ಸುದ್ದಿಮೂಲ ವಾರ್ತೆ
ಕೆ.ಆರ್.ಪುರ.ನ.9:ಹಕ್ಕು ಪತ್ರಗಳ ವಿಲೇವಾರಿ ನಿಟ್ಟಿನಲ್ಲಿ ಅಧಿಕಾರಿಗಳು ತ್ವರಿತಗತಿಯಲ್ಲಿ ಕಾರ್ಯ ನಿರ್ವಹಿಸಿ ಪಲಾನುಭವಿಗಳಿಗೆ ನೀಡುವಂತೆ ಶಾಸಕಿ ಮಂಜುಳಾಅರವಿಂದ ಲಿಂಬಾವಳಿ ತಿಳಿಸಿದರು.
ಮಹದೇವಪುರ ಕ್ಷೇತ್ರದ ಕಣ್ಣೂರಿನ ರಂಗಮಂದಿರ ಆವರಣದಲ್ಲಿ ಕಣ್ಣೂರು ಗ್ರಾಮ ಪಂಚಾಯತಿಯ 2023-24 ಮೊದಲ ಸುತ್ತಿನ ಗ್ರಾಮ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಬಡವರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದ್ದು,ಮುಂದಿನ ದಿನಗಳಲ್ಲಿ ಬಡವರಿಗೆ ಸೂರು ನೀಡುವ ಕಾರ್ಯ ಮಾಡಲಾಗುವುದು ಎಂದು ವಿವರಣೆ ನೀಡಿದರು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಇರುವ ಕುಂದುಕೊರತೆಗಳ ಬಗ್ಗೆ ಚರ್ಚಿಸಿ, ಅವುಗಳ ನಿವಾರಣೆಗೆ ಶೀಘ್ರವಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಕಣ್ಣೂರು ಪಂಚಾಯತಿ ಅಧ್ಯಕ್ಷ ಕಣ್ಣೂರು ಅಶೋಕ್ ಮಾತನಾಡಿ, ಕಣ್ಣೂರು ಪಂಚಾಯತಿಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದ್ದು ಪಂಚಾಯತಿಯನ್ನು ಮಾದರಿ ಪಂಚಾಯತಿಯಾಗಿ ರೂಪಿಸುವುದಾಗಿ ಎಂದರು.
ಇದೇ ವೇಳೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದ್ದು, 16 ಜನ ಸ್ವಯಂಪ್ರೇರಿತರಾಗಿ ಅಂಗಾಂಗ ದಾನಕ್ಕೆ ತಮ್ಮ ಹೆಸರು ನೋಂದಾಯಿಸಿಕೊಂಡರು.
ಈ ಸಂದರ್ಭದಲ್ಲಿ ತಾಲ್ಲೂಕು ಕಾರ್ಯನಿರ್ವಾಹಣಾಧಿಕಾರಿ ವಸಂತ್ ಕುಮಾರ್, ತಾಲೂಕು ಶಿಕ್ಷಣಾಧಿಕಾರಿ ಡಾ. ಕೋಮಲ, ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್, ಉಪಾಧ್ಯಕ್ಷರಾದ ಲಲಿತಾ ದೇವರಾಜ್, ಸದಸ್ಯರಾದ ದೊಡ್ಡಣ್ಣ, ಸುಂದರ್ ಇದ್ದರು.