ಸುದ್ದಿಮೂಲ ವಾರ್ತೆ ಮಸ್ಕಿ, ೆ.17:
ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆೆಯಾಗದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮಸ್ಕಿಿ ಶಾಸಕ ಆರ್. ಬಸನಗೌಡ ತುರವಿಹಾಳ ಸೂಚನೆ ನೀಡಿದರು.
ಪಟ್ಟಣದ ತಾ ಪಂ ಸಭಾಂಗಣದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆ ಕುರಿತು ಹಮ್ಮಿಿಕೊಂಡಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಾಮೀಣ ಭಾಗದಲ್ಲಿ ಏಪ್ರಿಿಲ್ ತಿಂಗಳ ಅಂತ್ಯದವರೆಗೂ ನೀರಿನ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು, ಬೋರ್ವೆಲ್ಗಳ ನೀರಿನ ಮಟ್ಟ ಪರಿಶೀಲಿಸಬೇಕು. ನೀರಿನ ಮಿತಬಳಕೆ ಹಾಗೂ ಕಾಯ್ದಿಿಟ್ಟುಕೊಳ್ಳುವುದಕ್ಕೆೆ ಒತ್ತು ನೀಡಬೇಕು,ಗ್ರಾಾಮೀಣ ಜನತೆಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಅಧಿಕಾರಿಗಳು ಸಮರ್ಥವಾಗಿ ಕೆಲಸ ನಿರ್ವಹಿಸಬೇಕು. ಗ್ರಾಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳಿಂದ ಕಲುಷಿತ ನೀರು ಪೂರೈಕೆಯಾದರೆ, ತಕ್ಷಣ ಸಮಸ್ಯೆೆ ಸರಿಪಡಿಸಲು ಸೂಕ್ತ ಕ್ರಮಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಿಿ.ಅಶುದ್ಧ ನೀರಿನ ಪೂರೈಕೆ ಬಗ್ಗೆೆ ದೂರುಗಳು ಬಂದಲ್ಲಿ ಅಥವಾ ನಿರ್ಲಕ್ಷ್ಯ ವಹಿಸಿದರೆ ಪಿ.ಡಿ.ಒ ಗಳನ್ನು ಹೊಣೆಗಾರರನ್ನಾಾಗಿ ಮಾಡಲಾಗುತ್ತದೆ ಎಂದು ಅವರು ಸೂಚಿಸಿದರು. ಜಲಜೀವನ್ ಮಿಷನ್ ಕಾಮಗಾರಿ ಪ್ರಗತಿ ಪರಿಶೀಲಿಸಿ, ಶೀಘ್ರದಲ್ಲಿ ಕೆಲಸ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. ಗ್ರಾಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಗಳನ್ನು ಪ್ರತಿ ತಿಂಗಳು ನಡೆಸಬೇಕು. ತಾಲೂಕಿನ ಎಲ್ಲ ಗ್ರಾಾಮಗಳಲ್ಲಿನ ನೀರಿನ ಟ್ಯಾಾಂಕ್ಗಳನ್ನು ಶುಚಿಗೊಳಿಸಬೇಕು. ಪ್ರತಿಯೊಂದು ಕುಡಿಯುವ ನೀರಿನ ಮೂಲಗಳಿಂದ ಕಡ್ಡಾಾಯವಾಗಿ ನೀರಿನ ಮಾದರಿಗಳನ್ನು ಪರೀಕ್ಷೆ ಮಾಡಿಸಬೇಕು,ನಿಷ್ಕಾಾಳಜಿ ತೋರಿದರೆ ತಪ್ಪಿಿತಸ್ಥರ ವಿರುದ್ಧ ಯಾವುದೇ ಮುಲ್ಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು.ಕುಡಿಯುವ ನೀರಿನ ಪೈಪ್ಲೈನ್ಗೆ ವಿದ್ಯುತ್ ಸಂಪರ್ಕ ನೀಡಬೇಕು ಇಲ್ಲವಾದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಅವರಿಗೆ ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಿ : ಶಾಸಕ ಆರ್. ಬಸನಗೌಡ ತುರುವಿಹಾಳ

