ಸುದ್ದಿಮೂಲ ವಾರ್ತೆ
ಮೈಸೂರು, ಅ.15: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಆಹಾರ ವ್ಯರ್ಥವಾಗದಂತೆ ಸರ್ಕಾರದಿಂದ ನಿಯಮಾವಳಿಗಳನ್ನು ರೂಪಿಸಿ ಆಹಾರ ವ್ಯರ್ಥವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಹಮ್ಮಿಕೊಂಡಿರುವ ದಸರಾ ಆಹಾರ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಮೂರನೇ ಒಂದು ಭಾಗದಷ್ಟು ಆಹಾರ ವ್ಯರ್ಥವಾಗುತ್ತಿದೆ. ತಿನ್ನುವ ಹಕ್ಕು ನಮಗಿದೆ, ಆದರೆ ಬಿಸಾಡುವ ಹಕ್ಕು ನಮಗಿಲ್ಲ. ಆಹಾರವನ್ನು ವ್ಯರ್ಥ ಮಾಡಬೇಡಿ ಎಂದು ಮನವಿ ಮಾಡಿದರು.
ದಸರಾ ಆಹಾರ ಮೇಳದಲ್ಲಿ 150 ಮಳಿಗೆಗಳನ್ನು ತೆರೆಯಲಾಗಿದೆ. ಆಹಾರವನ್ನು ಯಾರು ಕೂಡ ವ್ಯರ್ಥ ಮಾಡಬಾರದು. ಉಪಯುಕ್ತರು ಆಹಾರವನ್ನು ಬಳಸಿಕೊಳ್ಳುವುದು ಸೂಕ್ತ. ಇದರಿಂದ ಹೆಚ್ಚಿನ ರೀತಿ ಆಹಾರ ಪೋಲಾಗುವುದನ್ನು ತಪ್ಪಿಸಬಹುದು ಎಂದರು.