ಸುದ್ದಿಮೂಲ ವಾರ್ತೆ ಬಳ್ಳಾಾರಿ, ಅ.15:
ಡಿಸೆಂಬರ್ನಲ್ಲಿ ಬಳ್ಳಾಾರಿ ಸೂಪರ್ ಸ್ಪೆೆಷಾಲಿಟಿ ಆಸ್ಪತ್ರೆೆ ಉದ್ಘಾಾಟನೆಗೊಳಿಸಲಾಗುವುದು ಎಂದು ಸಚಿವರಾದ ಡಾ.ಶರಣ ಪ್ರಕಾಶ ಆರ್.ಪಾಟೀಲ ಅವರು ಹೇಳಿದ್ದಾಾರೆ.
ನಗರದ ಸುಧಾಕ್ರಾಾಸ್ ಬಳಿಯ ಬಳ್ಳಾಾರಿ ಸೂಪರ್ ಸ್ಪೆೆಷಾಲಿಟಿ ಆಸ್ಪತ್ರೆೆಗೆ ಬುಧವಾರ ಭೇಟಿ ನೀಡಿ, ಬಾಕಿ ಕಾಮಗಾರಿಗಳ ಕುರಿತು ವೈದ್ಯಾಾಧಿಕಾರಿಗಳೊಂದಿಗೆ ಸಭೆ ಸಭೆಯಲ್ಲಿ ಅವರು ಮಾತನಾಡಿದರು.
450 ಹಾಸಿಗೆಯುಳ್ಳ ಈ ಆಸ್ಪತ್ರೆೆಯು 2008 ರಲ್ಲಿ ಮಂಜೂರಾಗಿತ್ತು. ವಿವಿಧ ಕಾರಣಗಳಿಂದ ನೆನೆಗುದಿಗೆ ಬಿದ್ದಿದ್ದ ಆಸ್ಪತ್ರೆೆಯನ್ನು 2018 ರಲ್ಲಿ ಮರು ಟೆಂಡರ್ ಕರೆಯಲಾಗಿತ್ತು. ಈಗ ನಮ್ಮ ಸರ್ಕಾರಾವಧಿಯಲ್ಲೇ ಪೂರ್ಣಗೊಳಿಸಿ ಡಿಸೆಂಬರ್ ತಿಂಗಳಲ್ಲಿ ಉದ್ಘಾಾಟನೆಗೊಳಿಸಿ ಸಾರ್ವಜನಿಕರಿಗೆ ಅರ್ಪಿಸಲಾಗುವುದು ಎಂದರು.
ಕಾರ್ಡಿಯಾಲಜಿ, ಪ್ಲಾಾಸ್ಟಿಿಕ್ ಸರ್ಜರಿ, ಡಯಾಲಿಸಿಸ್ ಯಂತ್ರ, ಆರ್ಒ ಪ್ಲಾಾಂಟ್, ಬೆಡ್ ವ್ಯವಸ್ಥೆೆ ಹಾಗೂ ಇತರೆ ಸಾಮಾಗ್ರಿಿ ಅಳವಡಿಕೆ ಕಾರ್ಯ ಪೂರ್ಣಗೊಳಿಸಿ ಜನರಿಗೆ ಉಪಯುಕ್ತ ಆರೋಗ್ಯ ಸೇವೆ ನೀಡಲು ಮುಂದಾಗಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ನ್ಯೂರಾಲಜಿ ಸೇರಿದಂತೆ ಆಸ್ಪತ್ರೆೆಯಲ್ಲಿ ಖಾಲಿಯಿರುವ ವಿವಿಧ ವಿಭಾಗಗಳ ವೈದ್ಯರು ಮತ್ತು ಗ್ರೂಪ್-ಬಿ, ಸಿ ಹುದ್ದೆೆಗಳನ್ನು ಗುತ್ತಿಿಗೆ ಆಧಾರದಡಿ ಪಡೆಯಲು ಕೂಡಲೇ ಕ್ರಮವಹಿಸಬೇಕು ಎಂದು ನಿರ್ದೇಶಕರಿಗೆ ಸೂಚನೆ ನೀಡಿದರು.
ಸರ್ಕಾರದ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿಿರುವ ಈ ಆಸ್ಪತ್ರೆೆಯು, ಅನುದಾನದ ಕೊರತೆಯಾದಲ್ಲಿ ಡಿಎಂಎ್, ಕೆಎಂಇಆರ್ಸಿ ಹಾಗೂ ಸಿಎಸ್ಆರ್ ಅನುದಾನಕ್ಕಾಾಗಿ ಜಿಲ್ಲಾಾಧಿಕಾರಿ ಗಮನಕ್ಕೆೆ ತರಬೇಕು ಎಂದರು.
ಸಭೆಯಲ್ಲಿ ಬಿಎಂಸಿಆರ್ಸಿ, ಟಿಬಿ ಆಸ್ಪತ್ರೆೆಗಳಲ್ಲಿ ಕೆಎಂಇಆರ್ಸಿ ಯೋಜನೆಯಡಿ ಕೈಗೊಂಡ ವಿವಿಧ ಕಾಮಗಾರಿಗಳ ಕುರಿತು ಸುದೀರ್ಘ ಚರ್ಚೆ ನಡೆಸಿ ಮಾಹಿತಿ ಪಡೆದುಕೊಂಡರಲ್ಲದೇ, ಇದೇ ವೇಳೆ ಅಗತ್ಯ ಸಲಹೆ ಸೂಚನೆ ನೀಡಿದರು.