ಸುದ್ದಿಮೂಲ ವಾರ್ತೆ
ತುಮಕೂರು,ಏ.13: ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಏಪ್ರಿಲ್ 14 ರ ಮಧ್ಯರಾತ್ರಿ 12 ಗಂಟೆವರೆಗೆ ಮಾಂಸ ಮಾರಾಟ ಮತ್ತು ಸಂಗ್ರಹಣೆ ಮಾಡುವುದನ್ನು ನಿಷೇಧಿಸಲಾಗಿದೆ.
ಈ ಅವಧಿಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿರುವ ಕಸಾಯಿಖಾನೆ ಹಾಗೂ ಎಲ್ಲ ರೀತಿಯ ಮಾಂಸ ಮಾರಾಟ ಮಳಿಗೆಗಳನ್ನು ಮುಚ್ಚಬೇಕು ಎಂದು ಪಾಲಿಕೆ ಆರೋಗ್ಯಾಧಿಕಾರಿ ಡಾ.ಮದಕರಿ ನಾಯಕ ಅವರು ತಿಳಿಸಿದ್ದಾರೆ.