ ನಿರ್ಮಾಣ, ಅಟಲ್ ಭೂಜಲ ಯೋಜನೆಯಡಿ 1180 ಕೋಟಿ ರೂ. ವೆಚ್ಚದಲ್ಲಿ ಜಿಲ್ಲೆಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಅನುಮೋದನೆ ನೀಡಿದ್ದಾರೆ. ಅದರಲ್ಲಿ ತಾಲೂಕಿಗೆ 1150 ಕೋಟಿ ರೂ. ಗಳನ್ನು ನೀಡಿ ಪ್ರತಿ ಮನೆಗೆ ಶುದ್ಧವಾದ ಕುಡಿಯುವ ನೀರು ಸಂಪರ್ಕ ಕಲ್ಪಿಸುವ ನಲ್ಲಿಗಳನ್ನು ಕಲ್ಪಿಸಿದ್ದಾರೆ ಎಂದರು.
ಬಿಜೆಪಿ ಮುಖಂಡರುಗಳಾದ ಟಿ ಬಿ ಕೃಷ್ಣಪ್ಪ ಆನಂದ್ ಮೋಹನ್ ಬಾಬು ನಟರಾಜ್ ನಾರಾಯಣ ಸ್ವಾಮಿ ರವಿ
ರಮೇಶ್ ವೆಂಕಟೇಶ್ ಇನ್ನಿತರರು ಹಾಜರಿದ್ದರು