ಸುದ್ದಿ ಮೂಲ ವಾರ್ತೆ
ತುಮಕೂರು ಮಾ.29: ಮಹಾವೀರ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ/ಸಂಗ್ರಹಣೆ ಮಾಡುವುದನ್ನು ನಿಷೇಧಿಸಲಾಗಿದೆ.
ಈ ನಿಷೇಧದನ್ವಯ ಮಹಾವೀರ ಜಯಂತಿ ನಿಮಿತ್ತ ಏಪ್ರಿಲ್ 3ರ ಸಂಜೆ 5 ರಿಂದ ಏಪ್ರಿಲ್ 4ರ ಮಧ್ಯರಾತ್ರಿ 12 ಗಂಟೆಯವರೆಗೆ ಪಾಲಿಕೆ ವ್ಯಾಪ್ತಿಯಲ್ಲಿ ಕಸಾಯಿಖಾನೆ ಹಾಗೂ ಎಲ್ಲಾರೀತಿಯ ಮಾಂಸ ಮಾರಾಟ ಮಳಿಗೆಗಳನ್ನು ಮುಚ್ಚತಕ್ಕದ್ದು ಎಂದು ಪಾಲಿಕೆ ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.