ಸುದ್ದಿಮೂಲ ವಾರ್ತೆ
ಬೆಂಗಳೂರು ಮಾ.29: ರಾಜ್ಯದಲ್ಲಿ 5 ದಿನಗಳು ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ನೀಡಿದೆ.
ಮದ್ಯ ಪ್ರದೇಶದಿಂದ ತಮಿಳುನಾಡಿನಲ್ಲಿ ಗಾಳಿಯ ದಿಕ್ಕಿನ ಬದಲಾವಣೆಯಿಂದಾಗಿ ಬೆಂಗಳೂರು ಸೇರಿ ಹಲವೆಡೆ ಮಳೆಯಾಗುವ ಸಂಭವ ಹೆಚ್ಚಿದೆ ಎಂದು ಇಲಾಖೆ ಸೂಚಿಸಿದೆ.
ದಕ್ಷಿಣ ಒಳನಾಡಿಗೆ ಇಂದಿನಿಂದ ಐದು ದಿನಗಳವರೆಗೂ ಮಳೆ ಇರಲಿದ್ದು, ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ, ಸೇರಿದಂತೆ ಹಲವೆಡೆ ಮಳೆಯಾಗಲಿದೆ. ಅದೇ ರೀತಿ ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದ್ದು, ಕೊಡಗು, ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಎಂದು ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಇಂದು ಮೋಡ ಕವಿದ ವಾತಾವರಣ ಹಾಗೂ ಗಾಳಿಯ ಪ್ರಮಾಣ ಹೆಚ್ಚಾಗಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಜ್ಞ ಎ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.