ಸುದ್ದಿಮೂಲ ವಾರ್ತೆ
ಮಾಲೂರು, ಏ.18: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿ.ಜೆ.ಪಿ.ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನ ಬೇಸತ್ತಿದ್ದು, ಪ್ರಸ್ತುತ ಚುನಾವಣೆಯಲ್ಲಿ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ಭವಿಷ್ಯ ನುಡಿದರು.
ತಾಲ್ಲೂಕು ಆಡಳಿತ ಸೌಧದಲ್ಲಿ ಸೋಮವಾರ ತಮ್ಮ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಾ ನನ್ನ ಮೇಲೆ ಕಾಂಗ್ರೆಸ್ ಪಕ್ಷ ಹಾಗೂ ವರಿಷ್ಠರು ನಂಬಿಕೆ ಇಟ್ಟು ಟಿಕೆಟ್ ನೀಡಿದ್ದು,ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದೆ. ಕಾಂಗ್ರೆಸ್ ಪಕ್ಷದಲ್ಲಿನ ಮುಖಂಡರ ಹಾಗೂ ಕಾರ್ಯಕರ್ತರ ಒಗ್ಗಟ್ಟೇ ನಮ್ಮ ಬಲ ಹಾಗೂ ಗೆಲುವು. ಬೇರೆ ಪಕ್ಷಗಳ ಬಗ್ಗೆ ನಮಗೆ ಯಾವುದೇ ಭಯವಿಲ್ಲವೆಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿ.ಜೆ.ಪಿ.ಯ ಶೇ 40 ರಷ್ಟು ಕಮೀಷನ್ ಪಡೆದ ಭ್ರಷ್ಟಾಚಾರಕ್ಕೆ ಹಾಗೂ ಅವರಲ್ಲಿನ ಗುಂಪುಗಾರಿಕೆ,ಕಚ್ಚಾಟಕ್ಕೆ ರಾಜ್ಯದ ಜನತೆ ಬೇಸತ್ತಿದ್ದು,ಬಿ.ಜೆ.ಪಿ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ತೀರ್ಮಾನ ಮಾಡಿದ್ದಾರೆಂದರು.
ರಾಜ್ಯದಲ್ಲಿ 150 ಸ್ಥಾನಗಳನ್ನು ಗಳಿಸುವ ಮೂಲಕ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂಶಯ ಇಲ್ಲ. ಹಾಗೆಯೇ ಜಿಲ್ಲೆಯಲ್ಲಿ 6 ಸ್ಥಾನಗಳಲ್ಲಿ ವಿಜಯ ಸಾಧಿಸಿ ಜಯಭೇರಿ ಬಾರಿಸಲಿದೆಯೆಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎ.ನಾಗರಾಜು,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ್, ಕೆಪಿಸಿಸಿ ಸದಸ್ಯ ಅಂಜನಿ ಸೋಮಣ್ಣ, ಪ್ರದೀಪ್ ರೆಡ್ಡಿ,ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ರತ್ನಮ್ಮ ನಂಜೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಮಧುಸೂದನ್,ವಿಜಯನರಸಿಂಹ,ಯೂತ್ ಕಾಂಗ್ರೆಸ್ ಅಧ್ಯಕ್ಷ
ತನ್ವೀರ್ ಅಹಮದ್, ಮುಖಂಡರುಗಳಾದ ಕ್ಷೇತ್ರನಹಳ್ಳಿ ವೆಂಕಟೇಶ್,ಬ್ಯಾಲಹಳ್ಳಿ ರಮೇಶ್,
ಬಾಳಿಗಾನಹಳ್ಳಿ ಶ್ರೀನಿವಾಸ್,ನಾಣಿ ನಾರಾಯಣಸ್ವಾಮಿ, ಶಬ್ಬೀರ್,ವಸಂತ್, ಹರೀಶ್, ಸೇರಿದಂತೆ ಇನ್ನಿತರರಿದ್ದರು.