ಮಸ್ಕಿ:ಸಂಸ್ಕೃತಿ, ಪರಂಪರೆ, ಇತಿಹಾಸ ಇವೆಲ್ಲದಕ್ಕೂ ಮಾದರಿಯಾಗಿ ಭಾರತ ಮೆರೆಯುತ್ತಿದೆ. ಕಾಂಗ್ರೆಸ್ನದ್ದು ವಿದೇಶಿ ಸಿದ್ದಾಂತ. ರಾಷ್ಟ್ರೀಯತೆಯನ್ನು ಮರೆತು ವಿದೇಶಿ ಸಂಸ್ಕೃತಿಯೊಂದಿಗೆ ಕಾಂಗ್ರೆಸ್ ಸಾಗಿ ಬಂದಿರುವುದರಿಂದ ಇಂದು ನೆಲಕಚ್ಚಿದೆ. ಅಭಿವೃದ್ಧಿಯ ಜೊತೆಗೆ ರಾಷ್ಟ್ರೀಯತೆ ಮೌಲ್ಯಗಳ ಸಿದ್ಧಾಂತಕ್ಕೆ ಅನುಗುಣವಾಗಿ ಮುನ್ನಡೆಯುತ್ತಿರುವ ಬಿಜೆಪಿ ಇಂದು ವಿಶ್ವದಲ್ಲೇ ನಂ.1 ಪಕ್ಷಗಾಗಿ ಗುರುತಿಸಿಕೊಂಡಿದೆ ಎಂದು ಕೆ ವಿರೂಪಾಕ್ಷಪ್ಪ ಹೇಳಿದರು.
ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ Cದ ಬಿಜೆಪಿ ಕಾರ್ಯಾಲಯದಲ್ಲಿ ಹಿಂದುಳಿದ ವರ್ಗಗಳ ಜಿಲ್ಲಾ ಸಮಾವೇಶದಲ್ಲಿ ರಮಾನಂದ ಯಾದವ ಮಾತನಾಡಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಸ್ಕಿ ಕ್ಷೇತ್ರದಲ್ಲೂ ಅಭಿವೃದ್ಧಿಯಾಗಿದೆ. ಹಿಂದುಳಿದ ವರ್ಗದವರು ಸಹಿತ ವಿವಿಧ ವರ್ಗಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಅವಿರತ ಶ್ರಮಿಸಿದೆ, ಮಸ್ಕಿವಿಧಾನಸಭಾ ಕ್ಷೇತ್ರದಲ್ಲಿ ಅವರು ಹೆಚ್ಚಿನ ಅನುದಾನವನ್ನು ತಂದು ವಿಶೇಷವಾದ ಅಭಿವೃದ್ಧಿಯ ಶಕೆ ಅರಂಭಿಸಿರುವುದಕ್ಕೆ ಮಾಜಿ ಶಾಸಕ ಅವರನ್ನು ಪ್ರತಾಪ್ ಗೌಡ ಪಾಟೀಲ್ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಈ ವೇಳೆ ಪ್ರತಾಪ್ ಗೌಡ ಪಾಟೀಲ್,ವಿರುಪಾಕ್ಷಪ್ಪ ಕೆ,ಕೆ ಕರಿಯಪ್ಪ. ರಮಾನಂದ ಯಾದವ್, ಉಮೇಶ್ ಸಜ್ಜನ್, ಎನ್ ಶಂಕ್ರಪ್ಪ ವಕೀಲ, ಮಲ್ಲಪ್ಪ ಅಂಕುಶ ದೊಡ್ಡಿ, ಶಿವಪುತ್ರಪ್ಪ ಹರಳಹಳ್ಳಿ, ಅಮರೇಶಪ್ಪ ಮೈಲಾರ ಹಾಗೂ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.