ಸುದ್ದಿಮೂಲ ವಾರ್ತೆ ಬೆಂಗಳೂರು, ಜ.05:
ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ದಾಖಲೆಗಳನ್ನು ಡಿಜಟಲೀಕರಣ ಮಾಡುವ ಭೂ ಸುರಕ್ಷಾ ಯೋಜನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಚಾಲನೆ ನೀಡಿದರು.
ಬೆಂಗಳೂರು ಉತ್ತರ ಮತ್ತು ದಕ್ಷಿಣ ಉಪವಿಭಾಗಾಧಿಕಾರಿಗಳ ಕಚೇರಿಯ ಕಂದಾಯ ದಾಖಲಾತಿಗಳ ಸ್ಕ್ಯಾಾನಿಂಗ್ ಮತ್ತು ಡಿಜಿಟಲೀಕರಣಗೊಳಿಸುವ ಭೂ ಸುರಕ್ಷಾ ಯೋಜನೆಯನ್ನು ಬೆಂಗಳೂರು ಕಂದಾಯ ಭವನದಲ್ಲಿ ಇಂದು ಉದ್ಘಾಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲಾಗುತ್ತಿಿದೆ. ಕಳೆದ ವರ್ಷ ಜನವರಿಯಲ್ಲಿ ಎಲ್ಲಾ ತಾಲೂಕು ಕಚೇರಿಗಳ ಮೂಲ ಭೂ ದಾಖಲೆಗಳನ್ನೂ ಸ್ಕ್ಯಾಾನ್ ಮಾಡಿ ಡಿಜಿಟಲೀಕರಿಸಲಾಗಿತ್ತು. ಎಸಿ, ಡಿಸಿ ಕಚೇರಿಗಳಲ್ಲಿರುವ ದಾಖಲೆಗಳ ಸ್ಕ್ಯಾಾನಿಂಗ್ಗೂ ಇಂದಿನಿಂದ ಚಾಲನೆ ನೀಡಲಾಗಿದೆ ಎಂದರು.
ಭೂ ದಾಖಲೆಗಳಲ್ಲಿ ನಕಲಿ ಎಂಟ್ರಿಿಗಳು ಹಾಗೂ ಸುಳ್ಳು ದಾಖಲೆಗಳ ಸೃಷ್ಟಿಿಯನ್ನು ತಡೆಯುವ ಸಲುವಾಗಿ ಭೂ ದಾಖಲೆಗಳ ಡಿಜಿಟಲೀಕರಣ ಮಹತ್ವದ ಹೆಜ್ಜೆೆಯಾಗಿದೆ. ರಾಜ್ಯದಲ್ಲಿ ಕಂದಾಯ ಇಲಾಖೆ ಎಲ್ಲಾ ಮೂಲ ದಾಖಲೆಗಳನ್ನು ಸ್ಕ್ಯಾಾನ್ ಮಾಡಿ ಶಾಶ್ವತವಾಗಿ ಸಂರಕ್ಷಿಸಲಾಗುತ್ತಿಿದೆ. ಈ ಅಭಿಯಾನಕ್ಕೆೆ ಕಳೆದ ಜನವರಿಯಲ್ಲಿ ಚಾಲನೆ ನೀಡಲಾಗಿತ್ತು. ಇದೀಗ 240 ತಾಲೂಕುಗಳ ಪೈಕಿ 70 ತಾಲೂಕುಗಳಲ್ಲಿ ಗಣಕೀಕರಣ ಸಂಪೂರ್ಣವಾಗಿ ಮುಗಿಸಲಾಗಿದೆ. ರಾಜ್ಯಾಾದ್ಯಂತ 100 ಕೋಟಿ ಪುಟಗಳಷ್ಟು ಭೂ ದಾಖಲೆ ಇದ್ದು, 62 ಕೋಟಿ ಪುಟಗಳನ್ನು ಈಗಾಗಲೇ ಸ್ಕ್ಯಾಾನ್ ಮಾಡಿ ಮುಗಿಸಲಾಗಿದೆ. ಮುಂದಿನ ಮೂರು-ನಾಲ್ಕು ತಿಂಗಳಲ್ಲಿ ಎಲ್ಲಾ ಪುಟಗಳನ್ನೂ ಸಂಪೂರ್ಣ ಸ್ಕ್ಯಾಾನ್ ಮಾಡಲಾಗುವುದು ಎಂದರು.
ತಾಲೂಕು ಕಚೇರಿಗಳ ಮೂಲ ದಾಖಲೆ ಸ್ಕ್ಯಾಾನಿಂಗ್ ಪ್ರಗತಿಯ ಹಾದಿಯಲ್ಲಿರುವಾಗಲೇ ಭೂ ಸುರಕ್ಷಾ ಯೋಜನೆಯ ಅಡಿಯಲ್ಲಿ ಉಪ ವಿಭಾಗ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಮೂಲ ಭೂ ದಾಖಲೆಗಳನ್ನೂ ಸ್ಕ್ಯಾಾನ್ ಮಾಡುವ ಕೆಲಸಕ್ಕೂ ಮುಂದಾಗಿ ಈಗಾಗಲೇ ಕಳೆದ ತಿಂಗಳಿನಿಂದ ಕೆಲಸ ಆರಂಭಿಸಿದ್ದು, ಇಂದು ಎಸಿ ಕಚೇರಿಗಳ ಸ್ಕ್ಯಾಾನಿಂಗ್ ಗೆ ಸಾಂಕೇತಿಕವಾಗಿ ಚಾಲನೆ ನೀಡುವ ಮೂಲಕ ಇಡೀ ರಾಜ್ಯಾಾದ್ಯಂತ ಎಸಿ ಡಿಸಿ ಕಚೇರಿಗಳ ಕಂದಾಯ ದಾಖಲೆಗಳ ಗಣಕೀಕರಣಕ್ಕೆೆ ಸಾಂಕೇತಿಕ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಈ ಹಿಂದೆ ಹೊರ ಬಂದಿರುವ ನಕಲಿ ದಾಖಲೆಗಳ ಸೃಷ್ಟಿಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಪ್ರತಿಯೊಂದು ಅನುಮಾನಾಸ್ಪದ ಪ್ರಕರಣಗಳನ್ನು ಕುಲಂಕೂಷವಾಗಿ ಪರಿಶೀಲಿಸಿ ಅಗತ್ಯವಿದ್ದಲ್ಲಿ ೆರೆನ್ಸಿಿಕ್ ಲ್ಯಾಾಬ್ಗೆ ಕಳಿಸಿ ದಾಖಲೆಗಳ ನೈಜತೆ ಕುರಿತು ವರದಿಯನ್ನು ಪಡೆದು ಸೂಕ್ತ ಕ್ರಮ ವಹಿಸಲಾಗುವುದು ಎಂದರು.
ಸ್ಕ್ಯಾಾನಿಂಗ್ ಮೂಲಕ ದಾಖಲೆಗಳನ್ನು ಡಿಜಿಟಲ್ ಮಾದರಿಯಲ್ಲಿ ರಕ್ಷಿಸುವುದರಿಂದ ಭವಿಷ್ಯದಲ್ಲಿ ನಕಲಿ ದಾಖಲೆಗಳ ಸೃಷ್ಟಿಿಗೆ ಕಡಿವಾಣ ಹಾಕಿದಂತಾಗುವುದು. ಕಂದಾಯ ದಾಖಲೆಗಳು ಅಥವಾ ಕಡತಗಳು ಕಳುವಾಗುವುದನ್ನು ಹಾಗೂ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಿಸಿ, ಸಾರ್ವಜನಿಕರ ಕೈಬೆರಳ ತುದಿಯಲ್ಲೇ ಅವರ ಜಮೀನಿನ ದಾಖಲೆ ಸುಲಭವಾಗಿ ಲಭ್ಯವಾಗಿಸುವುದೇ ನಮ್ಮ ಮೂಲ ಉದ್ದೇಶ. ಇಂದು ನಮ್ಮ ಉದ್ದೇಶ ಯಶಸ್ವಿಿಯಾಗಿದ್ದು, ಸಾರ್ವಜನಿಕರು ಭೂ ಸುರಕ್ಷಾ ವೆಬ್ ಸೈಟ್ ಮೂಲಕ ತಮ್ಮ ಮನೆಯಲ್ಲಿದ್ದೇ ಭೂ ದಾಖಲೆಗಳನ್ನು ಪಡೆಯಬಹುದಾಗಿದೆ. ಈಗಾಗಲೇ ಸ್ಕ್ಯಾಾನಿಂಗ್ ಆಗಿರುವ ಎಲ್ಲಾ ದಾಖಲೆಗಳು ಆನ್ಲೈನ್ಲ್ಲಿ ಲಭ್ಯವಿದ್ದು, 36,36,596 ಪುಟಗಳನ್ನು ಸಾರ್ವಜನಿಕರು ಆನ್ಲೈನ್ ಮೂಲಕ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.
ಇನ್ನೂ ಮುಂದೆ ದಾಖಲೆಗಳನ್ನು ಸ್ಕ್ಯಾಾನ್ ಮಾಡುವಾಗ ಅನುಮಾನಾಸ್ಪದವಾದ ದಾಖಲೆಗಳನ್ನು ೆರೆನ್ಸಿಿಕ್ ಮೂಲಕ ತನಿಖೆ ಮಾಡಿಸಿ ಕ್ರಮ ಕೈಗೊಳ್ಳುತ್ತೇವೆ. ರಾಜ್ಯದ ಎಲ್ಲಾ ಎಸಿ, ಡಿಸಿ ಕಚೇರಿಯ ದಾಖಲೆಗಳ ಸ್ಕ್ಯಾಾನಿಂಗ್ ಪ್ರಕ್ರಿಿಯೆಯನ್ನು ಮುಂದಿನ ಮೂರು ತಿಂಗಳಲ್ಲಿ ಮುಗಿಸಲಾಗುವುದು. ಸರ್ವೇ ಇಲಾಖೆ ಹಾಗೂ ನೋಂದಣಿ ಇಲಾಖೆಯಲ್ಲೂ ಸ್ಕ್ಯಾಾನಿಂಗ್ ಕೆಲಸಗಳು ಬಹುತೇಕ ಆರಂಭವಾಗಿದ್ದು, ಈ ಎಲ್ಲಾ ಕೆಲಸಗಳಿಗೆ ರೂ.150 ಕೋಟಿ ಅನುದಾನ ಇದೆ. ಈಗಾಗಲೇ ರೂ.100 ಕೋಟಿ ಖರ್ಚು ಮಾಡಲಾಗಿದೆ ಎಂದರು
ಆನೇಕಲ್, ದೇವನಹಳ್ಳಿಿ ಸೇರಿದಂತೆ ಕೆಲವು ತಾಲೂಕುಗಳಲ್ಲಿ ನಕಲಿ ದಾಖಲೆಗಳನ್ನೂ ಸ್ಕ್ಯಾಾನ್ ಮಾಡಿರುವ ದೂರು ಇದ್ದು 16 ಜನರ ಮೇಲೆ ಎ್ಐಆರ್ ಮಾಡಲಾಗಿದೆ. ಇಂತಹ ಕೆಲಸಕ್ಕೂ ನಿಯಂತ್ರಣ ಹೇರಲಾಗುತ್ತಿಿದೆ. ಆದರೆ, ಸ್ಕ್ಯಾಾನಿಂಗ್ ನಂತರ ಯಾವುದೇ ವಂಚನೆಗೆ ಅವಕಾಶ ಇಲ್ಲ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಠಾರಿಯಾ, ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿಿತರಿದ್ದರು.

