ಸುದ್ದಿಮೂಲ ವಾರ್ತೆ
ಬೆಂಗಳೂರು.ಏ.11: ಇನ್ನು ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಟ್ಟು ಬಿಜೆಪಿ ಹೈಕಮಾಂಡ್ ನಾಯಕರು ಹಲವು ಸಭೆಗಳನ್ನು ಮಾಡಿರುವುದು ಹಲವು ಚರ್ಚೆಗಳಿಗೆ ಕಾರಣವಾಗುತ್ತಿದೆ.
ಅಭ್ಯರ್ಥಿಗಳ ಆಯ್ಕೆ ಸಂಬಂಧ ಶನಿವಾರವೇ ನವದೆಹಲಿಗೆ ತೆರಳಿದ್ದ ಯಡಿಯೂರಪ್ಪ ಅವರು ಸೋಮವಾರ ಸಂಜೆ ನವದೆಹಲಿಯಿಂದ ಬೆಂಗಳೂರಿಗೆ ಮರಳಿದ್ದಾರೆ. ಅವರು ಮರಳಿದ ಬಳಿಕ ಅಮಿತ್ಶಾ, ಜೆ.ಪಿ. ನಡ್ಡಾ ಹಲವು ಸಭೆಗಳನ್ನು ನಡೆಸಿದ್ದಾರೆ. ಹೀಗೆ ಸಂಸದೀಯ ಮಂಡಳಿಯ ಸದಸ್ಯರನ್ನು ಕಳುಹಿಸಿ ಟಿಕೆಟ್ ಹಂಚಿಕೆ ಸಂಬಂಧ ಸಭೆಗಳನ್ನು ನಡೆಸುವುದರ ಔಚಿತ್ಯವೇನು ಎಂಬ ಪ್ರಶ್ನೆ ಹಲವರನ್ನು ಕಾಡುತ್ತಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಎಸ್ವೈ ಅವರನ್ನು ಬಿಜೆಪಿ ಸಭೆಯಲ್ಲಿ ಯಡಿಯೂರಪ್ಪ ಅವರಿಗೆ ಖುರ್ಚಿ ಇಲ್ಲವೇ? ಯಡಿಯೂರಪ್ಪ ಅವರು ಇಲ್ಲದೆ ಕರ್ನಾಟಕ ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆಯೇ? ಇದು ಲಿಂಗಾಯತ ನಾಯಕರಿಗೆ ಅವಮಾನವಲ್ಲವೇ? ಯಡಿಯೂರಪ್ಪ ಅವರನ್ನು ಟಿಶ್ಯೂ ಪೇಪರ್ ರೀತಿ ಉಪಯೋಗಿಸಿದ್ದಾರೆ ಎಂದು ಆರೋಪಿಸಿದೆ.