ಸುದ್ದಿಮೂಲ ವಾರ್ತೆ ಬೀದರ, ಜ.05:
ಬೀದರ ಜಿಲ್ಲೆಯ ಶೈಕ್ಷಣಿಕ ಮಟ್ಟ ಸುಧಾರಿಸುವ ನಿಟ್ಟಿಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಿಿಯಾಶೀಲರಾಗಿ ತೊಡಗಿಸಿಕೊಳ್ಳಬೇಕು. ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಪರೀಕ್ಷೆಗಳು ಹತ್ತಿಿರಗೊಳ್ಳುತ್ತಿಿವೆ. ಲಿತಾಂಶ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆೆ ಸೂಚಿಸಿದರು.
ಸೋಮವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಕರ್ನಾಟಕ ಅಭಿವೃದ್ಧಿಿ ಕಾರ್ಯಕ್ರಮಗಳ ತ್ರೈಮಾಸಿಕ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ವರ್ಷ ಕೊನೆಗೊಳ್ಳುವ ಹಂತದಲ್ಲಿದೆ. 5 ದಿನದೊಳಗಾಗಿ ಪ್ರಸ್ತಾಾವನೆ ಕಳಿಸಬೇಕೆಂದು ಸಚಿವರು ತಿಳಿಸಿದರು.
ಜಿಲ್ಲೆಯಲ್ಲಿ 277 ಕೋಟಿ ರೂ. ಬೆಳೆ ಪರಿಹಾರವನ್ನು 1.92 ಲಕ್ಷ ರೈತರಿಗೆ ಈಗಾಗಲೇ ಅವರ ಖಾತೆಗೆ ಜಮೆ ಆಗಿವೆ. 5 ಸಾವಿರ ರೈತರಿಗೆ 80 ಲಕ್ಷ ರೂ. ವಿವಿಧ ತಾಂತ್ರಿಿಕ ಕಾರಣಗಳಿಂದ ಜಮೆ ಆಗಬೇಕಿದೆ. ಅಧಿಕಾರಿಗಳು ನಿರಂತರವಾಗಿ ಬಗೆಹರಿಸಲು ಶ್ರಮಿಸುತ್ತಿಿದ್ದಾರೆ ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ್, ವಿಧಾನ ಪರಿಷತ್ ಶಾಸಕರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಭೀಮರಾವ ಬಿ.ಪಾಟೀಲ್, ಕರ್ನಾಟಕ ಮಿನುಗಾರಿಕೆ ಅಭಿವೃದ್ಧಿಿ ನಿಗಮದ ಅಧ್ಯಕ್ಷ ಮಾಲಾ ಬಿ.ನಾರಾಯಣರಾವ, ಬೀದರ ಜಿಲ್ಲಾ ಗ್ಯಾಾರಂಟಿ ಯೋಜನೆಗಳ ಅನುಷ್ಠಾಾನ ಸಮಿತಿಯ ಅಧ್ಯಕ್ಷ ಅಮೃತರಾವ ಚಿಮಕೋಡೆ, ಜಿಲ್ಲಾಧಿಕಾರಿ ಶಿಲ್ಪಾಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಜಿಲ್ಲಾ ಪೆಲೀಸ್ ವರಿಷ್ಠಾಾಧಿಕಾರಿ ಪ್ರದೀಪ ಗುಂಟಿ, ಅರಣ್ಯ ಉಪ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿಿ, ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್ ಸೇರಿದಂತೆ ಇತರರು ಉಪಸ್ಥಿಿತರಿದ್ದರು.
ಎಸ್ಎಸ್ಎಲ್ಸಿ, ಪಿಯುಸಿ ಲಿತಾಂಶ ಸುಧಾರಣೆಗೆ ಸಚಿವ ಖಂಡ್ರೆ ಸೂಚನೆ

