ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ, ಜೂ 16 : ತಾಲ್ಲೂಕಿನ ಅಬ್ಲೂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾರತ್ ನಿರ್ಮಾಣ್ ರಾಜೀವ್ ಗಾಂಧಿ ಸೇವಾ ಕೇಂದ್ರ ಶಂಕುಸ್ಥಾಪನೆ ಮತ್ತು ಗುಡಿಹಳ್ಳಿ ಮತ್ತು ಜಯಂತಿ ಗ್ರಾಮದಲ್ಲಿ ಮಾದರಿ ಅಂಗನವಾಡಿ ಕಟ್ಟಡಗಳ ಉದ್ಘಾಟನಾ ಹಾಗೂ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಶಿಡ್ಲಘಟ್ಟ ಶಾಸಕ ಬಿ.ಎನ್. ರವಿಕುಮಾರ್ ಅವರು ಟೇಪ್ ಕತ್ತರಿಸುವ ಮೂಲಕ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು,ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ಅಬ್ಲೂಡು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೀಣಾ ಲ. ಹಡಪದ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ನಿರ್ಮಲಾ ಬೈರೇಗೌಡ, ಉಪಾಧ್ಯಕ್ಷ ಸಿ.ಎಂ ನಾರಾಯಣಸ್ವಾಮಿ, ಸದಸ್ಯರಾದ ತಾತಹಳ್ಳಿ ಶ್ರೀನಾಥ್, ಚಾಗೆ ಕೆ.ಹರೀಶ್, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.