ಸುದ್ದಿಮೂಲ ವಾರ್ತೆ ಬೆಂಗಳೂರು, ಅ.24:
ಮುಖ್ಯಮಂತ್ರಿಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಒಪ್ಪಿಿಗೆ ಕೊಡಲಾಗಿದೆ.
ರಾಜ್ಯ ಉನ್ನತ ಮಟ್ಟದ ಒಪ್ಪಿಿಗೆ ನೀಡಿಕೆ ಸಮಿತಿಯ 66 ನೇ ಸಭೆ ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ, ಇದರಲ್ಲಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾಾವನೆಗಳು ಸೇರಿವೆ. ಒಟ್ಟು ಈ 13 ಯೋಜನೆಗಳಿಂದ 8,704 ನೇರ ಉದ್ಯೋೋಗಗಳು ಸೃಷ್ಟಿಿಯಾಗಲಿವೆ ಎಂದು ಹೇಳಿದರು.
11 ಹೊಸ ಹೂಡಿಕೆ ಯೋಜನೆಗಳ ಪೈಕಿ ತೇಜಸ್ ನೆಟ್ವರ್ಕ್ 542.19 ಕೋಟಿ ರೂ, ವಾಯು ಅಸೆಟ್ಸ್ 1,251 ಕೋಟಿ ರೂ, ಜಿಂದಾಲ್ ಸ್ಟೀಲ್ಸ್ 1,300.57 ಕೋಟಿ ರೂ, ಜಿಂದಾಲ್ ಎಲೆಕ್ಟ್ರಿಿಕಲ್ ಸ್ಟೀಲ್ 7,102 ಕೋಟಿ ರೂ, ಗ್ರಾಾಸಿಂ ಇಂಡಸ್ಟ್ರೀಸ್1,386 ಕೋಟಿ ರೂ, ಎಸ್ಎ್ಎಕ್ಸ್ ಇಂಡಿಯಾ 9,298 ಕೋಟಿ ರೂ, ಸ್ನೀಡರ್ ಎಲೆಕ್ಟ್ರಿಿಕ್ ಐಟಿ ಬಿಝಿನೆಸ್, ಎಚ್ಎಸ್ಎಸ್ ಟೆಕ್ಸ್ಟೈಲ್ಸ್ 740 ಕೋಟಿ ರೂ, ಸ್ಕೈಡರ್ ಎಲೆಕ್ಟ್ರಿಿಕ್ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ 1,520.75 ಕೋಟಿ ರೂ, ಕ್ಯೂಪಿಐಎಐ ಇಂಡಿಯಾ 1,136 ಕೋಟಿ ರೂ, ಟೊಯೋಟಾ ಇಂಡಸ್ಟ್ರೀಸ್ ಎಂಜಿನ್ ಇಂಡಿಯಾ ಲಿಮಿಟೆಡ್ 1,330 ಕೋಟಿ ರೂ ಮತ್ತು ರಿಲಯನ್ಸ್ ಕನ್ಸೂಮರ್ ಪ್ರಾಾಡಕ್ಟ್ಸ್ 1,622 ಕೋಟಿ ರೂ. ಹೂಡಿಕೆ ಮಾಡಲಿವೆ. ಮಿಕ್ಕಂತೆ, ಎಂಬೆಸಿ ಇಂಡಸ್ಟ್ರಿಿಯಲ್ ಪಾರ್ಕ್ ಮತ್ತು ಬಾಲಾಜಿ ವೇರ್ಸ್ ಕಂಪನಿಗಳು ಕ್ರಮವಾಗಿ 80 ಮತ್ತು 298.75 ಕೋಟಿ ರೂ. ಹೆಚ್ಚುವರಿ ಬಂಡವಾಳ ತೊಡಗಿಸಲಿವೆ ಎಂದು ಅವರು ಹೇಳಿದ್ದಾರೆ.
ಸಭೆಯಲ್ಲಿ ಉಪ ಮುಖ್ಯಮಂತ್ರಿಿ ಡಿ ಕೆ ಶಿವಕುಮಾರ್, ಇಂಧನ ಸಚಿವ ಕೆ ಜೆ ಜಾರ್ಜ್, ಕಾನೂನು ಸಚಿವ ಎಚ್.ಕೆ.ಪಾಟೀಲ, ಐಟಿ ಸಚಿವ ಪ್ರಿಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್, ಕಾರ್ಮಿಕ ಸಚಿವ ಸಂತೋಷ್ ಲಾಡ್ ಉಪಸ್ಥಿಿತರಿದ್ದರು.
ಕೈಗಾರಿಕೆಗಳ ಸ್ಥಾಾಪನೆಗೆ ಅನುಮೋದಿಸಲು ವಿಳಂಬ ಮಾಡಿದಲ್ಲಿ ಕ್ರಮ: ಸಿಎಂ
ಸುದ್ದಿಮೂಲ ವಾರ್ತೆ
ಬೆಂಗಳೂರು, ಅ.24: ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಾಪನೆಗೆ ಕಾಲಮಿತಿಯಲ್ಲಿ ಅನುಮೋದನೆಗಳನ್ನು ನೀಡಲು ವಿಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಸೂಚನೆ ನೀಡಿದರು.
ವಿಧಾನಸೌಧ ಸಭಾಂಗಣದಲ್ಲಿ ನಡೆದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೈಗಾರಿಕೆಗಳ ಆರಂಭಕ್ಕೆೆ ಅಗತ್ಯವಾದ ಭೂ ಬಳಕೆ ಬದಲಾವಣೆ ಪ್ರಕ್ರಿಿಯೆ ಸೇರಿದಂತೆ ವಿವಿಧ ಎನ್ಒಸಿಗಳ ನೀಡಿಕೆಯ ಕಾಲಮಿತಿಯನ್ನು ಕಡಿಮೆ ಮಾಡಬೇಕು. ಕಾಲಮಿತಿಯನ್ನು ಕಡಿಮೆ ಮಾಡುವ ಬಗ್ಗೆೆ ವಿವರವಾದ ಪ್ರಸ್ತಾಾವನೆಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆೆ ಅವಕಾಶ ನೀಡಬಾರದು ಎಂದು ತಾಕೀತು ಮಾಡಿದರು.
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಅಗ್ನಿಿಶಾಮಕ ಇಲಾಖೆ ಅನುಮೋದನೆ ವಿಳಂಬವಾಗುತ್ತಿಿದ್ದು, ಇದನ್ನು ತ್ವರಿತಗೊಳಿಸಬೇಕು. ಇದಕ್ಕಾಾಗಿ ಮಂಡಳಿಯ ನಿಯಮಾವಳಿಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಬೇಕು. ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಅನುಮೋದನೆ ನೀಡುವ ಕಾಲಮಿತಿಯನ್ನು ಮರು ನಿಗದಿಪಡಿಸಬೇಕು. ಕಾಲಮಿತಿಯಲ್ಲಿ ಅನುಮೋದನೆಗಳನ್ನು ನೀಡಲು ವಿಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಕೈಗಾರಿಕೆಗಳಿಗೆ ರಸ್ತೆೆ, ನೀರು, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವ ಕುರಿತಾಗಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಿ ಅವರು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.
ಕುಂಟು ನೆಪ ಬೇಡ:
ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಿಸುವ ಸಲುವಾಗಿ ಅಧಿಕಾರಿಗಳು ನ್ಯಾಾಯಾಲಯಗಳ ತೀರ್ಪಿನ ಕುಂಟು ನೆಪ ಹೇಳಿದರೆ ಸಹಿಸುವುದಿಲ್ಲ. ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಇದಕ್ಕಾಾಗಿ ಭೂ ಬಳಕೆ ಬದಲಾವಣೆ ಪ್ರಕ್ರಿಿಯೆ ಸೇರಿದಂತೆ ವಿವಿಧ ಎನ್ಒಸಿಗಳ ನೀಡಿಕೆಯ ಕಾಲಮಿತಿಯನ್ನು ಕಡಿಮೆ ಮಾಡಬೇಕು. ಕಾಲಮಿತಿಯನ್ನು ಕಡಿಮೆ ಮಾಡುವ ಬಗ್ಗೆೆ ವಿವರವಾದ ಪ್ರಸ್ತಾಾವನೆಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆೆ ಅವಕಾಶ ನೀಡಬಾರದು ಎಂದು ಹೇಳಿದರು.
ರಾಜ್ಯದಲ್ಲಿ ಈ ವರ್ಷದ ಆರಂಭದಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 10.27 ಲಕ್ಷ ಕೋಟಿ ರೂ. ಹೂಡಿಕೆ ಆಕರ್ಷಿಸಲಾಗಿದ್ದು, ಈಗಾಗಲೇ ಶೇ.60ರಷ್ಟು ಹೂಡಿಕೆಗಳು ಅನುಷ್ಠಾಾನ ಹಂತದಲ್ಲಿವೆ ಎಂದಿದ್ದಾರೆ.
ಸುಮಾರು ರೂ.1.5ಲಕ್ಷ ಕೋಟಿಗೂ ಹೆಚ್ಚಿಿನ ಬಂಡವಾಳ ಹೂಡಿಕೆ ಪ್ರಸ್ತಾಾವನೆಗಳು ವಿವಿಧ ಹಂತದಲ್ಲಿವೆ. ಸುಪ್ರೀಂಕೋರ್ಟ್ ತೀರ್ಪಿನ ನೆಪ ಹೇಳಿಕೊಂಡು ಅಧಿಕಾರಿಗಳು ಕೂರಬಾರದು. ಅಕ್ಕ ಪಕ್ಕದ ರಾಜ್ಯಗಳಿಗೆ ಇರುವುದೂ ಇದೇ ಸುಪ್ರೀಂಕೋರ್ಟ್. ಬೇರೆ ರಾಜ್ಯಗಳಿಗೆ ಆಗದ ಸಮಸ್ಯೆೆ ನಮಗೆ ಆಗತ್ತೆೆ ಅನ್ನುವ ನೆಪ ಹೇಳಿಕೊಂಡು ಕೂತರೆ ಕ್ರಮ ಜರುಗಿಸಬೇಕಾಗತ್ತೆೆ ಎಂದು ಎಚ್ಚರಿಕೆ ನೀಡಿದರು.

