ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.21: ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಮತ್ತಷ್ಟು ಅಭಿವೃದ್ಧಿಗೆ ಬಹುಮತದಿಂದ ಗೆಲ್ಲಿಸಿ ಎಂದು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಜೆ.ಸಿ ನಗರದಲ್ಲಿ ಇಂದು, ಬೂತ್ ಮಟ್ಟದ ಸಭೆ ನಡೆಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಯು 140 ಕಿಂತ ಹೆಚ್ಚಿನ ಸ್ಥಾನವನ್ನು ಗೆದ್ದು, ಬಿಜೆಪಿ ಏಕಾಂಗಿಯಾಗಿ ಸರ್ಕಾರವನ್ನು ನಡೆಸಬೇಕು. ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರ ನಾಯಕತ್ವದ ಬಿಜೆಪಿ ಸರ್ಕಾರವು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ ಎಂದರು.
ಕೋವಿಡ್ ಸಂದರ್ಭದಲ್ಲಿ ಜನರಿಗೆ ಮುಖಂಡರು ಮೂರು ಬಾರಿ ಆಹಾರ ಕಿಟ್ ಗಳನ್ನು ವಿತರಿಸಿದ್ದಾರೆ. ಪ್ರತಿಯೊಂದು ಕುಟುಂಬಕ್ಕೂ ಆಹಾರವನ್ನು ತಲುಪಿಸುವಂತಹ ಕೆಲಸವನ್ನು ಮಾಡಿದ್ದಾರೆ. ಇದರ ಜೊತೆಗೆ ಕುಟುಂಬಗಳಿಗೆ ಉಚಿತವಾಗಿ ಮಾತ್ರೆಗಳನ್ನು ತಲುಪಿಸುವಂತಹ ಕೆಲಸ, ಉಸಿರಾಟದ ಸಮಸ್ಯೆ ಇದ್ದವರಿಗೆ ಉಚಿತವಾಗಿ ಆಕ್ಸಿಜನ್ ಕೊಡುವಂತಹ ಕೆಲಸವನ್ನು ಟ್ರಸ್ಟ್ ವತಿಯಿಂದ ಮಾಡಲಾಗಿದೆ ಎಂದರು.
ಕ್ಷೇತ್ರದದಲ್ಲಿ ‘ನಮ್ಮ ಕ್ಲಿನಿಕ್’ ಅನ್ನು ಪ್ರಾರಂಭಿಸಲಾಗಿದೆ. ನಮ್ಮ ಕ್ಲಿನಿಕ್ ನಲ್ಲಿ ಉಚಿತವಾಗಿ ಥೈರಾಯಿಡ್, ಬಿಪಿ, ಶುಗರ್ ಪರೀಕ್ಷೆಯನ್ನು ಮಾಡಿಸಿಕೊಂಡು ಉಚಿತವಾಗಿ ಮಾತ್ರೆಗಳನ್ನು ನೀಡುವ ವ್ಯವಸ್ಥೆ ಇದೆ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಉತ್ತಮ ಆಸ್ಪತ್ರೆಗಳು, ಸರ್ಕಾರಿ ಶಾಲೆ, ಮಹಾನಗರ ಪಾಲಿಕೆ ಶಾಲೆಗಳು, ನವ ನಂದಿನಿ ಉದ್ಯಾನವನ ನಿರ್ಮಾಣ ಹೀಗೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿ ಕ್ಷೇತ್ರದ ಅಭಿವೃದ್ಧಿ ಶ್ರಮಿಸಲಾಗಿದೆ ಎಂದರು.
ಸಭೆಯಲ್ಲಿ ಶ್ರೀನಿವಾಸ್, ಜಯರಾಮ್, ವಾರ್ಡ್ ಅಧ್ಯಕ್ಷ ಮಂಜುನಾಥ್, ವೆಂಕಟೇಶ್ ಮೂರ್ತಿ ಮುರುಳಿ, ಮಲ್ಲಿಕಾರ್ಜುನ, ಸೋಮಣ್ಣ, ಶಿವಣ್ಣ, ಚಂದ್ರಶೇಖರ್, ಸಿದ್ದರಾಜು, ರಮೇಶ್, ಭಾಗ್ಯಮ್ಮ, ಹೇಮಲತಾ, ಸುಧಾ ಮತ್ತು ಸಂದೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.