ಪ್ರಾಯೋಗಿಕವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಮಾಂಟೆಸ್ಸರಿಗಳಿಗೆ ಚಾಲನೆ
ಸುದ್ದಿಮೂಲ ವಾರ್ತೆ ಬೆಂಗಳೂರು, ಜು.22:
ರಾಜ್ಯಾಾದ್ಯಂತ ಮೊದಲ ಹಂತದಲ್ಲಿ 5 ಸಾವಿರ ಸರ್ಕಾರಿ ಮಾಂಟೆಸ್ಸರಿಗಳನ್ನು ತೆರೆಯಲು ನಮ್ಮ ಇಲಾಖೆ ಸನ್ನದ್ಧವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿ ವೃದ್ಧಿಿ ಸಚಿವೆ ಲಕ್ಷ್ಮಿಿ ಹೆಬ್ಬಾಾಳ್ಕರ್ ಹೇಳಿದರು.
ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಾಪ್ತಿಿಯ ಪಟ್ಟೆೆಗಾರಪಾಳ್ಯದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿಿ ಯೋಜನೆಯಡಿ ಹೊಸದಾಗಿ ಆರಂಭಿಸಿದ ಸರ್ಕಾರಿ ಮಾಂಟೆಸ್ಸರಿ – ಪೂರ್ವ ಪ್ರಾಾಥಮಿಕ ಕೇಂದ್ರ (ಎಲ್ ಕೆಜಿ, ಯುಕೆಜಿ ತರಗತಿಗಳಿಗೆ ಚಾಲನೆ ನೀಡಿದ ನಂತರ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.
ಸರ್ಕಾರಿ ಮಾಂಟೆಸ್ಸರಿಗಳನ್ನು ಈಗ ಪ್ರಾಾಯೋಗಿಕವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಅಂಗನವಾಡಿ ಕೇಂದ್ರಗಳಲ್ಲಿ ಆರಂಭಿಸಲಾಗುತ್ತಿಿದೆ.
ಮುಂದಿನ ದಿನಗಳಲ್ಲಿ 5 ಸಾವಿರ ಸರ್ಕಾರಿ ಮಾಂಟೆಸ್ಸರಿಗಳನ್ನು ಹಂತ ಹಂತವಾಗಿ ರಾಜ್ಯದ ಎಲ್ಲ ಅಂಗನವಾಡಿಗಳಲ್ಲಿ ಆರಂಭಿಸಲಾಗುವುದು ಎಂದರು.
ಗುಣಮಟ್ಟದ ಶಿಕ್ಷಣ, ಪೌಷ್ಠಿಿಕ ಆಹಾರ ಎಲ್ಲಾ ವರ್ಗದ ಮಕ್ಕಳಿಗೂ ದೊರೆಯಬೇಕೆಂಬ ಆಶಯದಿಂದ ರಾಜ್ಯ ಸರ್ಕಾರ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸಿದೆ ಎಂದರು.
ರಾಜ್ಯದಲ್ಲಿ ಪೂರ್ವ ಪ್ರಾಾಥಮಿಕ ತರಗತಿಗಳನ್ನು ಶಿಕ್ಷಣ ಇಲಾಖೆಯಿಂದ ಆರಂಭಿಸುವ ಯೋಜನೆ ಇತ್ತು. ಆದರೆ, ಇದಕ್ಕೆೆ ಅಂಗನವಾಡಿ ಕಾರ್ಯಕರ್ತೆಯರು ಹೋರಾಟ ನಡೆಸಿದರು. ಶಿಕ್ಷಣ ಇಲಾಖೆ ಎಲ್ ಕೆಜಿ, ಯುಕೆಜಿ ಆರಂಭಿಸಿದರೆ ಅಂಗನವಾಡಿಯಿಂದ ಮಕ್ಕಳು ದೂರವಾಗುತ್ತಾಾರೆ. ಇದನ್ನು, ಮಹಿಳಾ ಮತ್ತು ಮಕ್ಕಳ ಕಲ್ಯಾಾಣ ಇಲಾಖೆಯಿಂದಲೇ ಆರಂಭಿಸಬೇಕು ಎಂದು ಒತ್ತಾಾಯಿಸಿದ್ದರು. ಕಾರ್ಯಕರ್ತೆಯರ ಒತ್ತಡದ ಹಿನ್ನೆೆಲೆ ಅಂಗನವಾಡಿಯಲ್ಲೇ ಎಲ್ ಕೆಜಿ, ಯುಕೆಜಿ ಆರಂಭಿಸಲಾಗಿದೆ ಎಂದರು.
ಇತ್ತೀಚೆಗೆ ಖಾಸಗಿ ಮಾಂಟೆಸ್ಸರಿಗೆ ವರ್ಷಕ್ಕೆೆ 80 ರಿಂದ 1 ಲಕ್ಷ ರೂಪಾಯಿವರೆಗೆ ಹಣ ನೀಡಬೇಕಾದ ಪರಿಸ್ಥಿಿತಿ ಇದೆ. ಅಷ್ಟೊೊಂದು ದುಬಾರಿ ಹಣವನ್ನು ಕೊಟ್ಟು ಜನಸಾಮಾನ್ಯರು ತಮ್ಮ ಮಕ್ಕಳನ್ನು ಮಾಂಟೆಸ್ಸರಿಗಳಿಗೆ ಕಳುಹಿಸಲು ಸಾಧ್ಯವಿದೆಯೇ ಪ್ರಶ್ನಿಿಸಿದ ಸಚಿವರು, ದುಬಾರಿ ಶುಲ್ಕಕ್ಕೆೆ ಕಡಿವಾಣ ಹಾಕಲು, ಗುಣಮಟ್ಟದ ಶಿಕ್ಷಣ ಮತ್ತು ಪೌಷ್ಠಿಿಕ ಆಹಾರ ಪ್ರತಿ ಮಗುವಿಗೂ ದೊರೆಯಬೇಕೆಂಬುದು ನಮ್ಮೆೆಲ್ಲರ ಆಶಯ. ಹಾಗಾಗಿ ಉಚಿತವಾಗಿ ಮಾಂಟೆಸ್ಸರಿ ತರಗತಿಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.
ಸರ್ಕಾರಿ ಮಾಂಟೇಸ್ಸರಿಗಳಲ್ಲಿ ಕನ್ನಡ, ಇಂಗ್ಲಿಿಷ್ ಎರಡೂ ಮಾಧ್ಯಮಗಳಲ್ಲೂ ಶಿಕ್ಷಣ ನೀಡಲಾಗುವುದು. ಮಕ್ಕಳಿಗೆ 1 ಜೊತೆ ಯೂನಿಾರಂ, 1 ಬ್ಯಾಾಗ್ ಮತ್ತು ಪೆನ್ಸಿಿಲ್ ಬಾಕ್ಸ್ ನೀಡಲಾಗುವುದು. ಮಕ್ಕಳ ಮುಂದಿನ ಶೈಕ್ಷಣಿಕ ಮುನ್ನಡೆಗೆ ಸಹಾಯವಾಗಲು ಇಲ್ಲೇ ಟಿಸಿ ಕೂಡ ನೀಡಲಾಗುವುದು. ಈ ಮಾಂಟೆಸ್ಸರಿಗಳಲ್ಲಿ ಪಿಯುಸಿ, ಪದವಿ, ಸ್ನಾಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಹಾಗೂ ಈಗಾಗಲೇ ಅಗತ್ಯ ತರಬೇತಿ ಪಡೆದಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಮಾತ್ರ ಬೋಧನೆ ಮಾಡಲು ಗುರುತಿಸಲಾಗಿದೆ ಎಂದು ಸಚಿವರು ಹೇಳಿದರು.
ಕಾರ್ಯಕ್ರಮದಲ್ಲಿ ವಿಜಯನಗರ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಇಲಾಖೆಯ ನಿರ್ದೇಶಕ ಎನ್.ಸಿದ್ದೇಶ್ವರ್, ವಿಕಲಾಂಗ ಇಲಾಖೆಯ ಆಯುಕ್ತ ದಾಸ್ ಸೂರ್ಯವಂಶಿ, ಜಂಟಿ ನಿರ್ದೇಶಕರು ಹಾಗೂ ಸಚಿವರ ವಿಶೇಷ ಕರ್ತವ್ಯಾಾಧಿಕಾರಿ ಬಿ.ಎಚ್. ನಿಶ್ಚಲ್ ಸೇರಿದಂತೆ ಮತ್ತಿಿತರ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿಿತರಿದ್ದರು.
ಈ ವೇಳೆ ವಿಜಯನಗರ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ವಿಕಲಾಂಗ ಇಲಾಖೆಯ ಆಯುಕ್ತರಾದ ದಾಸ್ ಸೂರ್ಯವಂಶಿ, ಸಚಿವರ ವಿಶೇಷ ಕರ್ತವ್ಯಾಾಧಿಕಾರಿ ಬಿ.ಎಚ್. ನಿಶ್ಚಲ್, ಸೇರಿದಂತೆ ಇಲಾಖೆಯ ಅಧಿಕಾರಿಗಳು, ಕಾವೇರಿಪುರ ವಾರ್ಡ್ ನ ಪ್ರಮುಖರು ಉಪಸ್ಥಿಿತರಿದ್ದರು.
ಕಳಪೆ ಆಹಾರ ಪೂರೈಸಿದರೆ ನಿರ್ದಾಕ್ಷಿಣ್ಯ ಕ್ರಮ
ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆಯಾದರೆ ಆಯಾಯ ಡಿಡಿ, ಸಿಡಿಪಿಓಗಳನ್ನು ಸಸ್ಪೆೆಂಡ್ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಾಳ್ಕರ್ ಎಚ್ಚರಿಕೆ ನೀಡಿದರು.
ಮಕ್ಕಳ ಭವಿಷ್ಯಕ್ಕೆೆ ನಮ್ಮ ಸರ್ಕಾರ ದಿಟ್ಟ ಹೆಜ್ಜೆೆಗಳನ್ನು ಇಟ್ಟಿದೆ. ನಮ್ಮ ಇಲಾಖೆ ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ಕೃಷ್ಟವಾದ ಯೋಜನೆಗಳನ್ನು ಜನರಿಗೆ ನೀಡಲಿದೆ. ಇದಕ್ಕೆೆ ತಕ್ಕಂತೆ, ನೀವು ಕೂಡ ನಿಮ್ಮ ಕೌಶಲ್ಯ ಹೆಚ್ಚಿಿಸಿಕೊಂಡು, ಗುಣಮಟ್ಟದ ಶಿಕ್ಷಣ ನೀಡಲು ಸನ್ನದ್ದರಾಗಬೇಕು. ಅಂಗನವಾಡಿಗೆ ಬರುವ ಮಕ್ಕಳನ್ನು ನಿಮ್ಮ ಸ್ವಂತ ಮಕ್ಕಳಂತೆ ಬೆಳೆಸಬೇಕು ಎಂದು ಅಂಗನವಾಡಿ ಕಾರ್ಯಕರ್ತರಿಗೆ ಸಚಿವರು ಸಲಹೆ ನೀಡಿದರು.

