ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.8: ನಗರದಲ್ಲಿ ಮತದಾನ ಮಾಡುವ ಪ್ರತಿಯೊಬ್ಬರೂ ಮತಚಲಾಯಿಸುಂತೆ ಮಾಡಿ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ವಿಸಬೇಕೆಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ತಿಳಿಸಿದರು.
ಪಶ್ಚಿಮ ಹಾಗೂ ದಕ್ಷಿಣ ವಲಯದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಪದಾಧಿಕಾರಿಗಳೊಂದಿಗೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಚ್ಚು ಮತದಾನವಾಗಬೇಕೆಂಬ ಉದ್ದೇಶದಿಂದ ಚುನಾವಣಾ ಆಯೋಗವು ಮತಗಟ್ಟೆಗಳ ಬಳಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಈ ಬಗ್ಗೆ ಜನರಲ್ಲಿ ಹೆಚ್ಚು ಅರಿವು ಮೂಡಿಸಬೇಕಿದೆ ಎಂದು ಹೇಳಿದರು.
ನಗರದಲ್ಲಿ 80 ವರ್ಷ ಮೇಲ್ಪಟ್ಟವರಿಗಾಗಿ ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ ಮಾಡಲಾಗಿದೆ. ಅದರ ಸದುಪಯೋಗವನ್ನು ಎಲ್ಲಾ ಹಿರಿಯ ನಾಗರಿಕರು ಪಡೆದುಕೊಂಡು ಮತ ಚಲಾಯಿಸಬೇಕು. ಯುವ ಮತದಾರರಲ್ಲಿ ಮತದಾನದ ಪ್ರಾಮುಖ್ಯತೆ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು.
ಧ್ವನಿವರ್ಧಕಗಳ ಮೂಲಕ ಜಾಗೃತಿ:
ಮತದಾನ ಮಾಡುವ ಬಗ್ಗೆ ನಾಗರಿಕರಲ್ಲಿ ಹೆಚ್ಚು ಅರಿವು ಮೂಡಿಸುವ ಸಲುವಾಗಿ ಪಾಲಿಕೆ ಘನತ್ಯಾಜ್ಯ ವಿಭಾಗದ ಆಟೋ ಟಿಪ್ಪರ್ ಗಳಲ್ಲಿ ಧ್ವನಿ ವರ್ಧಕಗಳ ಮೂಲಕ ಮತದಾನದ ಪ್ರಾಮುಖ್ಯತೆಗ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ.
ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಜೊತೆ ನಡೆದ ಸಭೆಯಲ್ಲಿ ನಾಟಕ ನಿರ್ದೇಶಕರಾದ ಟಿ.ಎನ್.ಬಾಲಕೃಷ್ಣ ಅವರ ನೇತೃತ್ವದಲ್ಲಿ ಬಿ.ಎಂ.ಟಿ.ಸಿ-ಕೆ.ಎಸ್.ಆರ್.ಟಿ.ಸಿಯ ನಾಟಕ ತಂಡವು “ಮತದಾನ ಸಂಕಲ್ಪ” ಎಂಬ ಜಾಗೃತಿ ನಾಟಕವನ್ನು ಪ್ರದರ್ಶಿಸಿದರು.
ಈ ವೇಳೆ ವಲಯ ಆಯುಕ್ತರಾದ ಡಾ. ಆರ್.ಎಲ್.ದೀಪಕ್, ಶ್ರೀ ಜಯರಾಮ್ ರಾಯ್ಪುರ, ಶ್ರೀ ರೆಡ್ಡಿ ಶಂಕರಬಾಬು, ಪ್ರೀತಿ ಗೆಹ್ಲೋಟ್, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷಾದ ಸಂಗಪ್ಪ, ಸ್ವೀಪ್ ನೋಡಲ್ ಅಧಿಕಾರಿ ಸಿದ್ದೇಶ್ವರ, ವಲಯ ಜಂಟಿ ಆಯುಕ್ತರಾದ ಲೋಕನಾಥ್, ಜಗದೀಶ್ ನಾಯ್ಕ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Voter turnout should be increased in Bengaluru: Tushar Girinath