ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.10:
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾನಪದ ಕಲಾವಿದರನ್ನು ಪ್ರೋೋತ್ಸಾಾಹಿಸುವ ನಿಟ್ಟಿಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಾಣ ಸಚಿವ ಶಿವರಾಜ ತಂಗಡಗಿ ಹೇಳಿದರು.
ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋೋತ್ತರ ಕಲಾಪದಲ್ಲಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರ ಶಾಸಕ ಡಾ.ಅಶ್ವತ್ಥ ನಾರಾಯಣ ಸಿ.ಎನ್. ಅವರ ಪ್ರಶ್ನೆೆಗೆ ಉತ್ತರಿಸಿದ ಸಚಿವ ಶಿವರಾಜ ತಂಗಡಗಿ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2022-23ನೇ ಸಾಲಿನಲ್ಲಿ ಸಂಕಷ್ಟ ಸ್ಥಿಿತಿಯಲ್ಲಿರುವ 11,154 ಕಲಾವಿದರಿಗೆ ತಿಂಗಳಿಗೆ 2500 ರೂ. ನಂತೆ ಮಾಸಾಶನ ನೀಡಲಾಗಿದೆ. ಅಲ್ಲದೆ 410 ಜನ ಮೃತ ಕಲಾವಿದರ ಪತ್ನಿಿಯರಿಗೂ ಮಾಸಿಕ 500 ರೂ. ಮಾಸಾಶನ ಪಾವತಿಸಲಾಗುತ್ತಿಿದೆ.
ಪ್ರಸಕ್ತ ವರ್ಷದ ನವೆಂಬರ್ ತಿಂಗಳಿನವರೆಗೂ ಮಾಸಾಶನ ಪಾವತಿಸಲಾಗಿದೆ. ಮಾಸಾಶನ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ 1896 ಕಲಾವಿದರು, ಸಾಹಿತಿಗಳ ಅರ್ಜಿ ಬಾಕಿ ಇದ್ದು ಇವರ ದಾಖಲೆಗಳನ್ನು ಪರಿಶೀಲಿಸಲಾಗುತ್ತಿಿದೆ. ಇದೇ ವೇಳೆ ಮಾಸಾಶನ ಸಿಗದೇ ಇದ್ದಲ್ಲಿ ತಮ್ಮ ಗಮನಕ್ಕೆೆ ತಂದರೆ ಅವರಿಗೂ ಮಾಸಾಶನ ಮಂಜೂರು ಮಾಡಲಾಗುವುದು ಎಂದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ನಿಮ್ಮ ಇಲಾಖೆಗೆ ಶೇ.18 ಅನುದಾನ ಕಡಿತ ಮಾಡಲಾಗಿದೆ. ನಮ್ಮ ಕಲೆ ಸಂಸ್ಕೃತಿಯ ಕಲಾವಿದರನ್ನು ಉಳಿಸಲು ಅನುದಾನ ಅಗತ್ಯ. ಅನುದಾನ ಕಡಿತದ ನಡುವೆಯೂ ಹೇಗೆ ಮಾಡುತ್ತೀರಾ ಎಂದು ಪ್ರಶ್ನಿಿಸಿ ಈ ಹಿಂದೆ ಜಿಲ್ಲೆಗಳಲ್ಲಿ ಜಾನಪದ ಜಾತ್ರೆೆ ಕಾರ್ಯಕ್ರಮಗಳನ್ನು ಏರ್ಪಡಿಸಿ, ಸ್ಥಳೀಯ ಕಲಾವಿದರಿಗೆ ಪ್ರೋೋತ್ಸಾಾಹ ನೀಡಲಾಗುತ್ತಿಿತ್ತು, ಈ ಕಾರ್ಯಕ್ರಮ ಮುಂದುವರೆಸುವಂತೆ ಆಗ್ರಹಿಸಿದರು.
ಇದಕ್ಕೆೆ ಉತ್ತರಿಸಿದ ಸಚಿವ ಶಿವರಾಜ್ ತಂಗಡಗಿ, ಜಾನಪದ ಜಾತ್ರೆೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿಲ್ಲ. ಈ ವರ್ಷ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಲಾವಿದರಿಗೆ ಪ್ರೋೋತ್ಸಾಾಹ ನೀಡಬೇಕು, ಸ್ಥಳೀಯ ಕಲೆಗಳನ್ನು, ಉಳಿಸಿ ಬೆಳೆಸುವ ಉದ್ದೇಶದಿಂದ ಚಿತ್ರದುರ್ಗ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ದೊಡ್ಡ ಮಟ್ಟದಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದ್ದು, ದಿನಾಂಕಗಳನ್ನು ಶೀಘ್ರ ನಿಗದಿಪಡಿಸಲಾಗುವುದು ಎಂದರು.
ಮಂಗಳೂರಿನಲ್ಲಿಯೂ ಕಾರ್ಯಕ್ರಮ ಆಯೋಜಿಸಬೇಕು ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದಾಗ ಸ್ಪಂದಿಸಿದ ಸಚಿವರು, ಮಂಗಳೂರಿನಲ್ಲಿಯೂ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ಭರವಸೆ ನೀಡಿದರು.
ವಿಶೇಷ ಕಾರ್ಯಕ್ರಮಗಳ ಆಯೋಜನೆ – ಸಚಿವ ಶಿವರಾಜ್ ತಂಗಡಗಿ ಪ.ಜಾತಿ, ಪ.ಪಂಗಡದ ಕಲಾವಿದರಿಗೆ ಪ್ರೋತ್ಸಾಹ

