ಸುದ್ದಿಮೂಲ ವಾರ್ತೆ
ಮೈಸೂರು, ಅ.3:ಚುನಾವಣೆ ಬಂದಾಗಲೇ ಬಿಜೆಪಿಯವರಿಗೆ ಪಾಕಿಸ್ತಾನ, ಮುಸ್ಲಿಂ, ಗಣೇಶ, ಮಸೀದಿ, ಆಂಜನೇಯ ನೆನಪಾಗುತ್ತಾ?ಎಂದು ಸಚಿವ ಸಚಿವ ಶಿವರಾಜ ತಂಗಡಗಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಮಂಗಳವಾರ ಸುದ್ದಿಗಾರೊಂದಿಗೆ ಮಾತನಾಡಿದ ಸಚಿವರು, ಇವೆಲ್ಲಾ ಚುನಾವಣಾ ಗಿಮಿಕ್ ವಿಧಾನಸಭಾ ಚುನಾವಣೆಯಂತೆ ಲೋಕಸಭೆ ಚುನಾವಣೆಯಲ್ಲೂ ಪಾಠ ಕಲಿಸುತ್ತಾರೆ. ಚುನಾವಣೆ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದುಗಳು ನೆನಪಾಗ್ತಾರೆ ಎಂದು ಟೀಕಿಸಿದರು.
ಲೋಕಸಭಾ ಚುನಾವಣೆಗೆ ಒಂದು ವರ್ಷವಿದೆ. ಕಳೆದ ಬಿಜೆಪಿ ಸರ್ಕಾರ ಇದ್ದಾಗ ಬಿಜೆಪಿ ರಾಜ್ಯಾಧ್ಯಕ್ಷರ ಕಾರು ಇಳಿಸಿ ಓಡಿಸಿದರು, ಬಿಜೆಪಿ ಅವಧಿಯಲ್ಲಿ ಹತ್ಯೆಗಳು ನಡೆದಿಲ್ಲವೇ? ಶಿವಮೊಗ್ಗ ಗಲಾಟೆ ಬಗ್ಗೆ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದೆ. ತಪ್ಪಿತಸ್ತರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದರು.
ಸಂಕ್ರಾಂತಿ ನಂತರ ಸರ್ಕಾರ ಬೀಳುತ್ತೆ ಎಂಬ ಸಿ.ಪಿ ಯೋಗಿಶ್ವರ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿ ಮಂದಿ ಹಗಲುಗನಸು ಕಾಣುತ್ತಿದ್ದಾರೆ. ಸರ್ಕಾರ ಸುಭದ್ರವಾಗಿದೆ, ಜನರಿಗೆ ಒಳ್ಳೆಯ ಆಡಳಿತ ಕೊಡಲಾಗುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯವರಿಗೆ ಜನ ಹೇಗೆ ಉತ್ತರ ಕೊಟ್ಟಿದ್ದಾರೆ. ಅದೇ ರೀತಿ ಲೋಕಸಭೆ ಚುನಾವಣೆಯಲ್ಲೂ ಉತ್ತರ ಕೊಡುತ್ತಾರೆ. ರಾಜ್ಯ ಸರ್ಕಾರದಲ್ಲಿ ವೀರಶೈವ ಲಿಂಗಾಯತ ಅಧಿಕಾರಿಗಳ ಕಡೆಗಣನೆ ಮಾಡಿಲ್ಲ ಎಂದು ಹೇಳಿದರು.