ಸುದ್ದಿಮೂಲ ವಾರ್ತೆ ಬೆಂಗಳೂರು, ಜ.06:
ಮಲೇಷ್ಯಾಾದ ಪ್ರಮುಖ ಸೆಮಿಕಂಡಕ್ಟರ್ ಹಬ್ ಪೆನಾಂಗ್ ರಾಜ್ಯದಲ್ಲಿ ಕ್ವಾಾಂಟಮ್ ತಂತ್ರಜ್ಞಾನ ಅಭಿವೃದ್ಧಿಿಯಲ್ಲಿ ಸಹಭಾಗಿತ್ವಕ್ಕೆೆ ಆಸಕ್ತಿಿ ವ್ಯಕ್ತಪಡಿಸಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ತಿಳಿಸಿದರು.
ವಿಕಾಸಸೌಧದಲ್ಲಿ ಮಂಗಳವಾರ ಪೆನಾಂಗ್ ರಾಜ್ಯದ ಉಪ ಮುಖ್ಯಮಂತ್ರಿಿ ಜಗದೀಪ್ ಸಿಂಗ್ ದಿಯೋ ನೇತೃತ್ವದ ನಿಯೋಗದೊಂದಿಗೆ ಸಭೆ ನಡೆಸಿದ ನಂತರ ಸಚಿವರು ಈ ವಿಷಯ ತಿಳಿಸಿದರು.
ಸಭೆಯಲ್ಲಿ ಮಾತನಾಡಿದ ಪೆನಾಂಗ್ ಉಪಮುಖ್ಯಮಂತ್ರಿಿ ಜಗದೀಪ್ ಸಿಂಗ್ ದಿಯೋ ಪೆನಾಂಗ್ ಭೌಗೋಳಿಕವಾಗಿ ಸಣ್ಣ ರಾಜ್ಯವಾಗಿದ್ದರೂ, ಇಂದು ಜಾಗತಿಕ ಮಟ್ಟದ ಸೆಮಿಕಂಡಕ್ಟರ್ ಶಕ್ತಿಿಯಾಗಿ ಹೊರಹೊಮ್ಮಿಿದೆ. ಇದಕ್ಕೆೆ ಮುಖ್ಯ ಕಾರಣ ನಮ್ಮಲ್ಲಿರುವ ಬಲವಾದ ಉದ್ಯಮ ಮತ್ತು ಸಂಶೋಧನಾ ಸಹಭಾಗಿತ್ವ ಇದರಲ್ಲಿ ಪೆನಾಂಗ್ ವಿಶ್ವವಿದ್ಯಾಾಲಯವು ನಿರ್ಣಾಯಕ ಪಾತ್ರ ವಹಿಸಿದೆ. ಉದ್ಯಮಗಳಿಗೆ ನೇರವಾಗಿ ಬೆಂಬಲ ನೀಡುವಂತ ಸಂಶೋಧನಾ ಪರಿಸರ ವ್ಯವಸ್ಥೆೆಯನ್ನು ವಿವಿ ನಿರ್ಮಿಸಿದೆ.
ಇದೇ ಮಾದರಿಯನ್ನು ಕರ್ನಾಟಕ ಮತ್ತು ಪೆನಾಂಗ್ ನಡುವೆ ವಿಸ್ತರಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಾಯಪಟ್ಟರು.
ತ್ಯಾಾಜ್ಯದಿಂದ ಸಂಪತ್ತು:
ಚರ್ಚೆಯ ವೇಳೆ ಸಚಿವ ಎನ್.ಎಸ್. ಭೋಸರಾಜು ಅವರು ಸಣ್ಣ ನೀರಾವರಿ ಕ್ಷೇತ್ರದಲ್ಲಿ ಕರ್ನಾಟಕ ಸಾಧಿಸಿರುವ ಮೈಲಿಗಲ್ಲುಗಳನ್ನು ಪರಿಚಯಿಸಿದರು. ವಿಶೇಷವಾಗಿ ರಾಜ್ಯದ ತ್ಯಾಾಜ್ಯದಿಂದ ಸಂಪತ್ತು’ ಪರಿಕಲ್ಪನೆಯಡಿ ಜಾರಿಗೆ ತಂದಿರುವ ಕೆ.ಸಿ. ವ್ಯಾಾಲಿ (ಕೋರಮಂಗಲ-ಚಲ್ಲಘಟ್ಟ) ಮತ್ತು ಎಚ್.ಎನ್. ವ್ಯಾಾಲಿ (ಹೆಬ್ಬಾಾಳ-ನಾಗವಾರ) ಯೋಜನೆಗಳ ಬಗ್ಗೆೆ ಗಮನ ಸೆಳೆದರು.
ನಗರದ ತ್ಯಾಾಜ್ಯ ನೀರನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ, ಅದನ್ನು ಕೋಲಾರ ಮತ್ತು ಚಿಕ್ಕಬಳ್ಳಾಾಪುರದಂತಹ ಬರಪೀಡಿತ ಜಿಲ್ಲೆಗಳ ಕೆರೆಗಳಿಗೆ ತುಂಬಿಸುವ ಮೂಲಕ ಅಂತರ್ಜಲ ಮಟ್ಟ ಯಶಸ್ವಿಿಯಾಗಿ ಹೆಚ್ಚಿಿಸಿದ್ದೇವೆ. ಕೃಷಿ ಚಟುವಟಿಕೆಗಳಿಗೆ ಇದು ಜೀವ ತುಂಬಿದೆ ಎಂದು ಸಚಿವರು ನಿಯೋಗಕ್ಕೆೆ ವಿವರಿಸಿದರು. ಈ ಸುಸ್ಥಿಿರ ಅಭಿವೃದ್ಧಿಿ ಮಾದರಿಗೆ ನಿಯೋಗ ಮೆಚ್ಚುಗೆ ವ್ಯಕ್ತಪಡಿಸಿತು.
ಕರ್ನಾಟಕ ಸರ್ಕಾರ ಯುವಜನರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ರೂಪಿಸಿರುವ ಮಹತ್ವಾಾಕಾಂಕ್ಷೆಯ ’ಕ್ವಾಾಂಟಮ್ ಆಕ್ಷನ್ ಪ್ಲಾಾನ್’ ನಲ್ಲಿ ಭಾಗಿಯಾಗಲು ಪೆನಾಂಗ್ ನಿಯೋಗ ಉತ್ಸುಕತೆ ತೋರಿತು. ಪೂರ್ವದ ಸಿಲಿಕಾನ್ ವ್ಯಾಾಲಿ ಎಂದು ಕರೆಯಲ್ಪಡುವ ಪೆನಾಂಗ್ ಜೊತೆಗಿನ ಸಹಭಾಗಿತ್ವಕ್ಕೆೆ ನಮ್ಮ ಸರ್ಕಾರ ಮುಕ್ತವಾಗಿದೆ ಎಂದು ಸಚಿವರು ಹೇಳೀದರು.
ಬೆಂಗಳೂರು ಎಲೆಕ್ಟ್ರಾಾನಿಕ್ಸ್ ಕ್ಷೇತ್ರದಲ್ಲಿ ಹಾಗೂ ಪೆನಾಂಗ್ ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಹೊಂದಿರುವ ಪರಿಣತಿಯ ಸಮ್ಮಿಿಲನದಿಂದ ವಿುಲ ಅವಕಾಶಗಳು ಸೃಷ್ಟಿಿಯಾಗಲಿವೆ ಎಂದು ಉಭಯ ನಾಯಕರು ಅಭಿಪ್ರಾಾಯವ್ಯಕ್ತಪಡಿಸಿದರು.
ಉಪಮುಖ್ಯಮಂತ್ರಿಿ ಜಗದೀಪ್ ಸಿಂಗ್ ದಿಯೋ ಅವರು ಸಚಿವ ಭೋಸರಾಜು ಅವರಿಗೆ ಮಲೇಷ್ಯಾಾ ಮತ್ತು ಪೆನಾಂಗ್ಗೆ ಭೇಟಿ ನೀಡುವಂತೆ ಅಧಿಕೃತ ಆಹ್ವಾಾನ ನೀಡಿದರು. ವಿಶೇಷವಾಗಿ ಪೆನಾಂಗ್ನ ವಿಶ್ವವಿದ್ಯಾಾಲಯದ ಸಂಶೋಧನಾ ಸೌಲಭ್ಯಗಳು ಮತ್ತು ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆೆಯನ್ನು ಖುದ್ದಾಗಿ ವೀಕ್ಷಿಸಿ, ಮಾನವ ಸಂಪನ್ಮೂಲ ಅಭಿವೃದ್ಧಿಿ ಒಪ್ಪಂದವನ್ನು ಅಂತಿಮಗೊಳಿಸಲು ಈ ಭೇಟಿ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಐಟಿ, ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ. ಎನ್. ಮಂಜುಳಾ, ಕೆ-ಸ್ಟೆೆಪ್ಸ್ ವ್ಯವಸ್ಥಾಾಪಕ ನಿರ್ದೇಶಕ ಸದಾಶಿವ ಪ್ರಭು ಸೇರಿದಂತೆ ಪೆನಾಂಗ್ ರಾಜ್ಯದ ಹಿರಿಯ ಅಧಿಕಾರಿಗಳು ಇದ್ದರು.
ಪೆನಾಂಗ್ ರಾಜ್ಯದ ಜಗದೀಪ್ ಸಿಂಗ್ ದಿಯೋ ನಿಯೋಗದ ಜತೆ ಸಚಿವ ಭೋಸರಾಜು ಸಭೆ ಮಲೇಷ್ಯಾದ ಸೆಮಿಕಂಡಕ್ಟರ್ ಹಬ್ ಪೆನಾಂಗ್ ಸಹಭಾಗಿತ್ವದಲ್ಲಿ ಕ್ವಾಾಂಟಮ್ ಅಭಿವೃದ್ಧಿ

